ವಿಮಾನ ನಿಲ್ದಾಣ ಕನಸು ಶೀಘ್ರ ಸಾಕಾರ
ನಾಡಿದ್ದು ವಿಮಾನನಿಲ್ದಾಣ ಪ್ರಾಧಿಕಾರ ತಂಡ ಭೇಟಿ
Team Udayavani, Jun 1, 2022, 2:35 PM IST
ದಾವಣಗೆರೆ: ಜಿಲ್ಲೆಯ ಬಹುವರ್ಷಗಳ ಬೇಡಿಕೆಯಾದ ವಿಮಾನ ನಿಲ್ದಾಣ ಸ್ಥಾಪನೆ ಪ್ರಕ್ರಿಯೆ ಚುರುಕುಗೊಂಡಿದ್ದು ಪರಿಶೀಲನೆಗಾಗಿ ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರದ (ಏರ್‌ಪೋರ್ಟ್ ಆಥಾರಿಟಿ ಆಫ್ ಇಂಡಿಯಾ) ತಜ್ಞರ ತಂಡ ಜೂ. 3 ರಂದು ಜಿಲ್ಲೆಗೆ ಆಗಮಿಸುತ್ತಿದೆ.
ಕರ್ನಾಟಕ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧಿಕಾರಿಗಳ ತಂಡ ಕಳೆದ ಜನವರಿಯಲ್ಲಿ ಭೇಟಿದ ಬಳಿಕ ಇದೇ ವಿಚಾರವಾಗಿ ಪರಿಶೀಲನೆಗೆ ಈಗ ಭಾರತೀಯ ವಿಮಾನ ಪ್ರಾಧಿಕಾರದ (ಎಎಐ) ಐದು ಹಿರಿಯ ಅಧಿಕಾರಿಗಳ ತಂಡ ಜಿಲ್ಲೆಗೆ ಬರುತ್ತಿದೆ. ಇದರಲ್ಲಿ ಅಭಿಜಿತ್ ಬ್ಯಾನರ್ಜಿ, ಶೈಲೇಂದ್ರ ಮಾರ್ಕ್ ಇಕ್ಕಾ, ತರುಣಕುಮಾರ್ ಗುಪ್ತಾ, ಸಕ್ವಿಬ್ ಆಫ್ತಬ್ ಆಲಂ, ಎನ್. ಮೋಹನ್ ಇದ್ದಾರೆ. ತಂಡದ ಈ ಭೇಟಿ ವಿಮಾನ ನಿಲ್ದಾಣ ಸ್ಥಾಪನೆ ಕನಸು ಶೀಘ್ರ ಸಾಕಾರಗೊಳ್ಳುವ ನಿರೀಕ್ಷೆ ಗರಿಗೆದರಿದೆ. ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ವಿಚಾರವಾಗಿ ಈ ಹಿಂದೆ ಕರ್ನಾಟಕ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧಿಕಾರಿಗಳು ಜಿಲ್ಲೆಗೆ ಭೇಟಿ ನೀಡಿ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿತ್ತು. ಜಿಲ್ಲೆಯಲ್ಲಿ ಏರ್ ಬಸ್ ಮಾದರಿಯ ವಿಮಾನ ನಿಲ್ದಾಣ ಮಾಡುವುದಾದರೆ 500ಎಕರೆ, ಕಾರ್ಗೋ ಮಾದರಿ ವಿಮಾನ ನಿಲ್ದಾಣ ಮಾಡುವುದಾದರೆ 600 ಎಕರೆ, ಎಟಿಆರ್-72 ಮಾದರಿ ವಿಮಾನ ನಿಲ್ದಾಣ ನಿರ್ಮಿಸುವುದಾದರೆ ಕನಿಷ್ಠ 350ಎಕರೆ ಜಮೀನು ಬೇಕಾಗುತ್ತದೆ ಎಂದು ಆಗ ಅಧಿಕಾರಿಗಳು ಮಾಹಿತಿ ನೀಡಿದ್ದರು. ಜತೆಗೆ ಜಿಲ್ಲೆಗೆ ಹತ್ತಿರದಲ್ಲಿ ಶಿವಮೊಗ್ಗ, ಬಳ್ಳಾರಿ, ಹುಬ್ಬಳ್ಳಿಗಳಲ್ಲಿ ವಿಮಾನ ನಿಲ್ದಾಣಗಳು ಇರುವುದರಿಂದ ದಾವಣಗೆರೆಗೆ ಎಟಿಆರ್-72 ಸೂಕ್ತ ಎಂದು ಸಹ ನೀಡಿದ್ದರು.
