2024 ರಲ್ಲೂ ಮತ್ತೊಮ್ಮೆ ವಿಜೃಂಭಿಸಲಿದೆ ಬಿಜೆಪಿ

ಮೋದಿಯವರ 8 ವರ್ಷದ ಆಡಳಿತದಲ್ಲಿ ವಿಶ್ವಮಟ್ಟದಲ್ಲಿ ದೇಶದ ಹಿರಿಮೆ ಹೆಚ್ಚಳ: ಸಂಸದ ರಾಘವೇಂದ್ರ

Team Udayavani, Jun 3, 2022, 3:12 PM IST

bjp

ಶಿವಮೊಗ್ಗ: ಪ್ರಧಾನಿ ಮೋದಿ ಅವರ 8 ವರ್ಷದ ಸಮರ್ಥ ಅಭಿವೃದ್ಧಿಯ ಆಡಳಿತದ ಫಲವಾಗಿ 2024 ರಲ್ಲಿ ಮತ್ತೂಮ್ಮೆ ಬಿಜೆಪಿ ರಾಷ್ಟ್ರಾದ್ಯಂತ ವಿಜೃಂಭಿಸಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪ್ರಧಾನಿ ಅವರು ಕಳೆದ 8 ವರ್ಷಗಳಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮ ರೂಪಿಸಿ ಜಾರಿಗೊಳಿಸಿದ್ದಾರೆ. ರೈತರಿಗೆ, ಬಡವರಿಗೆ, ಕಾರ್ಮಿಕರಿಗೆ ವಿಶೇಷ ಯೋಜನೆಗಳನ್ನು ರೂಪಿಸಿದ್ದಾರೆ. ಕೋಟ್ಯಂತರ ಜನ ಇದರ ಪ್ರಯೋಜನ ಪಡೆದಿದ್ದಾರೆ. ಅವರ 8 ವರ್ಷದ ಸಾಧನೆ ಅಷ್ಟದಿಕ್ಕುಗಳಲ್ಲಿಯೂ ಪಸರಿಸಿದೆ. ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದೆ. ಅವರೇ ಹೇಳುವಂತೆ ನಾನೊಬ್ಬ ಸೇವಕ ಎಂದು ದೇಶದ ಸಮಗ್ರ ಅಭಿವೃದ್ಧಿಯ ಜೊತೆಗೆ ರಕ್ಷಣೆ, ಆಂತರಿಕ ಭದ್ರತೆಗೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ ಎಂದರು.

ಪ್ರಧಾನಿ ಮೋದಿ ಅವರು ಕೊರೊನಾ ಸಮಯದಲ್ಲಿ ಅತ್ಯಂತ ಎಚ್ಚರಿಕೆಯಿಂದ ಜನರ ಪ್ರಾಣಗಳನ್ನು ರಕ್ಷಿಸಿದ್ದಾರೆ. ಅನೇಕ ಬಡರಾಷ್ಟ್ರಗಳಿಗೆ ಲಸಿಕೆಯನ್ನು ಉಚಿತವಾಗಿ ನೀಡಿದ್ದಾರೆ. ಅವರ ವಿದೇಶಾಂಗ ನೀತಿ ಜಗತ್ತಿನ ಗಮನ ಸೆಳೆದಿದೆ. 110 ಕ್ಕೂ ಹೆಚ್ಚು ಬಾರಿ ವಿದೇಶ ಪ್ರವಾಸ ಮಾಡಿದ್ದಾರೆ. 60 ಕ್ಕೂ ಹೆಚ್ಚು ದೇಶಗಳಿಗೆ ಭೇಟಿ ನೀಡಿದ್ದಾರೆ. ಅಮೆರಿಕದ ಸಂಸತ್‌ ಭವನ ಕೂಡ ಅವರನ್ನು ಅಭಿನಂದಿಸಿದೆ. ಆಂತರಿಕ ಭದ್ರತೆಯ ವಿಷಯದಲ್ಲಿ ಇಡೀ ವಿಶ್ವವೇ ಅಚ್ಚರಿಪಡುವಷ್ಟು ಕ್ರಮ ತೆಗೆದುಕೊಂಡಿದ್ದಾರೆ. ಕಾಶ್ಮೀರ ವಿಷಯ, ಅರುಣಾಚಲ ಪ್ರದೇಶದಲ್ಲಿ ರಕ್ಷಣೆ, ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿ, ಪಾಕಿಸ್ತಾನವನ್ನು ಒಂಟಿಯಾಗಿ ಮಾಡಿದ್ದು ಇತಿಹಾಸ ಎಂದರು. 370 ನೇ ವಿಧಿ ರದ್ದು, ರಾಮಮಂದಿರ ಸೇರಿದಂತೆ ಇಡೀ ರಾಷ್ಟ್ರಾದ್ಯಂತ ಹಿಂದೂ ದೇವಾಲಯಗಳ ಪುನರುಜ್ಜೀವನಗೊಳಿಸಿದ್ದು, ಯೋಗಕ್ಕೆ ಒತ್ತುಕೊಟ್ಟಿದ್ದು ಉಕ್ರೇನ್‌ ಯುದ್ಧದಲ್ಲಿ 23 ಸಾವಿರ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿ ಭಾರತಕ್ಕೆ ವಾಪಸ್‌ ಕರೆಸಿಕೊಂಡಿದ್ದು ಮೋದಿ ಅವರ ಸಾಧನೆ ಎಂದು ಕೊಂಡಾಡಿದರು.

