ಸುಳ್ಯ: ತಾ| ಪೌಷ್ಟಿಕ ಪುನಶ್ಚೇತನ ಕೇಂದ್ರ

ಐದು ಹಾಸಿಗೆ ಸಾಮರ್ಥ್ಯ

Team Udayavani, Jun 1, 2022, 9:37 AM IST

nutrition

ಸುಳ್ಯ: ಆರು ವರ್ಷದೊಳಗಿನ ಮಕ್ಕಳಲ್ಲಿರುವ ಅಪೌಷ್ಟಿಕತೆ ಗುರುತಿಸಿ ನಿವಾರಿಸುವ ಮಹತ್ವದ ಯೋಜನೆಯ ಭಾಗವಾಗಿ ಸುಳ್ಯದಲ್ಲಿ ಪೌಷ್ಟಿಕ ಪುನಶ್ಚೇತನ ಕೇಂದ್ರ ಆರಂಭವಾಗಿದೆ. ಸರಕಾರದ ಅನುದಾನ ಬಿಡುಗಡೆಯಾಗಬೇಕಾಗಿದ್ದು, ಪ್ರಸ್ತುತ ಸರಕಾರಿ ಆಸ್ಪತ್ರೆಯ ಮಕ್ಕಳ ವಾರ್ಡ್‌ನಲ್ಲಿ ಕೇಂದ್ರ ಕಾರ್ಯಾಚರಿಸುತ್ತಿದೆ.

ಈ ವರ್ಷದ ಬಜೆಟ್‌ನಲ್ಲಿ ಘೋಷಣೆಯಾದಂತೆ ಕೇಂದ್ರ ಆರಂಭಿಸಲಾಗಿದೆ. ತ್ವರಿತವಾಗಿ ಕೇಂದ್ರ ಆರಂಭಿಸುವಂತೆ ಎಪ್ರಿಲ್‌ನಲ್ಲಿ ಆದೇಶ ಹೊರಡಿಸಲಾಗಿತ್ತು. ರಾಜ್ಯದ ಮೀಸಲು ವಿಧಾನಸಭಾ ಕ್ಷೇತ್ರಗಳಲ್ಲಿ ಈಗಾಗಲೇ 14 ತಾಲೂಕು ಮಟ್ಟದ ಪೌಷ್ಟಿಕ ಪುನಶ್ಚೇತನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಇನ್ನುಳಿದ 37 ವಿ.ಸ. ಮೀಸಲು ಕ್ಷೇತ್ರಗಳಲ್ಲಿ ಕೇಂದ್ರ ಆರಂಭಿಸಲು ಸೂಚಿಸಲಾಗಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಮೀಸಲಾತಿ ಕ್ಷೇತ್ರ ಸುಳ್ಯದಲ್ಲಿ ತಾಲೂಕು ಮಟ್ಟದ ಪೌಷ್ಟಿಕ ಪುನಶ್ಚೇತನ ಕೇಂದ್ರ ಕಾರ್ಯಾಚರಿಸಲಿದೆ.

ಅಪೌಷ್ಟಿಕತೆಗೆ ಚಿಕಿತ್ಸೆ

6 ವರ್ಷದೊಳಗಿನ ಮಕ್ಕಳಲ್ಲಿ ತೀವ್ರ ಹಾಗೂ ಸಾಧರಣ ಅಪೌಷ್ಟಿಕತೆಯನ್ನು ಗುರುತಿಸುವಿಕೆ, ಚಿಕಿತ್ಸೆ ಹಾಗೂ ಪುನಶ್ಚೇತನ ಸೇವೆಗಳನ್ನು ಇಲ್ಲಿ ನೀಡಲಾಗುತ್ತದೆ. ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಈ ಕೇಂದ್ರಕ್ಕೆ ದಾಖಲಿಸಿ, ಪೂರಕ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಮಕ್ಕಳ ಪೋಷಕರ ಒಪ್ಪಿಗೆ ಪಡೆದು ಮಕ್ಕಳನ್ನು ದಾಖಲೀಕರಿಸಿ, ಪೌಷ್ಟಿಕಾಂಶ ವೃದ್ಧಿಗೆ ಪೂರಕ ವಿಧಾನ, ಆಹಾರ, ಚಿಕಿತ್ಸೆ ಒದಗಿಸಲಾಗುತ್ತದೆ. ಮಗುವಿನ ಜತೆಯಲ್ಲಿ ಉಳಿದುಕೊಳ್ಳುವ ಪೋಷಕರಲ್ಲಿ ಒಬ್ಬರಿಗೆ ನರೇಗಾ ಅಡಿಯಲ್ಲಿ ವೇತನ ನೀಡುವ ವ್ಯವಸ್ಥೆಯೂ ಇದರಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾತ್ಕಾಲಿಕ ಕೇಂದ್ರ

