ಹುಣಸೂರು: ಬಿಸಿಯೂಟದ ಹಣ ದುರುಪಯೋಗ; ಮುಖ್ಯ ಶಿಕ್ಷಕಿ ಅಮಾನತು


Team Udayavani, Jun 3, 2022, 8:30 PM IST

1-gfgdfg

ಹುಣಸೂರು : ತಾಲೂಕಿನ ಹನಗೋಡು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಸಹ ಶಿಕ್ಷಕಿ ಎಸ್.ಅಂಜಲಿ ಮಾರೀಸ್‌ರನ್ನು ಅಕ್ಷರ ದಾಸೋಹ ಯೋಜನೆಯ 4.42ಲಕ್ಷರೂ ಹಣ ದುರುಪಯೋಗದ ಹಿನ್ನೆಲೆಯಲ್ಲಿ ಡಿಡಿಪಿಐ ರಾಮಚಂದ್ರರಾಜೇ ಅರಸ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಎಸ್.ಅಂಜಲಿ ಮಾರಿಸ್‌ರವರು ಈ ಹಿಂದೆ ಹನಗೋಡು ಶಾಲೆಯಲ್ಲಿ ಪ್ರಭಾರಿ ಮುಖ್ಯ ಶಿಕ್ಷಕರಾಗಿದ್ದ ವೇಳೆ ಮಕ್ಕಳ ಅಕ್ಷರ ದಾಸೋಹ-ಬಿಸಿಯೂಟ ಯೋಜನೆಯಡಿ ಹಂತ-ಹಂತವಾಗಿ 4,42,483 ರೂಗಳು ದುರುಪಯೋಗಪಡಿಸಿಕೊಂಡಿರುವುದು ಅಕ್ಷರ ದಾಸೋಹದ ಶಿಕ್ಷಣಾಧಿಕಾರಿಗಳ ತನಿಖೆಯಿಂದ ಬೆಳಕಿಗೆ ಬಂದಿದ್ದು, ಅವರ ವರದಿ ಆದಾರದ ಮೇಲೆ ಶಿಕ್ಷಣ ಇಲಾಖೆ ಕಾರಣ ಕೇಳಿ ನೀಡಿದ್ದ ನೋಟಿಸ್‌ಗೆ ಶಿಕ್ಷಕಿ ಅಂಜಲಿ ಮಾರಿಸ್‌ರವರು ದುರುಪಯೋಗಪಡಿಸಿಕೊಂಡಿರುವ ಹಣವನ್ನು ಶಾಲೆಯ ಅಕ್ಷರ ದಾಸೋಹ ಖಾತೆಗೆ ಹಣವನ್ನು ಜಮೆ ಮಾಡಲು ಒಪ್ಪಿ ತಪ್ಪೊಪ್ಪಿಗೆ ಪತ್ರವನ್ನು ಸಲ್ಲಿಸಿರುವ ಪರಿಣಾಮ ನಿಮ್ಮ ಮೇಲಿನ ಆರೋಪ ಸಾಬೀತಾಗಿರುತ್ತದೆ. ಇದರಿಂದಾಗಿ ನೀವು ಪ್ರಭಾರವಹಿಸಿಕೊಂಡಿದ್ದ ಅವಧಿಯ ಶಾಲೆಯಲ್ಲಿನ ಅವ್ಯವಹಾರಗಳ ಬಗ್ಗೆ ವಿಚಾರಣೆ ನಡೆಸಲು ತೀರ್ಮಾನಿಸಿ, ಶಿಸ್ತು ಕ್ರಮವಹಿಸಲು ತೀರ್ಮಾನಿಸಿದೆ, ನಿಮ್ಮ ವರ್ತನೆಯಿಂದಾಗಿ ಸಾರ್ವಜನಿಕರು ಇಲಾಖೆಯನ್ನು ಹಾಗೂ ಶಿಕ್ಷಕರನ್ನು ಅನುಮಾನದಿಂದ ನೋಡುವಂತಾಗಿದ್ದು, ಬಿಸಿಯೂಟದ ಹಣ ದುರುಪಯೋಗವನ್ನು ಗಂಭೀರವಾಗಿ ಪರಿಗಣಿಸಿ, ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಅಮಾನತುಗೊಳಿಸಲಾಗಿದೆ ಎಂದು ಡಿಡಿಪಿಐ ಪತ್ರಿಕೆಗೆ ತಿಳಿಸಿದ್ದಾರೆ.

