ಯಕ್ಷಗಾನಕ್ಕೆ ಗಟ್ಟಿತನ ತಂದ ಕೆರೆಮನೆ ಶಂಭು ಹೆಗಡೆ

ವಿಶ್ವಮಟ್ಟದಲ್ಲಿ ಯಕ್ಷಗಾನ ಕಲೆ ವಿಸ್ತರಿಸಿದ ಕೀರ್ತಿ: ಜಿ.ಆರ್. ಪಂಡಿತ್‌

Team Udayavani, Jun 2, 2022, 4:17 PM IST

shambu-hegade

ಸಾಗರ: ಯಕ್ಷಗಾನಕ್ಕೆ ಗಟ್ಟಿತನವನ್ನು ತಂದುಕೊಟ್ಟವರು ಕೆರೆಮನೆ ಶಂಭು ಹೆಗಡೆ. ಯಕ್ಷಗಾನ ಮತ್ತು ಶಂಭು ಹೆಗಡೆ ಅವರದ್ದು ಅವಿನಾಭಾವ ನಂಟಾಗಿತ್ತು ಎಂದು ಚಿಂತಕ, ಫೋಟೋಗ್ರಾಫರ್‌, ರಂಗನಟ ಜಿ.ಆರ್. ಪಂಡಿತ್‌ ಹೇಳಿದರು.

ಇಲ್ಲಿನ ಸಾಹಿತ್ಯ ಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಕೆರೆಮನೆ ಶಂಭು ಹೆಗಡೆ ದತ್ತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿ, ಶಂಭು ಹೆಗಡೆ ಅವರು ತಮಗೆ ನೀಡಿದ ಪಾತ್ರ ಹಾಗೂ ಕಾರ್ಯಗಳಲ್ಲಿ ತಮ್ಮನ್ನು ತಾವು ಆಳವಾಗಿ ತೊಡಗಿಸಿಕೊಳ್ಳುವ ಮೂಲಕ ತಮ್ಮ ಬದ್ಧತೆಯನ್ನು ಸಾಕಾರಗೊಳಿಸುತ್ತಿದ್ದರು. ಬದುಕಿನ ಜೊತೆ ಯಕ್ಷಗಾನವನ್ನು ಬಹು ಎತ್ತರಕ್ಕೆ ಕೊಂಡೊಯ್ದ ಅಪರೂಪದ ಕಲಾವಿದ ಅವರು. ಪ್ರೇಕ್ಷರ ಮನಮುಟ್ಟುವಂತೆ ಪಾತ್ರಗಳನ್ನು ನಿರ್ವಹಿಸುವ ಕಲಾತ್ಮಕತೆ ಅವರಲ್ಲಿತ್ತು. ರಂಗಸಜ್ಜಿಕೆಗೆ ಹೊಸ ಆಯಾಮವನ್ನು ನೀಡಿ, ಆಯಾಯ ಕಾಲಘಟ್ಟಕ್ಕೆ ಪೂರಕವಾದ ರೀತಿಯಲ್ಲಿ ಭಾವಾಭಿನಯಗಳ ಮೂಲಕ ಜನರ ಮನಸ್ಸಲ್ಲಿ ಆಳವಾಗಿ ಗುರುತಿಸಿಕೊಂಡಿದ್ದರು ಎಂದು ಹೇಳಿದರು.

ಯಕ್ಷಗಾನ ಎನ್ನುವುದು ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಲೋಕದಲ್ಲಿ ವಿಶಿಷ್ಟವಾದ ಪರಂಪರೆಯನ್ನು ಹೊಂದಿದೆ. ಅನೇಕ ದಿಗ್ಗಜರು ಯಕ್ಷಗಾನ ಕ್ಷೇತ್ರವನ್ನು ಶ್ರೀಮಂತವಾಗಿಸಿದ್ದಾರೆ. ಯಕ್ಷಗಾನ ಕಲೆಯನ್ನು ವಿಶ್ವಮಟ್ಟದಲ್ಲಿ ವಿಸ್ತರಿಸಿದ ಕೀರ್ತಿ ಶಂಭು ಹೆಗಡೆ ಅವರಿಗೆ ಸಲ್ಲುತ್ತದೆ. ಕೆರೆಮನೆ ಶಂಭು ಹೆಗಡೆ ಅವರನ್ನು ನೆನಪು ಮಾಡಿಕೊಳ್ಳುವಂತಹ ಕಾರ್ಯವನ್ನು ದತ್ತಿ ಉಪನ್ಯಾಸದ ಮೂಲಕ ಕನ್ನಡ ಸಾಹಿತ್ಯ ಪರಿಷತ್‌ ಮಾಡುತ್ತಿರುವ ಕಾರ್ಯ ಅಭಿನಂದನೀಯ ಎಂದರು.

ದತ್ತಿ ಒದಗಿಸಿದ ಹಿರಿಯ ಸಾಹಿತಿ ಡಾ| ಜಿ.ಎಸ್.ಭಟ್‌ ಮಾತನಾಡಿ, ದತ್ತಿ ನೀಡುವುದು ಸಹಜವಾದ ಪ್ರಕ್ರಿಯೆಯಾದರೂ ಸಹ ಈ ಮೂಲಕ ದತ್ತಿಯ ಆಶಯಕ್ಕೆ ಮಹತ್ವವನ್ನು ನೀಡುವ ಕೆಲಸವಾಗುತ್ತಿರುವುದು ವಿಶೇಷವಾಗಿದೆ. ಯಕ್ಷಗಾನದಲ್ಲಿ ಪಾತ್ರ ನಿರ್ವಹಣೆ ಅತಿ ಮುಖ್ಯವಾಗಿದೆ. ನೈಜವಾದ ವಿಚಾರವನ್ನು ಜನರಿಗೆ ತಿಳಿಸುವ ಕಾರ್ಯ ಯಕ್ಷಗಾನದಿಂದ ಮಾತ್ರ ಸಾಧ್ಯ. ಕೆರೆಮನೆ ಶಂಭು ಹೆಗಡೆಯವರು ತಮ್ಮ ಜೀವಮಾನದುದ್ದಕ್ಕೂ ಯಕ್ಷಗಾನವನ್ನು ಉಳಿಸಿ ಬೆಳೆಸಿದವರು. ಅವರ ಕಾರ್ಯಕ್ಷಮತೆ ನಾಡಿಗೆ ನಾಡಿಗೆ ಮೆಚ್ಚುವಂತಿದೆ ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿ.ಟಿ.ಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಭಾರತೀಯ ಜೀವವಿಮಾ ನಿಗಮದ ಎಂ.ಎಲ್.ಭಟ್‌ ಉಪಸ್ಥಿತರಿದ್ದರು. ಮಮತಾ ಪ್ರಾರ್ಥಿಸಿದರು. ಉಮೇಶ್‌ ಹಿರೇನೆಲ್ಲೂರು ಸ್ವಾಗತಿಸಿದರು. ಕೋದಂಡ ಸಾಗರ್‌ ವಂದಿಸಿದರು. ಡಾ| ಪ್ರಸನ್ನ ಟಿ. ನಿರೂಪಿಸಿದರು.

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.