ಮಕ್ಕಳೆ ಭಾರತಾಂಬೆ ನಿಮ್ಮೊಂದಿಗಿದ್ದಾಳೆ… ಪಾಲಕರನ್ನು ಕಳೆದುಕೊಂಡ ಮಕ್ಕಳೊಂದಿಗೆ ಮೋದಿ ಸಂವಾದ


Team Udayavani, May 30, 2022, 2:52 PM IST

ಮಕ್ಕಳೆ ಭಾರತಾಂಬೆ ನಿಮ್ಮೊಂದಿಗಿದ್ದಾಳೆ… ಪಾಲಕರನ್ನು ಕಳೆದುಕೊಂಡ ಮಕ್ಕಳೊಂದಿಗೆ ಮೋದಿ ಸಂವಾದ

ಕಲಬುರಗಿ : ಹೆತ್ತ ತಂದೆ-ತಾಯಿಗಳ ಪ್ರೀತಿ ಮತ್ತು ಕಾಳಜಿ ಯಾರಿಂದಲೂ ನೀಡಲು ಸಾಧ್ಯವಿಲ್ಲವಾದರೂ ತಾಯಿ ಭಾರತಾಂಬೆ ನಿಮ್ಮೊಂದಿಗಿದ್ದಾಳೆ. ಪಿ.ಎಂ. ಕೇರ್ ಯೋಜನೆ ಮೂಲಕ ನಿಮ್ಮ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮಕ್ಕಳನ್ನು ಉದ್ದೇಶಿಸಿ ಹೇಳಿದರು.

ಸೋಮವಾರ ಕೋವಿಡ್‍ನಿಂದ ತಂದೆ-ತಾಯಿಗಳನ್ನು ಕಳೆದುಕೊಂಡ 18 ವರ್ಷದೊಳಗಿನ ಮಕ್ಕಳೊಂದಿಗೆ ದೆಹಲಿನಿಂದ ವಿಡಿಯೋ ಕಾನ್ಪೆರೆನ್ಸ್ ಮೂಲಕ ಸಂವಾದ ನಡೆಸಿದರು. ಇತ್ತ ಕಲಬುರಗಿಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸಂವಾದಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಸಂಕಷ್ಟದ ದಿನಗಳನ್ನು ಎದುರಿಸಿ ಬಂದಿರುವ ನಿಮ್ಮ ಧೈರ್ಯಕ್ಕೆ ನಾನು ಸೆಲ್ಯೂಟ್ ಹೊಡೆಯುವೆ ಎಂದ ನರೇಂದ್ರ ಮೋದಿ ನಿಮ್ಮ ಕನಸನ್ನು ಸಾಕಾರಗೊಳಿಸುವ ಪಿ.ಎಂ.ಕೇರ್ ಸಣ್ಣ ಪ್ರಯತ್ನವಾಗಿದೆ. ಇಡೀ ದೇಶ, ದೇಶದ ಸಂವೇದನೆ ನಿಮ್ಮೊಂದಿಗೆ ಎಂದು ಮಕ್ಕಳಿಗೆ ಅಭಯ ನೀಡಿದರು.

ಈಗಾಗಲೆ ಮಕ್ಕಳ ಮನೆ ಹತ್ತಿರವಿರುವ ಸರ್ಕಾರಿ ಅಥವಾ ಖಾಸಗಿ ಶಾಲೆಗೆ ಶಿಕ್ಷಣಕ್ಕೆ ಪ್ರವೇಶ ಕಲ್ಪಿಸಲಾಗಿದೆ. ಶಿಕ್ಷಣಕ್ಕೆ ಬೇಕಾದ ಪುಸ್ತಕ, ಬಟ್ಟೆ ಇನ್ನಿತರ ಖರ್ಚು ಸಹ ಸರ್ಕಾರ ನೋಡಿಕೊಳ್ಳಲಿದೆ. ಉನ್ನತ ಶಿಕ್ಷಣದ ಜೊತೆಗೆ ಶೈಕ್ಷಣಿಕ ಸಾಲಕ್ಕೂ ಪಿ.ಎಂ.ಕೇರ್ ನೆರವಾಗಲಿದೆ. 5 ಲಕ್ಷ ರೂ. ವೆರೆಗಿನ ಉಚಿತ ಚಿಕಿತ್ಸೆಯ ಆಯೂಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನೀಡಲಾಗುತ್ತಿದೆ. ಮಕ್ಕಳ ಹೆಸರ ಮೇಲೆ ಅಂಚೆ ಬ್ಯಾಂಕ್‍ನಲ್ಲಿ ಇಡಲಾಗುವ ಇಡಗಂಟಿನ ಮೇಲೆ ಲಭ್ಯವಾಗುವ ಬಡ್ಡಿಯನ್ನು 18 ರಿಂದ 23 ವಯಸ್ಸಿನ ಅವಧಿಯಲ್ಲಿ ಪ್ರತಿ ತಿಂಗಳ ಸ್ಟೇಫಂಡ್ ರೂಪದಲ್ಲಿ ಖರ್ಚಿಗೆ ಹಣ ನೀಡಲಾಗುವುದು. 23 ವರ್ಷದ ನಂತರ ಮುಂದಿನ ಭವಿಷ್ಯಕ್ಕೆ 10 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು. ಇದಲ್ಲದೆ ಸ್ಪಾನ್ಶರಶಿಪ್ ಯೋಜನೆಯಡಿ ಮಾಹೆಯಾನ 2000 ರೂ. ಆರ್ಥಿಕ ಸೌಲಭ್ಯ 2021-22ನೇ ಸಾಲಿನಿಂದ ಜಾರಿಗೊಳಿಸಿದ್ದು, 18 ವರ್ಷದೊಳಗಿನ ಮಕ್ಕಳಿಗೆ ಗರಿಷ್ಠ 3 ವರ್ಷ ಅಥವಾ 18 ವರ್ಷದ ವರೆಗೆ (ಇದರಲ್ಲಿ ಯಾವುದು ಮೊದಲು ಅಲ್ಲಿಯ ವರೆಗೆ) ಇದು ಸಿಗಲಿದೆ ಎಂದು ಪಿ.ಎಂ.ಕೇರ್ ಯೋಜನೆಗಳ ಕುರಿತು ವಿವರಿಸಿದರು.