ಸ್ಥಳ ಪರಿಶೀಲನೆ
ಈ ಹಿಂದೆ ಬಂದಿದ್ದ ಅಧಿಕಾರಿಗಳ ತಂಡವು ವಿಮಾನ ನಿಲ್ದಾಣ ಸ್ಥಾಪನೆಗೆ ಬೇಕಾದ ಅಗತ್ಯ ಜಮೀನು ಗುರುತಿಸಬೇಕು. ಅಲ್ಲಿನ ಮಣ್ಣಿನ ರಚನೆ, ಸೂಕ್ತ ವಾತಾವರಣದ ಪರೀಕ್ಷೆ ಸೇರಿದಂತೆ ಇನ್ನಿತರ ಅಂಶಗಳ ಕುರಿತು ಅಧ್ಯಯನ ನಡೆಸಬೇಕು ಎಂದು ತಿಳಿಸಿತ್ತು. ಅದೇ ರೀತಿ ಜಿಲ್ಲಾಧಿಕಾರಿಯರವರು ಸಹ ವಿಮಾನ ನಿಲ್ದಾಣಕ್ಕಾಗಿ ಜಮೀನು ಗುರುತಿಸಲಾಗಿದೆ ಎಂದು ತಿಳಿಸಿದ್ದರು. ಈಗ ಭಾರತೀಯ ವಿಮಾನ ಪ್ರಾಧಿಕಾರದ ಅಧಿಕಾರಿಗಳು ಬರುತ್ತಿರುವುದರಿಂದ ವಿಮಾನ ನಿಲ್ದಾಣ ಸ್ಥಾಪನೆ ವಿಚಾರ ಎರಡನೇ ಹಂತಕ್ಕೆ ತಲುಪಿದಂತಾಗಿದೆ. ಈ ತಂಡ ವಿಮಾನ ನಿಲ್ದಾಣಕ್ಕೆ ಗುರುತಿಸಿದ ಭೂಮಿ ಯೋಗ್ಯ ಭೂಮಿ ಎಂದು ತಂಡ ಪರಿಗಣಿಸಿದರೆ, ಜಿಲ್ಲೆಗೆ ಯಾವ ಮಾದರಿಯ ನಿಲ್ದಾಣ ಸೂಕ್ತ ಎಂಬ ನಿರ್ಣಯ ಕೈಗೊಂಡು ವಿಮಾನ ನಿಲ್ದಾಣ ಸ್ಥಾಪನೆ ಶೀಘ್ರ ಕಾಮಗಾರಿಗೆ ಚಾಲನೆ ದೊರೆಯಬಹುದು ಎಂದು ಆಶಿಸಲಾಗಿದೆ.
ಜಾಗದ ಮಾಹಿತಿ ಇನ್ನೂ ಗೌಪ್ಯ
ಒಂದು ಕಡೆ ವಿಮಾನ ನಿಲ್ದಾಣ ಸ್ಥಾಪನೆಗೆ ಅಧಿಕಾರದಲ್ಲಿರುವವರು ಹೆಚ್ಚಿನ ಆಸಕ್ತಿ ತೋರಿದರೆ, ಮತ್ತೂಂದೆಡೆ ವಿಮಾನ ನಿಲ್ದಾಣ ಸ್ಥಾಪನೆಗೆ ಸರ್ಕಾರಿ ಜಾಗ ಇಲ್ಲವೇ ಬಂಜರು ಭೂಮಿಯನ್ನೇ ಹುಡುಕಿಕೊಳ್ಳಿ, ವಿಮಾನ ನಿಲ್ದಾಣಕ್ಕಾಗಿ ಫಲವತ್ತಾದ ಕೃಷಿ ಭೂಮಿಗೆ ಕೈ ಹಾಕಿ, ರೈತರಿಗೆ ತೊಂದರೆ ಕೊಡಬೇಡಿ ಎಂಬ ಕೂಗು ಸಹ ಎದ್ದಿತ್ತು. ಈ ನಡುವೆ ಜಿಲ್ಲಾಡಳಿತ ವಿಮಾನ ನಿಲ್ದಾಣಕ್ಕಾಗಿ ಯಾವ ಭೂಮಿ ಗುರುತಿಸಿದೆ ಎಂಬುದು ಇನ್ನೂ ಗೌಪ್ಯವಾಗಿಯೇ ಇದ್ದು ಈ ತಂಡದ ಭೇಟಿಯಿಂದ ವಿಮಾನ ನಿಲ್ದಾಣಕ್ಕೆ ಗುರುತಿಸಿದ ಜಾಗೆ ಬಹಿರಂಗಗೊಳ್ಳುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.
–ಎಚ್.ಕೆ. ನಟರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.