ಕಿಸಾನ್ ಸಮ್ಮಾನ್ ಯೋಜನೆ: ರೈತರಿಗೆ ನೇರ ಸಹಾಯಧನ ವರ್ಗಾವಣೆ ಮಾಡಿದ ಸಿಎಂ
Team Udayavani, Jun 2, 2022, 3:33 PM IST
ಬೆಂಗಳೂರು: ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿಯೋಜನೆಯಡಿ ರಾಜ್ಯದ 47.83 ಲಕ್ಷ ರೈತರಿಗೆ 956.71 ಕೋಟಿ ರೂ.ಗಳ ಆರ್ಥಿಕ ಸಹಾಯಧನವನ್ನು ರಾಜ್ಯ ಸರಕಾರ ವರ್ಗಾಯಿಸಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ರೈತರ ಖಾತೆಗಳಿಗೆ ಸಹಾಯಧನ ವರ್ಗಾಯಿಸಿದ್ದು, 2018-19 ರಿಂದ 2021-22 ರವರೆಗೆ ಭಾರತ ಸರ್ಕರದಿಂದ ಅನುಮೋದಿಸಲ್ಪಟ್ಟ ರೈತ ಕುಟುಂಬಗಳಿಗೆ ಒಟ್ಟು 3864.66 ಕೋಟಿ ರೂ. ಪಾವತಿಯಾದಂತಾಗಿರುತ್ತದೆ.
2021-22 ನೇ ಸಾಲಿನಲ್ಲಿ 50.35 ಲಕ್ಷ ರೈತರಿಗೆ 1975.12 ಕೋಟಿ ರೂ.ಗಳ ಆರ್ಥಿಕ ನೆರವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಯೋಜನೆಯಡಿ ಎಲ್ಲಾ ಪಾವತಿಗಳನ್ನು ಸಾಧ್ಯವಾದಷ್ಟು ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಮಾಡಲಾಗಿದೆ.
ದೇಶದ ಎಲ್ಲಾ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯವು ಅತಿಹೆಚ್ಚು ಅಂದರೆ 96% ರಷ್ಟು ಆಧಾರ್ ಆಧಾರಿತ ಪಾವತಿಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ರಾಜ್ಯವಾಗಿದ್ದು, ಕಳೆದ ಬಾರಿ 2020-21 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯದ ಕೃಷಿ ಇಲಾಖೆಗೆ ಪ್ರಶಸ್ತಿಯು ಲಭಿಸಿದೆ. 2019 ರಿಂದ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಅರ್ಹ ರೈತರಿಗೆ ಹೆಚ್ಚುವರಿಯಾಗಿ 4 ಸಾವಿರ ರೂ.ಗಳ ಆರ್ಥಿಕ ನೆರವನ್ನು ಎರಡು ಕಂತುಗಳಲ್ಲಿ ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿಯೋಜನೆಯಡಿ ನೀಡುತ್ತಿದೆ. ಆಧಾರ್ ಗುರುತಿನ ಸಂಖ್ಯೆಯಾಧಾರದ ಮೇಲೆ ನೇರ ನಗದು ವರ್ಗಾವಣೆ ಪ್ರಕ್ರಿಯೆ ಮೂಲಕ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.