ಮೋದಿ ಪ್ರಧಾನಿಯಾದ ಮೇಲೆ ಭಾರತದ ಗೌರವ ಹೆಚ್ಚಿದೆ: ಶೋಭಾ ಕರಂದ್ಲಾಜೆ
Team Udayavani, Jun 3, 2022, 9:00 PM IST
ಬೆಂಗಳೂರು: ನರೇಂದ್ರ ಮೋದಿಯವರು ಪ್ರಧಾನಿಯಾದ ಮೇಲೆ ವಿದೇಶಗಳಲ್ಲಿ ಭಾರತಕ್ಕೆ ಹೆಚ್ಚಿನ ಗೌರವ ದೊರೆಯುತ್ತಿದೆ ಎಂದು ಕೇಂದ್ರ ಕೃಷಿ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯವರು 8 ವರ್ಷಗಳ ಅಧಿಕಾರ ಅವಧಿ ಪೂರೈಸಿದ್ದಾರೆ. 2014 ರಲ್ಲಿ ಮೋದಿಯವರು ದೇಶದಲ್ಲಿ ವಿಕಾಸ ಆಗಬೇಕು. ವಿದೇಶದಲ್ಲಿ ಭಾರತಕ್ಕೆ ಗೌರವ ಸಿಗಬೇಕು. ಭ್ರಷ್ಟಾಚಾರ ನಿರ್ಮೂಲನೆ ಆಗಬೇಕು. ದೇಶದ ಸೈನ್ಯಕ್ಕೆ ಗೌರವ ಸಿಗಬೇಕು ಎಂಬ ವಿಷಯಗಳನ್ನು ಇಟ್ಟುಕೊಂಡು ದೇಶದ ಪ್ರವಾಸ ಮಾಡಿದ್ದರು. ಎಂಟು ವರ್ಷದಲ್ಲಿ ಮೋದಿ ಮಂತ್ರಿ ಮಂಡಲದ ಯಾವುದೇ ಸಚಿವರ ಮೇಲೆ ಭ್ರಷ್ಟಾಚಾರ ಆರೋಪ ಇಲ್ಲ. ಯುಪಿಎ ಸರ್ಕಾರದ ಅವಧಿಯಲ್ಲಿ ಮನಮೋಹನ್ ಸಿಂಗ್ ವಿದೇಶಕ್ಕೆ ಹೋದರೆ ಅವರನ್ನು ಗೌರವದಿಂದ ನೋಡುತ್ತಿರಲಿಲ್ಲ. ಈಗ ನಮ್ಮ ಪ್ರಧಾನಿ ವಿದೇಶಕ್ಕೆ ಹೋದರೆ ಕೆಂಪು ಹಾಸಿನ ಸ್ವಾಗತ ದೊರೆಯುತ್ತದೆ. ವಿದೇಶದಲ್ಲಿ ಮೋದಿಗೆ ಗೌರವ ದೊರೆತರೆ ಅದು ಭಾರತಕ್ಕೆ ಸಿಕ್ಕ ಗೌರವ ಎಂದು ಹೇಳಿದರು.
ಸೈನ್ಯಕ್ಕೆ ಬೇಕಾದ ಎಲ್ಲ ಪರಿಕರಗಳನ್ನು ಸ್ವಾವಲಂಬಿ ಭಾರತದ ಮೂಲಕ ಇಲ್ಲಿಯೇ ಉತ್ಪಾದನೆ ಮಾಡುವ ಕೆಲಸ ಆಗುತ್ತಿದೆ. ದೇಶದ ಸೈನಿಕರಿಗೆ ವೈರಿಗಳ ವಿರುದ್ಧ ಗುಂಡು ಹೊಡೆಯುವ ಸ್ವಾತಂತ್ರ್ಯವನ್ನು ಮೋದಿಯವರು ಕೊಟ್ಟಿದ್ದಾರೆ. ಮನಮೋಹನ್ ಸಿಂಗ್ ಕಾಲದಲ್ಲಿ 10 ವರ್ಷ ಕೇವಲ ಭ್ರಷ್ಟಾಚಾರ ನಡೆಯಿತು.
ಈಗ ವಿದೇಶಿ ಕಂಪನಿಗಳು ಬಂಡವಾಳ ಹೂಡಿಕೆಗೆ ಮುಂದೆ ಬರುತ್ತಿದ್ದಾರೆ. ದೇಶದಲ್ಲಿ 11 ಕೋಟಿ ಶೌಚಾಲಯ ನಿರ್ಮಾಣ ಮಾಡಲಾಗಿದೆ. 12 ಕೋಟಿ ಉಜ್ವಲ ಗ್ಯಾಸ್ ವಿತರಣೆ, ಬಡವರ ಮನೆಗಳಿಗೆ ದೀನದಯಾಳ್ ಉಪಾಧ್ಯಾಯ ಯೋಜನೆ ಅಡಿಯಲ್ಲಿ ವಿದ್ಯುತ್ ನೀಡುವ ಕೆಲಸ ಮಾಡಿದ್ದಾರೆ ಎಂದರು.
