ಬೀದರ್, ಚಿತ್ತಾಪುರ ರೈಲ್ವೇ ನಿಲ್ದಾಣದಲ್ಲಿ ಇ-ಚಾರ್ಜಿಂಗ್
Team Udayavani, Jun 3, 2022, 6:31 AM IST
ಹೊಸದಿಲ್ಲಿ: ತೈಲ ಆಮದು ತಗ್ಗಿಸಲು ಹಾಗೂ ಮಾಲಿನ್ಯ ನಿಯಂತ್ರಿಸಲು ಕೇಂದ್ರ ಸರಕಾರ ವಿದ್ಯುತ್ ಚಾಲಿತ ವಾಹನ ಗಳಿಗೆ ಉತ್ತೇಜನ ನೀಡುತ್ತಿದ್ದು, ಈ ಮಹತ್ವಾ ಕಾಂಕ್ಷೆಯ ಪ್ರಯತ್ನಕ್ಕೆ ದಕ್ಷಿಣ ಕೇಂದ್ರ ವಲಯ ರೈಲ್ವೇ ಇಲಾಖೆಯೂ ಕೈ ಜೋಡಿಸಿದೆ. ಈ ನಿಟ್ಟಿನಲ್ಲಿ ಕರ್ನಾಟಕದ ಎರಡು ರೈಲು ನಿಲ್ದಾಣಗಳು ಸೇರಿದಂತೆ ದೇಶದ 32 ರೈಲು ನಿಲ್ದಾಣಗಳಲ್ಲಿ ವಿದ್ಯುತ್ ವಾಹನಗಳ ಇ- ಚಾರ್ಜಿಂಗ್ ಸೌಲಭ್ಯ ಕಲ್ಪಿಸಲಾಗುವುದೆಂದು ರೈಲ್ವೇಯ ದಕ್ಷಿಣ ಕೇಂದ್ರ ವಲಯದ ಸಿಕಂದರಾಬಾದ್ ವಿಭಾಗ ಪ್ರಕಟಿಸಿದೆ.
ಕರ್ನಾಟಕದ ಬೀದರ್ ರೈಲ್ವೇ ನಿಲ್ದಾಣ ಮತ್ತು ಕಲಬುರಗಿ ಜಿಲ್ಲೆಯಲ್ಲಿರುವ ಚಿತ್ತಾ ಪುರ ರೈಲ್ವೇ ನಿಲ್ದಾಣಗಳಲ್ಲಿ ಚಾರ್ಜಿಂಗ್ ಕೇಂದ್ರಗಳು ಸ್ಥಾಪನೆಯಾಗ ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ಇ-ವಾಹನ ಚಾರ್ಜಿಂಗ್ ಕೇಂದ್ರ ತೆರೆಯಲು ಖಾಸಗಿ ಕಂಪೆನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುವುದು. ಈ ರೀತಿ ಸೌಲಭ್ಯ ಕಲ್ಪಿಸಿಕೊಡುವುದರಿಂದ ಜನರಿಗೆ ಸಹಾಯವಾಗುವುದರ ಜತೆ ರೈಲ್ವೇಗೂ ಆದಾಯ ಹೆಚ್ಚುತ್ತದೆ. ಈಗಾಗಲೇ ಈ ಯೋಜನೆ ಕಾರ್ಯ ರೂಪಕ್ಕೆ ಬಂದಿದ್ದು, ಮೊದಲ ಹಂತದಲ್ಲಿ ತೆಲಂಗಾಣದ ಹೈದರಾಬಾದ್ ರೈಲ್ವೇ ನಿಲ್ದಾಣದಲ್ಲಿ ಇ-ವಾಹನ ಚಾರ್ಜಿಂಗ್ ಕೇಂದ್ರ ತೆರೆಯಲಾಗಿದೆ” ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ
Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.