ತಂಬಾಕು ಬಳಕೆ ನಿಯಂತ್ರಣಕ್ಕೆ ಮುಂದಾಗಿ; ಸುಂದರೇಶ ಬಾಬು

ತಂಬಾಕು ಪರಿಸರಕ್ಕೆ ಮಾರಕ

Team Udayavani, Jun 1, 2022, 6:15 PM IST

ತಂಬಾಕು ಬಳಕೆ ನಿಯಂತ್ರಣಕ್ಕೆ ಮುಂದಾಗಿ; ಸುಂದರೇಶ ಬಾಬು

ಗದಗ: ತಂಬಾಕು ಹಾಗೂ ತಂಬಾಕು ಉತ್ಪನ್ನಗಳ ತಯಾರಿಕೆಗಾಗಿ ಬಳಸುವ ಪ್ಲಾಸ್ಟಿಕ್‌, ಸಿಗರೇಟ್‌ ಬಡ್ಸ್‌ ಹಾಗೂ ಇತರೇ ತ್ಯಾಜ್ಯಗಳು ಮಣ್ಣಿನಲ್ಲಿ ಕರಗದೆ ಹಾಗೆಯೇ ಉಳಿದು, ಮಣ್ಣನ್ನು ಕಲುಷಿತಗೊಳಿಸುತ್ತವೆ.

ತಂಬಾಕು ಬೆಳೆಯುವ ಭೂಮಿಯ ಮಣ್ಣಿನ ಫಲವತ್ತತೆ ಕೂಡ ಕ್ರಮೇಣ ಕಡಿಮೆಯಾಗುತ್ತ ಹೋಗುತ್ತದೆ. ಹೀಗಾಗಿ, ಸಾರ್ವಜನಿಕರು ಆರೋಗ್ಯ ಮತ್ತು ಪರಿಸರ ಸಂರಕ್ಷಣೆ ಹಿತದೃಷ್ಟಿಯಿಂದ ತಂಬಾಕು ಬಳಕೆ ನಿಯಂತ್ರಿಸಲು ಮುಂದಾಗಬೇಕೆಂದು ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಮ್ಸ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಮಂಗಳವಾರ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ “ತಂಬಾಕು ಪರಿಸರಕ್ಕೆ ಮಾರಕ’ ಎಂಬ ಘೋಷವಾಕ್ಯದಡಿ ಹಮ್ಮಿಕೊಂಡಿದ್ದ ಜನಜಾಗೃತಿ ಸೈಕ್ಲೋಥಾನ್‌ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ್‌ ಮಾತನಾಡಿ, ತಂಬಾಕು ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲಾಗುವ ಗಂಭೀರ ಪರಿಣಾಮಗಳ ಕುರಿತು ಸಾರ್ವಜನಿಕರು ಎಚ್ಚರ ವಹಿಸಬೇಕೆಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|ಜಗದೀಶ್‌ ನುಚ್ಚಿನ್‌ ಮಾತನಾಡಿ, ಕರ್ನಾಟಕದಲ್ಲಿ ಪ್ರತಿ ವರ್ಷ ಸಿಗರೇಟ್‌ನಿಂದ 479 ಟನ್‌, ಬೀಡಿಗಳಿಂದ 3169 ಟನ್‌, ಹೊಗೆರಹಿತ ತಂಬಾಕು ಉತ್ಪನ್ನಗಳಿಂದ 638 ಟನ್‌ ಹಾಗೂ ಎಲ್ಲಾ ತರಹದ ತಂಬಾಕು ಉತ್ಪಾದಿಸಲು 4286 ಟನ್‌ ಪ್ಲಾಸ್ಟಿಕ್‌ ತ್ಯಾಜ್ಯವನ್ನು ಹೊರ ಹಾಕುತ್ತಿದೆ. ಪ್ರತಿ ವರ್ಷ ಸಿಗರೇಟ್‌ನಿಂದ 13305 ಟನ್‌, ಬೀಡಿಗಳಿಂದ 1902 ಟನ್‌, ಹೊಗೆರಹಿತ ತಂಬಾಕು ಉತ್ಪನ್ನಗಳಿಂದ 696 ಟನ್‌ ಹಾಗೂ ಎಲ್ಲಾ ತರಹದ ತಂಬಾಕು ಉತ್ಪಾದಿಸಲು 15903 ಟನ್‌ ಪೇಪರ್‌ ತ್ಯಾಜ್ಯವನ್ನು ಹೊರ ಹಾಕುತ್ತಿದ್ದು, ಇದರಿಂದ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಹೇಳಿದರು.

ಜಿಲ್ಲಾಡಳಿತ ಭವನದಿಂದ ಆರಂಭವಾದ ಜಾಥಾ ಕೆ.ಎಚ್‌. ಪಾಟೀಲ ಜಿಲ್ಲಾ ಕ್ರೀಡಾಂಗಣದವರೆಗೆ ಸಾಗಿತು. ಐಎಂಐ ಅಧ್ಯಕ್ಷ ಡಾ|ಪ್ಯಾರೀಲಿ ನೂರಾನಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಎ. ಮೌಲ್ವಿ, ಜಿಲ್ಲಾ ಆಯುಷ್‌ ಅಧಿಕಾರಿ ಡಾ|ಮಲ್ಲಿಕಾರ್ಜುನ ಉಪ್ಪಿನ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ|ಆರ್‌.ಸಿ.ಬಸರೀಗಿಡದ, ಐಎಂಎ ಕಾರ್ಯದರ್ಶಿ ಅರವಿಂದ ಕೆ., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ್‌ ಚವ್ಹಾಣ, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾ
ಧಿಕಾರಿ ಉಮೇಶ ಕರಮುಡಿ ಇತರರು ಹಾಜರಿದ್ದರು. ಜಿಲ್ಲಾ ಸಮೀಕ್ಷಣಾ ಘಟಕದ ಎಸ್‌.ಎಸ್‌. ಪೀರಾ ನಿರೂಪಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.