ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ : ಆರೋಪಿ, 23 ಲಕ್ಷ ರೂ.ಗಳ ಅಕ್ಕಿ ವಶ
Team Udayavani, Jun 2, 2022, 7:42 PM IST
ವಿಟ್ಲ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ವಿಟ್ಲ ಪೊಲೀಸರು ಪತ್ತೆ ಹಚ್ಚಿ, ಒಬ್ಬ ಆರೋಪಿ ಮತ್ತು ಸೊತ್ತುಗಳನ್ನು ವಶಕ್ಕೆ ಪಡೆದ ಘಟನೆ ಬೋಳಂತೂರು ಗ್ರಾಮದ ಎನ್.ಸಿ.ರೋಡ್ ಎಂಬಲ್ಲಿ ನಡೆದಿದೆ.
ಲಾರಿ ಚಾಲಕ ಮಡಿಕೇರಿ ಮೂಲದ ಚಂದ್ರೇಶ್ ಬಂಧಿತ ಆರೋಪಿ.
ಈತ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿಗೆ ಸುಮಾರು 15 ಟನ್ ಅಕ್ಕಿಯನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸರ ತಂಡ ದಾಳಿ ಮಾಡಿ, ಆರೋಪಿ ಮತ್ತು 313 ಗೋಣಿಚೀಲಗಳ 15 ಟನ್ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಪ್ರಭಾರ ಆಹಾರ ನಿರೀಕ್ಷಕ ಪ್ರಶಾಂತ್ ಶೆಟ್ಟಿ ಅವರು ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದ ಲಾರಿ ಮತ್ತು ಅಕ್ಕಿಯ ಮೌಲ್ಯ 23 ಲಕ್ಷ ರೂ.ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.