ದೇಶವನ್ನು ಬಲಿಷ್ಠಗೊಳಿಸಿದ್ದಲ್ಲದೇ ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಶಿಕ್ಷಣ, ಆರೋಗ್ಯ, ಭದ್ರತೆ, ಕೈಗಾರಿಕಾ ಅಭಿವೃದ್ಧಿ ಹೀಗೆ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಯಾಗಿದೆ. ಪ್ರಧಾನ ಮಂತ್ರಿಗಳ ಅನೇಕ ಜನಪ್ರಿಯ ಯೋಜನೆಗಳಿಂದ ಕೋಟಿ ಕೋಟಿ ಜನ ಪ್ರಯೋಜನ ಪಡೆದಿದ್ದಾರೆ. ಬೀದಿ ಬದಿ ವ್ಯಾಪಾರಿಗಳಿಗೆ ನೆರವು ನೀಡಿದ್ದಾರೆ. 8 ಲಕ್ಷ ಹಳ್ಳಿಗಳನ್ನು ಬಹಿರ್ದೆಸೆ ಮುಕ್ತ ಮಾಡಿದ್ದಾರೆ. ಎರಡೂವರೆ ಕೋಟಿ ವಿದ್ಯುತ್‌ ಸಂಪರ್ಕ ಕಲ್ಪಿಸಿದ್ದಾರೆ. 9.5 ಕೋಟಿ ಬಡವರ ಮನೆಗಳಿಗೆ ನೀರು ನೀಡಿದ್ದಾರೆ. 45 ಕೋಟಿಗೂ ಹೆಚ್ಚು ಜನ ವಿವಿಧ ಯೋಜನೆಗಳ ಪ್ರಯೋಜನ ಪಡೆದಿದ್ದಾರೆ ಎಂದರು.

ರಾಜ್ಯ ಸರ್ಕಾರ ಕೂಡ ಅಭಿವೃದ್ಧಿಯ ಪಥದತ್ತ ಸಾಗಿದೆ. ಡಬಲ್‌ ಇಂಜಿನ್‌ ಸರ್ಕಾರದಿಂದ ಸಾಕಷ್ಟು ಯೋಜನೆಗಳು ಕಾರ್ಯರೂಪಕ್ಕೆ ಬಂದಿವೆ. ಕೇಂದ್ರದಿಂದ ಸಾಕಷ್ಟು ಹಣ ಕೂಡ ಬಂದಿದೆ. ಸ್ಮಾರ್ಟ್‌ ಸಿಟಿ ಕೆಲಸಗಳು ಮುಗಿದ ಮೇಲೆ ಅದರ ಮಹತ್ವ ಗೊತ್ತಾಗುತ್ತದೆ. ಸಣ್ಣ ಪುಟ್ಟ ತಪ್ಪುಗಳು ಇರಬಹುದು. ಅವುಗಳನ್ನು ಸರಿಪಡಿಸಲಾಗುವುದು ಎಂದರು.

ಒಟ್ಟಾರೆ, ಮೋದಿ ಅವರ 8 ವರ್ಷದ ಸಾಧನೆಯನ್ನು ಪ್ರತಿ ಬೂತ್‌ ಮಟ್ಟದಿಂದ ತಿಳಿಸಲಾಗುವುದು. ನಮ್ಮ ಕಾರ್ಯಕರ್ತರು ಮೋದಿ ಅವರ ಎಲ್ಲಾ ಯೋಜನೆಗಳ ಬಗ್ಗೆ ಅರಿವು ಮೂಡಿಸುವರು. ಈ ಎಲ್ಲಾ ಸಾಧನೆಗಳಿಂದ 2024 ರಲ್ಲಿ ಕೇಂದ್ರ ಮತ್ತು ರಾಜ್ಯಗಳಲ್ಲಿ ಬಿಜೆಪಿ ಮತ್ತೆ ವಿಜೃಂಭಿಸುತ್ತದೆ ಎಂದರು. ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್‌, ವಿಭಾಗೀಯ ಪ್ರಭಾರಿ ಗಿರೀಶ್‌ ಪಟೇಲ್‌ ಇದ್ದರು.

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.