ಬೀಜ,ಗೊಬ್ಬರ ಕೊರತೆಯಾಗದಂತೆ ನಿಗಾವಹಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

Team Udayavani, Jun 2, 2022, 8:52 PM IST

ಬೀಜ,ಗೊಬ್ಬರ ಕೊರತೆಯಾಗದಂತೆ ನಿಗಾವಹಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆಯಾಗದಂತೆ ಹಿರಿಯ ಅಧಿಕಾರಿಗಳು ಖುದ್ದು ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗುರುವಾಗ ಕೃಷಿ ಇಲಾಖೆಯ ಆಯವ್ಯಯ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ರಾಜ್ಯದಲ್ಲಿ ಮೇ 31ರ ಮಾಹಿತಿಯಂತೆ 1.26 ಲಕ್ಷ ಮೆಟ್ರಿಕ್‌ ಟನ್‌ ಡಿಎಪಿ ಲಭ್ಯವಿದ್ದು, ಒಟ್ಟಾರೆ, 7.64 ಲಕ್ಷ ಮೆಟ್ರಿಕ್‌ ಟನ್‌ ರಸಗೊಬ್ಬರ ಲಭ್ಯವಿದೆ. ರಾಜ್ಯದ ಬೇಡಿಕೆ ಪೂರೈಸಲು ಯಾವುದೇ ಕೊರತೆ ಇಲ್ಲ. ಆದರೆ, ವ್ಯವಸ್ಥಿತವಾಗಿ ಅಗತ್ಯ ಆಧರಿಸಿ, ರಸಗೊಬ್ಬರ ಸಕಾಲದಲ್ಲಿ ಪೂರೈಸಲು ಹಿರಿಯ ಅಧಿಕಾರಿಗಳೇ ಮೇಲ್ವಿಚಾರಣೆ ನಡೆಸಿ, ಯಾವುದೇ ಕೃತಕ ಅಭಾವ ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಅಂತೆಯೇ ಬಿತ್ತನೆ ಬೀಜ ರಾಜ್ಯದಲ್ಲಿ 7.81 ಲಕ್ಷ ಕ್ವಿಂಟಾಲ್‌ ನಷ್ಟು ಲಭ್ಯವಿದ್ದು, ಬೇಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿಯೇ ಲಭ್ಯವಿದೆ. ಆದರೆ, ನಕಲಿ ಬೀಜಗಳ ಹಾವಳಿಯನ್ನು ತಪ್ಪಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಈ ಕುರಿತು ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಬೇಕು. ನಕಲಿ ಬೀಜ ಪೂರೈಕೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 114.54 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಇದರೊಂದಿಗೆ ಕಂದಾಯ ಇಲಾಖೆ ಹಾಗೂ ಜಲ ಸಂಪನ್ಮೂಲ ಇಲಾಖೆಗಳಿಂದ, ಬಂಜರು ಭೂಮಿ ಹಾಗೂ ಸವಳು-ಜವಳು ಭೂಮಿಯ ಮಾಹಿತಿ ಪಡೆದು, ಈ ವರ್ಷ ಕನಿಷ್ಠ ತಲಾ ಒಂದು ಲಕ್ಷ ಹೆಕ್ಟೇರ್‌ನಷ್ಟು ಬಂಜರು ಭೂಮಿ ಹಾಗೂ ಸವಳು-ಜವಳು ಭೂಮಿಯನ್ನು ಕೃಷಿಯೋಗ್ಯವಾಗಿ ಪರಿವರ್ತಿಸುವಂತೆ ಸೂಚಿಸಿದರು.

ಸೆಕೆಂಡರಿ ಕೃಷಿ ನಿರ್ದೇಶನಾಲಯವು ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಎಂಎಸ್‌ಎಂಇಗಳು, ಅಗ್ರಿಗೇಟರುಗಳು, ಸ್ವಸಹಾಯ ಸಂಘಗಳು, ಆಂಕರ್‌ ಬ್ಯಾಂಕಿಂಗ್‌ ಜೊತೆಗೆ ನಿಕಟ ಸಂಪರ್ಕ ಬೆಳೆಸಿ ಕಾರ್ಯ ನಿರ್ವಹಿಸಬೇಕು. ರೈತರಿಂದ ಕೃಷಿ ಉತ್ಪನ್ನ ಖರೀದಿಸುವಂತೆ ಹಲವು ಅಗ್ರಿಗೇಟರುಗಳಿಗೆ ವಿವಿಧ ಸಂದರ್ಭಗಳಲ್ಲಿ ಸಲಹೆ ನೀಡಿದ್ದೇನೆ. ಈ ಕುರಿತು ಸಮನ್ವಯ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದಲ್ಲಿ ದ್ವಿದಳ ಧಾನ್ಯ ಮತ್ತು ಎಣ್ಣೆಕಾಳು ಬೆಳೆಗಳ ಉತ್ಪಾದಕತೆಯನ್ನು ಸುಸ್ಥಿರ ಅಭಿವೃದ್ಧಿ ಗುರಿಯ ಮಟ್ಟಕ್ಕೆ ಹೆಚ್ಚಿಸಲು ಕ್ರಿಯಾ ಯೋಜನೆ ರೂಪಿಸುವಂತೆ ಸೂಚಿಸಿದರು. ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಹಂಚಿಕೆ ಮಾಡುವಾಗ ರೈತ ಉತ್ಪಾದಕ ಸಂಘಗಳಿಗೆ ಆದ್ಯತೆ ನೀಡಲು ನಿರ್ದೇಶನ ನೀಡಿದರು.

ಕೃಷಿ ಸಿಂಚಾಯಿ ಯೋಜನೆಯಡಿ 57 ತಾಲ್ಲೂಕುಗಳ 2.75 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಜಲಾನಯನ ಅಭಿವೃದ್ಧಿ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ರಾಜ್ಯದ ಪಾಲಿನ ಅನುದಾನ ಮಂಜೂರು ಮಾಡಲಾಗಿದೆ. ಈ ಯೋಜನೆಯಡಿ ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಿ, ಜಲಾನಯನ ಅಭಿವೃದ್ಧಿ ಕೆಲಸಗಳಿಗೇ ಹೆಚ್ಚಿನ ಒತ್ತು ನೀಡಬೇಕು ಹಾಗೂ ಹಿಂದಿನ ಯೋಜನೆಗಳ ಪರಿಣಾಮದ ಅಧ್ಯಯನ ವರದಿ ಸಲ್ಲಿಸುವಂತೆ ಮುಖ್ಯಂತ್ರಿಗಳು ತಿಳಿಸಿದರು.

ಕೃಷಿ ಯಾಂತ್ರೀಕರಣ ಉತ್ತೇಜನಕ್ಕಾಗಿ ಪ್ರತಿ ಎಕರೆಗೆ 250 ರೂ. ನಂತೆ ಗರಿಷ್ಠ 5 ಎಕರೆಗೆ ಡೀಸೆಲ್‌ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಯನ್ನು ಈ ಮಾಸಾಂತ್ಯದೊಳಗೆ ಜಾರಿಗೊಳಿಸಲು ಸೂಚಿಸಿದರು.

ಟಾಪ್ ನ್ಯೂಸ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.