ಇದನ್ನೂ ಓದಿ : ವೀಲ್‌ಚೇರ್‌ ರೋಮಿಯೋಗೆ ಸಿಕ್ಕ ರೆಸ್ಪಾನ್ಸ್ ಕಂಡು ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ..?

ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 1-12ನೇ ತರಗತಿ ವರೆಗೆ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಡಿಜಿಟಲ್ ಮೋಡ್ ಮೂಲಕ ಸ್ಕಾಲರ್ ಶಿಪ್ ಹಣ ವರ್ಗಾವಣೆ ಗೊಳಿಸಿದರು.

ಇದಕ್ಕೂ ಮುನ್ನ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಮಾತನಾಡಿ ದೇಶದಲ್ಲಿ ಕೋವಿಡ್‍ನಿಂದ ಹೆತ್ತವರನ್ನು ಕಳೆದುಕೊಂಡ 4345 ಮಕ್ಕಳ ರಕ್ಷಣೆಯ ಜವಬ್ದಾರಿ ಸರ್ಕಾರ ವಹಿಸಿಕೊಂಡಿದೆ ಎಂದರು.

ಮಕ್ಕಳಿಗೆ ಕಿಟ್ ವಿತರಣೆ ಮಾಡಿದ ಡಿ.ಸಿ

ಕಾರ್ಯಕ್ರಮದ ಅಂಗವಾಗಿ ಕೋವಿಡ್ ನಿಂದ ತಂದೆ-ತಾಯಿಗಳನ್ನು ಕಳೆದಕೊಂಡ ಕಲಬುರಗಿಯ ಮಕ್ತಂಪೂರ ಪ್ರದೇಶದ 10 ವರ್ಷದ ತನುಷ್ ವಿ.ಎಸ್. ತಂದೆ ದಿ. ವೇದಮೂರ್ತಿ, ಕಲಬುರಗಿಯ ಶಾಂತಿ ನಗರದ 14 ವರ್ಷದ ಮಾನಸಿ ತಂದೆ ದಿ. ಶಿವಾಜಿರಾವ್ ಹಾಗೂ ಆಳಂದ ತಾಲೂಕಿನ ಹೊದಲೂರು ಗ್ರಾಮದ 17 ವರ್ಷದ ಗಣೇಶ ತಂದೆ ದಿ. ಬಂದಪ್ಪ ಮಕ್ಕಳಿಗೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಅಂಚೆ ಇಲಾಖೆಯ ಪಾಸ್ ಬುಕ್, ಮಕ್ಕಳಿಗೆ ಬರೆದ ಪ್ರಧಾನಮಂತ್ರಿಗಳ ಪತ್ರ, ಆಯೂಷ್ಮಾನ್ ಆರೋಗ್ಯ ಕಾರ್ಡ್, ಪಿ.ಎಂ.ಕೇರ್ ಸರ್ಟಿಫಿಕೇಟ್ ಒಳಗೊಂಡ ಕಿಟ್ ವಿತರಿಸಿ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಮಕ್ಕಳಿಗೆ ಶುಭ ಹಾರೈಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನವೀನ್ ಯು., ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಯಲ್ಲಾಲಿಂಗ ಕಾಳನೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶರಣಬಸಪ್ಪ ಬೆಳಗುಂಪಿ, ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಭರತೇಶ ಶೀಲವಂತ ಮತ್ತಿತರಿದ್ದರು.

ಟಾಪ್ ನ್ಯೂಸ್

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.