ಗುಲ್ವಾಡಿ ಬೈಲ್ಮನೆ ಕೆರೆಗೆ ನೀರು ಹಾಯಿಸಲು ಬೇಡಿಕೆ

ಸೌಕೂರು ಏತ ನೀರಾವರಿ ಯೋಜನೆ

Team Udayavani, May 31, 2022, 12:02 PM IST

gulwady

ಗುಲ್ವಾಡಿ: ‘ದೀಪದ ಬುಡದಲ್ಲಿ ಕತ್ತಲು’ ಎಂಬಂತೆ ಸೌಕೂರು ಏತ ನೀರಾವರಿ ಯೋಜನೆ ಆರಂಭಗೊಳ್ಳುವ ಗುಲ್ವಾಡಿಯಲ್ಲಿಯೇ ಕೃಷಿಗೆ ಹಾಗೂ ಕುಡಿಯುವ ನೀರಿನ ಸಮಸ್ಯೆಯಿದ್ದು, ಇಲ್ಲಿನ ಬೈಲ್ಮನೆ ಕೆರೆಗೆ ನೀರು ಹಾಯಿಸಿದರೆ ಈ ಸಮಸ್ಯೆ ಪರಿಹಾರವಾಗಲಿದ್ದು, ಈ ಕುರಿತಂತೆ ಇಲ್ಲಿನ ಗ್ರಾಮಸ್ಥರು ಬೇಡಿಕೆಯಿಟ್ಟಿದ್ದಾರೆ.

ಗುಲ್ವಾಡಿಯಲ್ಲಿ ವೆಂಟೆಂಡ್‌ ಡ್ಯಾಂ ನಿರ್ಮಾಣವಾದ ಬಳಿಕ ಇಲ್ಲಿನ ಬೈಲ್ಮನೆ ಕೆರೆ, ಗುಲ್ವಾಡಿಯ ಕೆಲವು ಭಾಗ, ಗುಡರಹಕ್ಲು ಭಾಗಗಳ ಕೃಷಿಗೆ ಉಪ್ಪು ನೀರಿನ ಸಮಸ್ಯೆ ಎದುರಾಗುತ್ತಿದೆ. ಹಿಂದೆ ಈ ಸಮಸ್ಯೆ ಇರಲಿಲ್ಲ.

ನೀರು ಹಾಯಿಸಿದರೆ ಅನುಕೂಲ

ಗುಲ್ವಾಡಿಯಲ್ಲಿರುವ ಬೆಲ್ಮನೆ ಕೆರೆಯು ವಿಶಾಲವಾಗಿದ್ದು, ಬೇಸಗೆಯಲ್ಲಿಯೂ ಈ ಕೆರೆಯಲ್ಲಿ ನೀರಿದ್ದರೂ, ಉಪ್ಪಿನ ಅಂಶ ಇರುತ್ತದೆ. ಇದನ್ನು ಕೃಷಿಗೆ ಬಳಸಲು ಸಾಧ್ಯವಿಲ್ಲ. ಆ ಕಾರಣಕ್ಕೆ ಈಗಿನ ಸೌಕೂರು ಏತ ನೀರಾವರಿ ಯೋಜನೆಯಡಿ ಹತ್ತಾರು ಗ್ರಾಮಗಳು, ದೂರದ ಬೇರೆ ಬೇರೆ ಊರುಗಳಿಗೆ ನೀರು ಕೊಂಡೊಯ್ಯಲಾಗುತ್ತಿದ್ದು, ಆದರೆ ಇಲ್ಲೇ ಇರುವ ಈ ಕೆರೆಗೆ ನೀರು ಹಾಯಿಸಿ ದರೆ ಬಹಳಷ್ಟು ಪ್ರಯೋಜನವಾಗಲಿದೆ ಎನ್ನುವುದು ಇಲ್ಲಿನ ರೈತರ ಬೇಡಿಕೆಯಾಗಿದೆ.

25 ಎಕರೆಗೆ ವರದಾನ

ಇದರಿಂದಾಗಿ ಇಲ್ಲಿನ ಸುಮಾರು 20-25 ಮಂದಿಯ ಸುಮಾರು 25 ಎಕರೆ ಪ್ರದೇಶದಲ್ಲಿ ಹಿಂಗಾರು ಹಂಗಾಮಿನ ಭತ್ತದ ಕೃಷಿಗೆ ತೊಡಕಾಗಿದೆ. ಕೆಲವರಂತೂ ಇಲ್ಲಿ ಉಪ್ಪು ನೀರಿನ ಸಮಸ್ಯೆಯಿಂದಾಗಿ ಹಿಂಗಾರು ಹಂಗಾಮಿನಲ್ಲಿ ಭತ್ತದ ಕೃಷಿಯನ್ನೇ ನಿಲ್ಲಿಸಿ ಬಿಟ್ಟಿದ್ದಾರೆ. ಇನ್ನು ಕೃಷಿಗೆ ಮಾತ್ರವಲ್ಲ, ಬೇಸಗೆಯಲ್ಲಿ ಈ ಭಾಗದಲ್ಲಿ ನೀರಿನ ಸಮಸ್ಯೆಯೂ ಇದ್ದು, ಈ ಕೆರೆಗೆ ನೀರು ಹಾಯಿಸಿದರೆ, ಇಲ್ಲಿನ ಸುತ್ತಮುತ್ತಲಿನ ಪ್ರದೇಶಗಳ ಬಾವಿಯ ಅಂತರ್ಜಲ ಮಟ್ಟವೂ ಸುಧಾರಿಸಲಿದೆ.

ಮನವಿ ಸಲ್ಲಿಕೆ

ಅಲ್ಲಿನ ಗ್ರಾಮಸ್ಥರು ಈ ಕುರಿತಂತೆ ಗ್ರಾಮ ಪಂಚಾಯತ್‌ಗೆ ಮನವಿ ಸಲ್ಲಿಸಿದರೆ, ಖಂಡಿತವಾಗಿಯೂ ಈ ಬಗ್ಗೆ ಸಂಬಂಧಪಟ್ಟ ವಾರಾಹಿ ನಿಗಮದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. – ಸುಧೀಶ್‌ ಶೆಟ್ಟಿ, ಅಧ್ಯಕ್ಷರು, ಗುಲ್ವಾಡಿ ಗ್ರಾ.ಪಂ.

ಪರಿಶೀಲನೆ

ಗುಲ್ವಾಡಿಯಲ್ಲಿ ಈಗಾಗಲೇ ಒಂದೆರಡು ಕಡೆಗಳಲ್ಲಿ ಸೌಕೂರು ಏತ ನೀರಾವರಿ ಯೋಜನೆಯ ನೀರನ್ನು ಹಾಯಿಸಲು ಕ್ರಮಕೈಗೊಳ್ಳಲಾಗಿದೆ. ಬೈಲ್ಮನೆ ಕೆರೆಗೆ ನೀರು ಹಾಯಿಸುವ ಸಂಬಂಧ ಅಲ್ಲಿಗೆ ಭೇಟಿ, ನೀಡಿ ಪರಿಶೀಲಿಸಲಾಗುವುದು. – ಪ್ರಸನ್ನ ಶೇಟ್‌, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌, ವಾರಾಹಿ ನಿಗಮ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.