ಕೋಡಿಹಳ್ಳಿ ಉಚ್ಛಾಟನೆ ವಿಚಾರ ಚರ್ಚೆಗೆ ಸಭೆ

ರೈತ ಸಂಘದ ಅಧ್ಯಕ್ಷರ ವಿರುದ್ಧದ ಆಪಾದನೆಯ ಪರಾಮರ್ಶೆ ಅಗತ್ಯ: ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ

Team Udayavani, Jun 3, 2022, 4:22 PM IST

kodihalli

ದಾವಣಗೆರೆ: ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ರಾಜಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಮೇಲಿನ ಭ್ರಷ್ಟಾಚಾರ ಆಪಾದನೆ ಹಾಗೂ ಕೋಡಿಹಳ್ಳಿ ಅವರನ್ನು ಸಂಘದಿಂದ ಉಚ್ಚಾಟಿಸಲಾಗಿದೆ ಎಂಬ ಹೇಳಿಕೆ ವಿಚಾರವಾಗಿ ಚರ್ಚಿಸಲು ಜೂ. 6ರಂದು ಬೆಂಗಳೂರಿನಲ್ಲಿರುವ ರೈತ ಸಂಘದ ಕೇಂದ್ರ ಕಚೇರಿಯಲ್ಲಿ ಸಭೆ ಕರೆಯಲಾಗಿದೆ ಎಂದು ಸಂಘದ ರಾಜ್ಯ ಕಾರ್ಯದರ್ಶಿ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ರಾಜಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ, ರಾಜ್ಯ ಪ್ರಧಾನ ಕಾರ್ಯದರ್ಶಿ ಬೈರೇಗೌಡ, ಕಾರ್ತಿಕ್‌, ಮಾಲತೇಶ್‌ ಪೂಜಾರಿ, ಮಹಾದೇವಿ ಎಸ್‌. ಬೇನಾಳಮಠ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಮಟ್ಟದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಈ ವಿಚಾರಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿ ಈ ಕುರಿತು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ಮಹಾದೇವಿ ಎಸ್‌. ಬೇನಾಳಮಠ ಮಾತನಾಡಿ, ರಾಜ್ಯ ರಸ್ತೆ ಸಾರಿಗೆ ನೌಕರರ ಪ್ರತಿಭಟನೆ ಹಿಂದಕ್ಕೆ ಪಡೆಯಲು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ 35 ಕೋಟಿ ರೂ. ಹಣದ ಬೇಡಿಕೆ ಇಟ್ಟಿದ್ದರು ಎಂಬ ಆಪಾದನೆ ಕೇಳಿಬಂದಿದೆ. ಈ ಆಪಾದನೆಯನ್ನು ಅಷ್ಟು ಸುಲಭವಾಗಿ ಒಪ್ಪಿಕೊಳ್ಳುವುದಿಲ್ಲ. ಈ ಬಗ್ಗೆ ಪರಾಮರ್ಶೆ ಆಗಬೇಕಾಗಿದೆ. ಈ ಕುರಿತು ಸರ್ಕಾರವೇ ತನಿಖೆ ನಡೆಸಬೇಕೆಂದು ಕೋರಿದ್ದೇವೆ. ಮೇಲ್ನೋಟಕ್ಕೆ ಈ ಆಪಾದನೆ ಹಿಂದೆ ಕೆಲವರ ರಾಜಕೀಯ ದುರುದ್ದೇಶ ಇರುವ ಸಾಧ್ಯತೆ ಇದೆ. ಇನ್ನು ಈ ವಿಚಾರವಾಗಿ ಕೋಡಿಹಳ್ಳಿಯವರು, ಒಂದು ವೇಳೆ ತಾವು ಹಣ ಪಡೆದದ್ದು ಸಾಬೀತಾದರೆ ಅಂದೇ ಸಂಘಟನೆಗೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಈ ಕುರಿತು ಎಲ್ಲರೂ ಸೇರಿ ಚರ್ಚಿಸಬೇಕಾಗಿದ್ದು, ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ಚಿನ್ನಸಮುದ್ರ ಶೇಖರ್‌ ನಾಯ್ಕ ಮಾತನಾಡಿ, ಶಿವಮೊಗ್ಗದಲ್ಲಿ ನಡೆದಿರುವ ಸಭೆಯಲ್ಲಿ ಹಾಜರಾದ ಎಚ್‌. ಆರ್‌. ಬಸವರಾಜಪ್ಪ ಸೇರಿದಂತೆ ವಿವಿಧ ಮುಖಂಡರು ಸೇರಿ ಯಾವುದೇ ಕಾರಣ ಇಲ್ಲದೆ ಪ್ರೊ| ನಂಜುಂಡಸ್ವಾಮಿ ಬಣದ ಸಂಘಟನೆಯಿಂದ ಉಚ್ಚಾಟನೆ ಮಾಡಿರುವುದಾಗಿ ಹೇಳಿಕೆ ನೀಡಿದ್ದಾರೆ. ಈ ಉಚ್ಛಾಟನೆ ಅಸಿಂಧುವಾಗಿದೆ. ಈ ಹಿಂದೆ ಪ್ರೊ| ನಂಜುಂಡಸ್ವಾಮಿ ಅವರಿದ್ದಾಗ ಅವರಿಂದಲೇ ಉಚ್ಚಾಟನೆ ಆಗಿದ್ದ ವ್ಯಕ್ತಿಗಳು ಸಭೆ ನಡೆಸಿ ಕೋಡಿಹಳ್ಳಿ ಚಂದ್ರಶೇಖರ್‌ ಅವರನ್ನು ಉಚ್ಛಾಟನೆ ಮಾಡಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ರಾಜ್ಯ ಸಮಿತಿಯ ಅನೇಕರು ಆ ಸಭೆಯಲ್ಲಿ ಭಾಗವಹಿಸಿಲ್ಲ ಎಂದು ಆಕ್ಷೇಪಿಸಿದರು. ರೈತ ಪ್ರಮುಖರಾದ ಶತಕೋಟಿ ಬಸವರಾಜಪ್ಪ, ದಾಗಿನಕಟ್ಟೆ ಬಸವರಾಜ್‌, ಭರಮಪ್ಪ ಮುಸ್ಟೂರು, ಹುಚ್ಚವ್ವನಹಳ್ಳಿ ಗಣೇಶ್‌, ಚೇತನಕುಮಾರ್‌, ಕೆ. ಬಾಬು ರಾವ್‌, ಕರೇಕಟ್ಟೆ ಕಲೀಂವುಲ್ಲಾ, ಗಂಗನಕಟ್ಟೆ ರೇವಣ್ಣ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

9–karnataka-50

Kannada Sambrama: ಸುವರ್ಣ ಮಹೋತ್ಸವ ವಿಶೇಷ; 50 ವರ್ಷದ ಹರ್ಷಕ್ಕೆ 50 ಕಾರಣ

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

Jammu: Union Minister Jitendra Singh’s brother, BJP MLA Devendra Singh Rana passed away

Jammu: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸೋದರ, ಬಿಜೆಪಿ ಶಾಸಕ ದೇವೇಂದ್ರ ಸಿಂಗ್‌ ರಾಣಾ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-renuuu

Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ

Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ

Gold worth Rs 12.95 crore stolen from Nyamathi SBI Bank

Nyamathi: ಎಸ್‌ಬಿಐ ಬ್ಯಾಂಕ್ ನಿಂದ 12.95 ಕೋಟಿ ರೂ ಮೌಲ್ಯದ ಚಿನ್ನ ಕಳ್ಳತನ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

11-bng

Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ

ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

20

Deepavali: ಮೊದಲ ಬಾರಿ ಚಿನ್ನ ಮೀರಿಸಿದ ಬೆಳ್ಳಿ ಖರೀದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.