ಡಿವೈಡರ್ಗೆ ಸ್ಕೂಟರ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಯುವಕ ಸಾವು, ಅಂಗಾಂಗ ದಾನ ವಿಫಲ
Team Udayavani, May 31, 2022, 9:04 PM IST
ಮಂಗಳೂರು : ಸ್ಕೂಟರ್ ಡಿವೈಡರ್ಗೆ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಕುಡುಪು ಕಟ್ಟೆಯ ಧೀರಜ್(25) ಅವರು ಮಂಗಳವಾರ ಮೃತಪಟ್ಟಿದ್ದಾರೆ.
ರವಿವಾರ ಮುಂಜಾವ ಸುಮಾರು 2.15ಕ್ಕೆ ಧೀರಜ್ ಅವರು ತನ್ನ ಸ್ನೇಹಿತ ಗಣೇಶ್ ಅವರೊಂದಿಗೆ ಸ್ಕೂಟರ್ನಲ್ಲಿ ಬಿಕರ್ನಕಟ್ಟೆ ಕೈಕಂಬ ಕಡೆಯಿಂದ ನಂತೂರು ಕಡೆಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 73ಲ್ಲಿ ಹೋಗುತ್ತಿದ್ದಾಗ ಬಿಕರ್ನಕಟ್ಟೆಯ ಉಸ್ಮಾನಿಯಾ ಕಾಂಪ್ಲೆಕ್ಸ್ ಮುಂಭಾಗ ನಿಯಂತ್ರಣ ತಪ್ಪಿ ಸ್ಕೂಟರ್ ಡಿವೈಡರ್ಗೆ ಢಿಕ್ಕಿ ಹೊಡೆಯಿತು. ಪರಿಣಾಮವಾಗಿ ಇಬ್ಬರೂ ಗಂಭೀರ ಗಾಯಗೊಂಡು ರಸ್ತೆಗೆ ಬಿದ್ದಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಂಗಾಂಗ ದಾನ ವಿಫಲ
ಧೀರಜ್ ಅವರ ಮಿದುಳು ನಿಷ್ಕ್ರಿಯಗೊಂಡಿರುವ ಬಗ್ಗೆ ಸೋಮವಾರ ರಾತ್ರಿ ಎಜೆ ಆಸ್ಪತ್ರೆಯ ವೈದ್ಯರು ಘೋಷಿಸಿದ್ದರು. ಹಾಗಾಗಿ ಅಂಗಾಂಗ ದಾನ ಮಾಡಲು ಮನೆಯವರು ನಿರ್ಧರಿಸಿದ್ದರು. ಅದರಂತೆ ಅಂಗಾಂಗಗಳನ್ನು ಪಡೆಯಲು ಚೆನ್ನೈನಿಂದ ತಜ್ಞರ ತಂಡ ಚಾರ್ಟರ್ ವಿಮಾನದಲ್ಲಿ ಆಗಮಿಸಿತ್ತು. ಆದರೆ ಬೆಂಗಳೂರಿನಿಂದ ತಜ್ಞರ ತಂಡ ಬರುವಾಗ ವಿಳಂಬವಾಯಿತು. ಆ ವೇಳೆ ಧೀರಜ್ ಅವರು ಕೊನೆಯುಸಿರೆಳೆದಿದ್ದರು. ಹಾಗಾಗಿ ಅಂಗಾಂಗ ದಾನ ಮಾಡಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಬೆಳಗಾವಿ: ಸುವರ್ಣ ವಿಧಾನಸೌಧದ ಮೆಟ್ಟಿಲಲ್ಲಿ ಒಣಹಾಕಿದ ‘ಸಂಡಿಗೆ ಶಾವಿಗೆ’ : ಫೋಟೋ ವೈರಲ್…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM Siddaramaiah: ಕರಾವಳಿಗೆ ಎರಡು ಸರಕಾರಿ ಮೆಡಿಕಲ್ ಕಾಲೇಜು
CM Siddaramaiah: ಜಾತಿಗಣತಿ ವರದಿ ಮುಂದಿನ ಸಂಪುಟ ಸಭೆಯಲ್ಲಿ ಮಂಡನೆ
Mangaluru: ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಳುಗಳಿಗೆ ಕೃಪಾಂಕ ನೀಡಲು ತೀರ್ಮಾನ : ಸಿಎಂ
Fraud: ಆನ್ಲೈನ್ ಟ್ರೇಡಿಂಗ್: ಮಹಿಳೆಗೆ 15.27 ಲಕ್ಷ ರೂ. ವಂಚನೆ
Mangaluru: ಆರೋಪಿಗೆ 20 ವರ್ಷ ಕಠಿನ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ
MUST WATCH
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.