ಹುದ್ದೆ ಬದಲಾವಣೆಯಿಂದ ಅವ್ಯವಹಾರ ಬಯಲು

ವರ್ಷದ ಹಿಂದಷ್ಟೆ ಕಾಯಂ ಮುಖ್ಯ ಶಿಕ್ಷಕಿಯಾಗಿ ಪ್ರಭಾಮಣಿ ಅಧಿಕಾರವಹಿಸಿಕೊಂಡಿದ್ದರು. ಅಕ್ಷರ ದಾಸೋಹ ಯೋಜನೆಯ ಖಾತೆಯಲ್ಲಿ ಹಣ ಬಹಳ ಕಡಿಮೆಯಿರುವುದನ್ನು ಕಂಡು, ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ಧೇಶಕರಿಗೆ ಅನುದಾನ ಬಿಡುಗಡೆ ಮಾಡುವಂತೆ ಕೋರಿದ್ದರು. ಎಲ್ಲಾ ಪ್ರೌಢಶಾಲೆಯ ಖಾತೆಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಹಣವಿತ್ತು. ಇಲ್ಲಿ ಹಣವಿಲ್ಲದ ಬಗ್ಗೆ ಅನುಮಾನಗೊಂಡು ಜಿಲ್ಲಾ ಅಕ್ಷರ ದಾಸೋಹದ ಶಿಕ್ಷಣಾಧಿಕಾರಿ ಲಿಂಗರಾಜಯ್ಯನವರೇ ಶಾಲೆಗೆ ಬಂದು ತಪಾಸಣೆ ನಡೆಸಿದ ವೇಳೆ ಹಣ ದುರುಪಯೋಗದ ಪ್ರಕರಣ ಬಯಲಿಗೆ ಬಂತು.

ಮಕ್ಕಳ ಹಣವು ದುರುಪಯೋಗ

ಅಂಜಲಿ ಮಾರೀಸ್‌ರವರು ಪ್ರಭಾರಿ ಮುಖ್ಯ ಶಿಕ್ಷಕಿಯಾಗಿದ್ದ ವೇಳೆ ಬಿಸಿಯೂಟ ಹಣ ದುರುಪಯೋಗದ ಜೊತೆಗೆ ಪಿಠೋಪಕರಣಗಳಿಗಾಗಿ ಶಾಲಾ ಮಕ್ಕಳಿಂದ ವಸೂಲಿ ಮಾಡಿದ್ದ ೪೮ ಸಾವಿರ ರೂಗಳನ್ನು ಶಾಲಾ ಖಾತೆಗೆ ಜಮೆ ಮಾಡದೆ, ಪೀಠೋಪಕರಣವನ್ನು ಮಾಡಿಸದೆ ತಮ್ಮ ಬಳಿಯೇ ಹಣವಿಟ್ಟುಕೊಂಡು ದುರುಪಯೋಗಪಡಿಸಿಕೊಂಡ ಪಡಿಸಿಕೊಂಡಿದ್ದು ಸಹ ತನಿಖೆ ವೇಳೆ ಪೋಷಕರು ಅಧಿಕಾರಿಗಳಿಗೆ ದೂರಿದ್ದರು. ಮಾರನೇ ದಿನವೇ ಈ ಹಣವನ್ನು ಖಾತೆಗೆ ಜಮೆ ಮಾಡಿದ್ದರಾದರೂ ಅಕ್ಷರದಾಸೋಹದ ಹಣ ಮಾತ್ರ ಪಾವತಿಸಿರಲಿಲ್ಲ. ತನಿಖೆ ವೇಳೆ ಸಮರ್ಪಕ ಉತ್ತರ ನೀಡಿರಲಿಲ್ಲ.

ಟಾಪ್ ನ್ಯೂಸ್

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.