ಕೈಗಾರಿಕಾ ಪ್ರದೇಶದಲ್ಲಿ ಗಾಳಿ ಗುಣಮಟ್ಟ ಪರೀಕ್ಷೆ

Team Udayavani, Jun 2, 2022, 3:59 PM IST

15air

ಹುಮನಾಬಾದ: ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿನ ವಿವಿಧ ಕೈಗಾರಿಕಾ ಘಟಕಗಳು ವಿಪರೀತ ವಾಯು ಮಾಲಿನ್ಯ ಉಂಟು ಮಾಡುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಬಳ್ಳಾರಿಯ ವಾಯು ಮಾಲಿನ್ಯ ಪರೀಕ್ಷೆ ನಡೆಸುವ ವಾಹನ ಬುಧವಾರ ಕೈಗಾರಿಕಾ ಪ್ರದೇಶದಲ್ಲಿನ ಗಾಳಿ ಗುಣಮಟ್ಟ ಪರೀಕ್ಷೆ ನಡೆಸುವ ಕಾರ್ಯ ಆರಂಭಿಸಿದೆ.

ಕಳೆದ ಒಂದು ದಶಕದಿಂದ ಕೈಗಾರಿಕಾ ಪ್ರದೇಶದ ಸುತ್ತಲಿನ ಗಡವಂತಿ, ಮಾಣಿಕನಗರ, ಬಸವಂತಪೂರ್‌, ಮೋಳಕೇರಾ ಗ್ರಾಮಸ್ಥರು ಪರಿಸರಕ್ಕೆ ಹಾನಿ ಉಂಟಾಗುತ್ತಿರುವ ಕುರಿತು ಅನೇಕ ಬಾರಿ ವಾಯು ಮಾಲಿನ್ಯ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಅಲ್ಲದೆ ರಾಜಕೀಯ ಜನಪ್ರತಿನಿ ಧಿಗಳು ವಿವಿಧ ಸಂಘಟನೆಗಳು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಅಲ್ಲದೆ, ಜನಪರ ಕಾಳಜಿ ಹಿನ್ನೆಲೆಯಲ್ಲಿ 30ಕ್ಕೂ ಅಧಿಕ ವಿಶೇಷ ವರದಿಗಳು ಉದಯವಾಣಿ ಪ್ರಕಟ ಮಾಡಿತ್ತು. ಕಳೆದ ಕೆಲ ತಿಂಗಳಿಂದ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆ ಮುಖಂಡ ಭಜರಂಗ ನೇತೃತ್ವದಲ್ಲಿ ಸಂಬಂಧಿಸಿದ ರಾಜ್ಯಪಾಲರು ಸೇರಿದಂತೆ ವಿವಿಧ ಇಲಾಖೆಗಳಿಗೆ ಪತ್ರ ಬರೆದು ಪರಿಸರ ಹಾನಿ ಉಂಟು ಮಾಡುತ್ತಿರುವ ಕೈಗಾರಿಕಾ ಘಟಕಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಗಾಳಿ ಗುಣಮಟ್ಟ ಪರೀಕ್ಷೆ ನಡೆಸುವ ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆಯ ಆಧುನಿಕ ವಾಹನವೊಂದು ಪ್ರಥಮ ಬಾರಿ ಹುಮನಾಬಾದ ಪಟ್ಟಣಕ್ಕೆ ಬಂದಿದೆ. ಕಳೆದ ಅನೇಕ ವರ್ಷಗಳಿಂದ ಇಲ್ಲಿನ ಜನರ ಪರಿಸರ ಮಾಲಿನ್ಯ ಕುರಿತು ಸಲ್ಲಿಸಿದ ದೂರುಗಳ ಹಿನ್ನೆಲೆಯಲ್ಲಿ ಗಾಳಿ ಗುಣಮಟ್ಟ ಸೇರಿದಂತೆ ಇತರೆ ಪರೀಕ್ಷೆ ನಡೆಸುವ ಕಾರ್ಯ ಆರಂಭಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ವಿವಿಧೆಡೆ ಪರೀಕ್ಷೆ ನಡೆಸಲಿದೆ. ಕೈಗಾರಿಕೆಗಳ ಸುತ್ತಲಿನ ಮೂರು ಕಿ.ಮೀ. ದೂರದ ವರೆಗಿನ ಮಾಲಿನ್ಯ ಪತ್ತೆ ಮಾಡುವ ಹೈಟೆಕ್‌ ವಾಹನ ಇದಾಗಿದ್ದು, ಬೇಕಾಬಿಟ್ಟಿಯಾಗಿ ಗಾಳಿಯಲ್ಲಿ ಅನಿಲ ಬಿಡುತ್ತಿದ್ದ ಕೈಗಾರಿಕೆಗಳ ಮಾಲೀಕರಿಗೆ ಚುರುಕು ಮುಟ್ಟಿಸಿ ಸಾಧ್ಯತೆ ಇದೆ.

ಸಾರ್ವಜನಿಕರು ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ನೀಡಿದ ತಕ್ಷಣ ಮಂಡಳಿಯ ಅಧಿಕಾರಿಗಳು ಬಳ್ಳಾರಿಯಲ್ಲಿ ಸ್ಥಾಪಿಸಲಾಗಿರುವ ಕೇಂದ್ರದ ಅಧಿಕಾರಿಗಳಿಗೆ ಸಂದೇಶ ರವಾನಿಸಿ ಅಲ್ಲಿಯ ಅಧಿಕಾರಿಗಳು ತಕ್ಷಣ ಕೈಗಾರಿಕೆ ಪ್ರದೇಶಕ್ಕೆ ವಾಹನ ಕಳಿಸುತ್ತಿದ್ದಾರೆ. ಆಧುನಿಕ ಉಪಕರಣ ಹೊಂದಿರುವ ಸಂಚಾರ ವಾಹನ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದೆ. ಗಾಳಿಯಲ್ಲಿ ಯಾವ ಪ್ರಮಾಣದ ಮಾಲಿನ್ಯ ಇದೆ. ಸಣ್ಣ ಪ್ರಮಾಣದ ಮಣ್ಣಿನ ಕಣಗಳು, ಅನಿಲ ಸೇರಿದಂತೆ 8 ತರಹದ ಪರೀಕ್ಷೆಯ ವರದಿ ಬರುತ್ತದೆ. ಅಲ್ಲದೇ ಯಾವ ಕಾರ್ಖಾನೆಗಳು ಎಷ್ಟು ಪ್ರಮಾಣದ ಮಾಲಿನ್ಯ ಉಂಟು ಮಾಡುತ್ತಿದ್ದಾರೆ ಎಂಬುವುದು ಗೊತ್ತಾಗಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.