ಕಾಂಗರೂ ಕ್ರಿಕೆಟ್ ಕೋಚ್ ಆಂಡ್ರ್ಯೂ ಮೆಕ್ಡೊನಾಲ್ಡ್ಗೆ ಕೋವಿಡ್ ಪಾಸಿಟಿವ್
Team Udayavani, Jun 1, 2022, 11:32 PM IST
ಮೆಲ್ಬರ್ನ್: ಇನ್ನೇನು ಶ್ರೀಲಂಕಾ ಪ್ರವಾಸಕ್ಕೆ ವಿಮಾನ ಏರಬೇಕು ಎನ್ನುವ ಹೊತ್ತಿನಲ್ಲೇ ಆಸ್ಟ್ರೇಲಿಯ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಆಂಡ್ರ್ಯೂ ಮೆಕ್ಡೊನಾಲ್ಡ್ಗೆ ಕೊರೊನಾ ಅಂಟಿಕೊಂಡಿದೆ.
ಅವರ ಫಲಿತಾಂಶ ಪಾಸಿಟಿವ್ ಬಂದಿದೆ. ಹೀಗಾಗಿ ಅವರು ಪ್ರವಾಸದ ಮೊದಲ ವಾರ ಲಭ್ಯರಿರುವುದಿಲ್ಲ.
ಉಳಿದಂತೆ ಎಲ್ಲರ ಫಲಿತಾಂಶ ನೆಗೆಟಿವ್ ಬಂದಿದ್ದು, ಬುಧವಾರ ಆಸ್ಟ್ರೇಲಿಯ ಟಿ20 ತಂಡ ಶ್ರೀಲಂಕಾಕ್ಕೆ ಹೊರಟಿದೆ. ಮೆಕ್ಡೊನಾಲ್ಡ್ ಮೆಲ್ಬರ್ನ್ನಲ್ಲಿ ಒಂದು ವಾರ ಕಾಲ ಐಸೊಲೇಶನ್ನಲ್ಲಿ ಇರಲಿದ್ದಾರೆ. ಜೂ. 8ರಂದು ನಡೆಯುವ ದ್ವಿತೀಯ ಟಿ20 ಪಂದ್ಯದ ವೇಳೆ ಅವರು ತಂಡವನ್ನು ಕೂಡಿಕೊಳ್ಳುವ ಸಾಧ್ಯತೆ ಇದೆ.
ಫುಲ್ -ಟೈಮ್ ಕೋಚ್ ಆದ ಬಳಿಕ ಆಂಡ್ರ್ಯೂ ಮೆಕ್ಡೊನಾಲ್ಡ್ಗೆ ಎದುರಾದ ಮೊದಲ ಸರಣಿ ಹೊಣೆಗಾರಿಕೆ ಇದಾಗಿತ್ತು. ಜಸ್ಟಿನ್ ಲ್ಯಾಂಗರ್ ರಾಜೀನಾಮೆ ನೀಡಿದ ಬಳಿಕ ಮೆಕ್ಡೊನಾಲ್ಡ್ ಉಸ್ತುವಾರಿ ಕೋಚ್ ಆಗಿದ್ದರು. ಅವರ ಗೈರಲ್ಲಿ ಸಹಾಯಕ ಕೋಚ್ ಮೈಕಲ್ ಡಿ ವೆನುಟೊ ತಂಡಕ್ಕೆ ಮಾರ್ಗದರ್ಶನ ನೀಡಲಿದ್ದಾರೆ.
ಇದೊಂದು ಸುದೀರ್ಘ ಸರಣಿಯಾಗಿದ್ದು, 3 ಟಿ20,5 ಏಕದಿನ, 2 ಟೆಸ್ಟ್ ಪಂದ್ಯಗಳನ್ನು ಆಡಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.