![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 30, 2022, 11:10 PM IST
ಉಡುಪಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೇ 31 ಹಾಗೂ ಜೂನ್ 1ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೇ 31ರ ಸಂಜೆ 7ಕ್ಕೆ ಉಡುಪಿಗೆ ಆಗಮಿಸಲಿರುವ ಮುಖ್ಯಮಂತ್ರಿಯವರು ರಾತ್ರಿ ಮಣಿಪಾಲದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಜೂನ್ 1ರ ಬೆಳಗ್ಗೆ 9ಕ್ಕೆ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಂದರ್ಭ ತಿರುಗುವ ಮುಚ್ಚಿಗೆಯನ್ನು ಉದ್ಘಾಟಿಸಲಿದ್ದಾರೆ. 10.30ಕ್ಕೆ ಕಾರ್ಕಳ ತಾಲೂಕಿನ ಎಣ್ಣೆಹೊಳೆ ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಹೆಬ್ರಿಯಲ್ಲಿ ಹೆಬ್ರಿ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತರಗತಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಚಾಲನೆ ಹಾಗೂ ಸುಸಜ್ಜಿತ ಬಸ್ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಅಲ್ಲಿಂದ ಮೂಡುಬಿದರೆಗೆ ತೆರಳಲಿರುವ ಅವರು ಮಧ್ಯಾಹ್ನ 3ಕ್ಕೆ ಆಳ್ವಾಸ್ ಕಾಲೇಜು ಆವರಣದಲ್ಲಿ ವಿದ್ಯಾನಿಧಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಅನಂತರ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.
ಇದನ್ನೂ ಓದಿ : ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಕೇಸು: 30 ಬಾರಿ ಗುಂಡಿಟ್ಟರು,ಸತ್ತನೆಂದು ಪರಿಶೀಲಿಸಿದರು
You seem to have an Ad Blocker on.
To continue reading, please turn it off or whitelist Udayavani.