ಖಾಸಗಿ ಆಸ್ಪತ್ರೆ ಮೇಲ್ಛಾವಣಿ ಕುಸಿತ; ಓರ್ವ ಕಾರ್ಮಿಕ ಸಾವು
Team Udayavani, May 31, 2022, 11:57 PM IST
ಬೆಂಗಳೂರು: ನೃಪತುಂಗ ರಸ್ತೆಯಲ್ಲಿರುವ ಸೇಂಟ್ ಮಾರ್ಥಾಸ್ ಆಸ್ಪತ್ರೆಯ ಮುಂಭಾಗ ನಿರ್ಮಿಸುತ್ತಿದ್ದ ಮೇಲ್ಛಾವಣಿ ಕುಸಿದು ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ರಾಯಚೂರು ಮೂಲದ ಬಸವರಾಜು (38) ಮೃತ ಕಾರ್ಮಿಕ. ಮೊಹಮ್ಮದ್ ರಫಿಸಾಬ್ (32), ಮೊಯಿದ್ದಿನ್ (34) ಮತ್ತು ಚಾಂದ್‌ಪಾಷಾ (37) ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುರ್ಘಟನೆ ಸಂಬಂಧ ನಿರ್ಲಕ್ಷ್ಯವಹಿಸಿದ್ದ ನಿರ್ಮಾಣದ ಗುತ್ತಿಗೆ ಪಡೆದಿದ್ದ ಕಂಪೆನಿ ಹಾಗೂ ಎಂಜಿನಿಯರ್ ಜೋನೆಟ್ ಜಾನ್ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಟ್ಟಡದ ಮೇಲ್ಭಾಗದಲ್ಲಿದ್ದ ನಾಲ್ವರು ಕೆಳಗೆ ಬಿದ್ದು ಕುಸಿದು ಬಿದ್ದಿದ್ದ ಅವಶೇಷಗಳಡಿ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ಸಿಬಂದಿ ವಿವಿಧ ಯಂತ್ರೋಪಕರಣಗಳ ಮೂಲಕ ಕಬ್ಬಿಣದ ಸರಳುಗಳನ್ನು ಕತ್ತರಿಸಿ ಅವಶೇಷಗಳಡಿ ಸಿಲುಕಿದ್ದ ಬಸವರಾಜು, ಮೊಯಿದ್ದಿನ್, ಮೊಹಮ್ಮದ್ ರಫಿ, ಚಾಂದ್‌ಪಾಷಾ ಅವರನ್ನು ಸುಮಾರು ಎರಡೂವರೆ ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.