ಆರಂಭ ಸುಳ್ಯದ ತಾಲೂಕು ಆಸ್ಪತ್ರೆಯ ಮಕ್ಕಳ ವಾರ್ಡ್‌ ನಲ್ಲಿ ತಾತ್ಕಲಿಕವಾಗಿ ಐದು ಹಾಸಿಗೆಗಳ ಪೌಷ್ಟಿಕ ಪುನಶ್ಚೇತನ ಕೇಂದ್ರ ಆರಂಭಿಸಲಾಗಿದೆ. ಆಸ್ಪತ್ರೆ ಕಟ್ಟಡದಲ್ಲಿ ಮಕ್ಕಳ ವಾರ್ಡ್‌ನ ಹೆಚ್ಚುವರಿ ಕೊಠಡಿ ನಿರ್ಮಾಣ ಹಂತದಲ್ಲಿದ್ದು, ಮುಂದೆ ಅಲ್ಲಿ ಕೇಂದ್ರ ನಡೆಯಲಿದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಿಬಂದಿ, ಮೇಲ್ವಿಚಾರಕರು, ಅಡುಗೆ ಸಿಬಂದಿ ನೇಮಕವಾಗುವ ನಿರೀಕ್ಷೆ ಇದೆ. ಸರಕಾರದಿಂದ ಅನುದಾನ ಬಿಡುಗಡೆಯಾಗಬೇಕಾಗಿದ್ದು, ಅಲ್ಲಿಯ ವರೆಗೆ ಆಸ್ಪತ್ರೆಯ ವಿವಿಧ ಸಂಪನ್ಮೂಲಗಳಿಂದ ಕೇಂದ್ರ ಕಾರ್ಯಾಚರಿಸಲಿದೆ. ಶೀಘ್ರ ಅನುದಾನ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೃಢೀಕರಿಸಿ ದಾಖಲು

ಅಂಗನವಾಡಿಯಲ್ಲಿ 6 ವರ್ಷದೊಳಗಿನ ಮಕ್ಕಳ ಮಾಹಿತಿಗಳಿವೆ. ಮಕ್ಕಳ ಬೆಳವಣಿಗೆ ಸಂಬಂಧಿಸಿ ಅಂಗನವಾಡಿ, ಆಶಾ ಕಾರ್ಯಕರ್ತೆಯರಲ್ಲಿರುವ ಮಾಹಿತಿ ಪ್ರಕಾರ ಯಾವ ಮಕ್ಕಳಲ್ಲಿ ಅಪೌಷ್ಟಿಕತೆ ಕಂಡುಬರುತ್ತಿದೆ ಎನ್ನುವುದನ್ನು ಗಮನಿಸಿ ಅವರನ್ನು ಪುನಶ್ಚೇತನ ಕೇಂದ್ರಕ್ಕೆ ದಾಖಲಿಸಲು ಸಲಹೆ ನೀಡಲಾಗುತ್ತದೆ. ಮಕ್ಕಳ ವಯೋಮಿತಿಗೆ ಅನುಗುಣವಾಗಿ ತೂಕ, ಬೆಳವಣಿಗೆ, ಪೌಷ್ಟಿಕಾಂಶ ಕೊರತೆ ಮುಂತಾದವುಗಳನ್ನು ಲೆಕ್ಕಚಾರ ಹಾಕಿ ವೈದ್ಯರು ಅಪೌಷ್ಟಿಕತೆಯಿಂದ ಬಳಲುತ್ತಿರುವುದನ್ನು ದೃಢೀಕರಿಸಿದ ಬಳಿಕ ಕೇಂದ್ರಕ್ಕೆ ದಾಖಲಿಸಲು ಅವಕಾಶ ಇದೆ ಎನ್ನುತ್ತಾರೆ ಅಧಿಕಾರಿಗಳು.

ಅನುದಾನದ ನಿರೀಕ್ಷೆ

ಸುಳ್ಯದಲ್ಲಿ ಪೌಷ್ಟಿಕ ಪುನಶ್ಚೇತನ ಕೇಂದ್ರ ತೆರೆಯಲು ಸೂಚಿಸಲಾಗಿದೆ. ಸದ್ಯಕ್ಕೆ ಅಲ್ಲಿನ ಸಂಪನ್ಮೂಲಗಳನ್ನು ಬಳಸಿಕೊಂಡು ಕೇಂದ್ರ ಕಾರ್ಯಾಚರಿಸಲಿದೆ. ಮುಂದೆ ವಿವಿಧ ಹುದ್ದೆಗಳಾದ ವೈದ್ಯರು, ನರ್ಸ್‌ಗಳು, ಕೌನ್ಸಿಲರ್‌ಗಳು ಮತ್ತಿತರ ಹುದ್ದೆಗಳಿಗೆ ನಿಯೋಜನೆಯಾಗಲಿದೆ. ಬಜೆಟ್‌ ಅನುದಾನ ಬಿಡುಗಡೆಗೊಂಡಲ್ಲಿ ಎಲ್ಲ ಹಂತಗಳನ್ನು ಪೂರ್ಣಗೊಳಿಸಲಾಗುವುದು. ಶೀಘ್ರ ಅನುದಾನ ಬಿಡುಗಡೆಯಾಗುವ ನಿರೀಕ್ಷೆ ಇದೆ. ಡಾ| ರಾಜೇಶ್‌, ಯೋಜನ ಅಧಿಕಾರಿ, ಆರೋಗ್ಯ ಇಲಾಖೆ

ದಯಾನಂದ ಕಲ್ಚಾರ್‌

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sand 1

Padubidri: ಮರಳು ಅಕ್ರಮ ಸಾಗಾಟ; ವಶ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.