ರೈತರ ಆದಾಯ ದ್ವಿಗುಣಕ್ಕೆ ಆದ್ಯತೆ:
ಕೃಷಿಕರ ಆದಾಯ ದ್ವಿಗುಣ ಗೊಳಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ಅದಕ್ಕಾಗಿ ರೈತರಿಗೆ ಯಾಂತ್ರೀಕರಣ ಮಾಡಲು ಸಹಾಯಧನ ನೀಡಲಾಗುತ್ತಿದೆ. ಹನಿ ನೀರಾವರಿ ಯೋಜನೆ, ಎಫ್ ಪಿ ಒ ಮೂಲಕ ಮಾರುಕಟ್ಟೆ ಸೃಷ್ಟಿಸಲಾಗುತ್ತಿದೆ. ಇದರಿಂದ ರೈತರ ಆದಾಯ ಹೆಚ್ಚಳವಾಗುತ್ತಿದೆ ಎಂದರು.
2013 ರ ವರೆಗೆ ಕೃಷಿಗೆ 23000 ಕೋಟಿ ರೂ. ಕೇಂದ್ರ ಬಜೆಟ್ ನಲ್ಲಿ ಇಡಲಾಗುತ್ತಿತ್ತು. ಮೋದಿಯವರು 1,32 ಲಕ್ಷ ಕೋಟಿ ಮೀಸಲಿಟ್ಟಿದ್ದಾರೆ. ಅಲ್ಲದೇ ಕಿಸಾನ್ ಸಮ್ಮಾನ್ ಯೋಜನೆ ಮೂಲಕ 11 ಕೋಟಿ ರೈತರಿಗೆ 1.80. ಲಕ್ಷ ಕೋಟಿ ರೂ. ನೇರ ಪಾವತಿ ಮೂಲಕ ರೈತರ ಅಕೌಂಟ್ ಗಳಿಗೆ ವರ್ಗಾವಣೆ ಮಾಡಲಾಗಿದೆ.
ಕೇಂದ್ರ ಸರ್ಕಾರ ರಫ್ತಿಗೆ ಹೆಚ್ಚಿನ ಆದ್ಯತೆ ನೀಡಿದೆ. ಕೊರೊನಾ ಸಂದರ್ಭದಲ್ಲಿ ಅನೇಕ ಯುವಕರು ಕೃಷಿಯಲ್ಲಿ ತೊಡಗಿಕೊಂಡ ಪರಿಣಾಮ 3 ಮಿಲಿಯನ್ ಮೆಟ್ರಿಕ್ ಟನ್ ಆಹಾರ ಧಾನ್ಯ ಉತ್ಪಾದನೆ ಮಾಡಲಾಗಿದೆ. ತರಕಾರಿ ಹಾಗೂ ತೋಟಗಾರಿಕೆ ಬೆಳೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಯಿತು ಎಂದು ಹೇಳಿದರು.
ಪದಗಳ ವ್ಯತ್ಯಾಸವಾದರೆ ಸರಿಪಡಿಸಲಿ:
ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವುದೇ ವ್ಯಕ್ತಿ ಅಥವಾ ಸರ್ಕಾರ ಬಸವಣ್ಣ ಹಾಗೂ ಕುವೆಂಪುಗೆ ಅವಮಾನ ಮಾಡುವುದಿಲ್ಲ. ಯಾವುದೇ ಪಕ್ಷದವರು ಬಸವಣ್ಣನವರ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಕೆಲವು ಪದಗಳಲ್ಲಿ ವ್ಯತ್ಯಾಸವಾಗಿದ್ದರೆ ಅದನ್ನು ಸರಿಪಡಿಸಲು ಕೆಲಸ ಆಗಬೇಕು ಎಂದು ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ರಾಜಕಾರಣಕ್ಕೆ ಬರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಖಂಡಿತವಾಗಿ ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ. ಕೇಂದ್ರ ಕೃಷಿ ಖಾತೆಯ ಜವಾಬ್ದಾರಿ ನೀಡಿದ್ದಾರೆ. ದೇಶದಲ್ಲಿ ಎಲ್ಲ ಕಡೆ ಪ್ರವಾಸ ಮಾಡುತ್ತಿದ್ದೇನೆ. ವಿವಿಧ ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಜ ರಾಜಕಾರಣಕ್ಕೆ ಬರುವ ಮಾತುಗಳಿಗೆ ಯಾವುದೆ ಆಧಾರ ಇಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.