ಪಠ್ಯಪುಸ್ತಕಗಳಲ್ಲಿ ಗೊಂದಲವಿದ್ದರೆ ಪರಿಶೀಲಿಸಿ ಸರಿ ಮಾಡಲಾಗುವುದು: ಜಗದೀಶ್ ಶೆಟ್ಟರ್

Team Udayavani, Jun 1, 2022, 5:06 PM IST

ಪಠ್ಯಪುಸ್ತಕಗಳಲ್ಲಿ ಗೊಂದಲವಿದ್ದರೆ ಪರಿಶೀಲಿಸಿ ಸರಿ ಮಾಡಲಾಗುವುದು: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಪಠ್ಯಪುಸ್ತಕಗಳಲ್ಲಿ ಎಲ್ಲಿ ತಪ್ಪಾಗಿದೆ, ಉಂಟಾಗಿರುವ ಗೊಂದಲ ಪರಿಹಾರ ಮಾಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ವರದಿ ತರಿಸಿಕೊಂಡು ಮುಖ್ಯಮಂತ್ರಿಗಳು ಸರಿ ಮಾಡುವ ಕೆಲಸ ಆಗಬೇಕು. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತನಾಡುವುದಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕಗಳನ್ನು ನೋಡದೆ ಗೊಂದಲ ಸೃಷ್ಟಿಸುವುದು ಸರಿಯಲ್ಲ. ಇಲ್ಲಿಯವರೆಗೂ ಯಾವುದೇ ಪಠ್ಯಪುಸ್ತಕಗಳನ್ನು ನೋಡಿಲ್ಲ. ಗೊಂದಲ ಮೂಡಿರುವ ಕಾರಣ ಪುಸ್ತಕಗಳನ್ನು ತರಿಸಿದ್ದು, ಪರಿಶೀಲನೆ ಮಾಡುತ್ತೇನೆ. ಒಂದು ವೇಳೆ ತಪ್ಪಾಗಿದ್ದರೆ ಸರಿ ಮಾಡುವ ಕೆಲಸ ಮಾಡಲಾಗುವುದು. ಸರಿಯಿದ್ದರೆ ಮೂಡಿರುವ ಗೊಂದಲ ಹಾಗೂ ಸರಕಾರಕ್ಕೆ ಪತ್ರ ಬರೆದಿರುವ ಮಠಾಧೀಶರಿಗೆ ಮನವರಿಕೆ ಮಾಡುವ ಕೆಲಸ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತನಾಡುವುದಾಗಿ ತಿಳಿಸಿದರು.

ಇಡಿ, ಐಟಿ ಇಲಾಖೆ ಸರಿ ತಪ್ಪುಗಳನ್ನು ಅವಲೋಕಿಸಿ ಮಾಹಿತಿ ಸಂಗ್ರಹಿಸಿ ದಾಳಿ ಮಾಡುತ್ತಾರೆ. ಇದಕ್ಕೆ ರಾಜಕೀಯ ಕಾರಣ ಅಂಟಿಸುವುದು ಸರಿಯಲ್ಲ. ಎಲ್ಲವೂ ಸರಿಯಿದ್ದರೆ ಹೆದರುವುದೇಕೆ ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದರು.

ರಾಜ್ಯಸಭೆಗೆ ಪಕ್ಷದಿಂದ ಎರಡು ಅಭ್ಯರ್ಥಿಗಳು ಗೆಲ್ಲುವುದು ಖಚಿತ, ಮೂರನೇ ಅಭ್ಯರ್ಥಿ ಗೆಲುವಿಗೆ ಶ್ರಮಿಸಲಾಗುವುದು. ಕಾಂಗ್ರೆಸ್ ಮೂಡಿಸಿರುವ ಗೊಂದಲದಿಂದಾಗಿ ಈ ಪರಿಸ್ಥಿತಿ ಉಂಟಾಗಿದೆ. ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹೇಳಿಕೆ ನೋಡಿದರೆ ಸೋ‌ನಿಯಾ ಗಾಂಧಿ ಅವರೊಂದಿಗೆ ಮಾತುಕತೆ ಮಾಡಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ ಎಂದಿದ್ದಾರೆ. ಆದರೆ ಕಾಂಗ್ರೆಸ್ ಮತ್ತೊಂದು ಅಭ್ಯರ್ಥಿಯನ್ನು ಹಾಕಿ ಗೊಂದಲ ಮೂಡಿಸಿದೆ. ಇದೊಂದು ಮಧ್ಯದಲ್ಲಿಯೇ ಕೈ ಕೊಡುವ ಪಕ್ಷ ಎಂದರು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಆರ್.ಎಸ್.ಎಸ್‌ ಬಗ್ಗೆ ನಪುಂಸಕ ಶಬ್ದ ಬಳಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಸ್ವತಃ ಅದೇ ಪಕ್ಷದ ಮಡ ಲಕ್ಷ್ಮಿನಾರಾಯಣ ಅವರು ಕೂಡ ಇದನ್ನು ತೀವ್ರವಾಗಿ ಖಂಡಿಸಿದ್ದಾರೆ. ಸಿದ್ದರಾಮಯ್ಯ ಅವರು ಕೂಡಲೇ ಕ್ಷಮೆ ಕೇಳಬೇಕು ಎಂದು ಈ ನಿಟ್ಟಿನಲ್ಲಿ ಅವರಿಗೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಗೊಂದಲ ಎಂದು ಲೇವಡಿ ಮಾಡಿದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.