ತಲವಾರಿನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ: ಪೊಲೀಸ್ ದಾಳಿ, ಬಂಧನ
Team Udayavani, Jun 4, 2022, 12:36 AM IST
ಪಡುಬಿದ್ರಿ: ಕಾರ್ಕಳ ರಸ್ತೆಯ ಮನೆಯೊಂದರಲ್ಲಿ ಮೇ 30ರಂದು ಹುಟ್ಟುಹಬ್ಬವನ್ನು ತಲವಾರಿನಿಂದ ಕೇಕ್ ಕತ್ತರಿಸಿ ಆಚರಿಸಿದ ವೇಳೆ ತಲವಾರು ಮತ್ತು ಕೊಡಲಿಗಳನ್ನೂ ಇಟ್ಟುಕೊಂಡೇ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟ ರೌಡಿಶೀಟರ್ ಜಿತೇಂದ್ರ ಶೆಟ್ಟಿ ಹಾಗೂ ಆತನ ಸಹಚರರ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿತೇಂದ್ರ ಶೆಟ್ಟಿ ಸಹಿತ ಪಲಿಮಾರಿನ ಸೂರಜ್ ಸಾಲ್ಯಾನ್, ನಡಾÕಲಿನ ತನುಜ್ ಕರ್ಕೇರ, ಪಡುಬಿದ್ರಿಯ ಅನ್ವೀಶ್, ಕೆಮ್ಮುಂಡೇಲಿನ ನಿರಂಜನ್ ಶೆಟ್ಟಿಗಾರ್, ಕಂಚಿನಡ್ಕದ ಗಣೇಶ್ ಪೂಜಾರಿ, ಪಲಿಮಾರಿನ ಶರತ್ ಶೆಟ್ಟಿ ಈ ಪ್ರಕರಣದ ಆರೋಪಿಗಳಾಗಿದ್ದಾರೆ. ದಾಳಿ ನಡೆದ ವೇಳೆ ಅಲ್ಲಿದ್ದ ರೌಡಿಶೀಟರ್ ಜಿತೇಂದ್ರ ಶೆಟ್ಟಿ ಹಾಗೂ ಗಣೇಶ್ ಪೂಜಾರಿ, ಶರತ್ ಶೆಟ್ಟಿಯನ್ನು ಬಂಧಿಸಲಾಗಿದೆ.
ಶಸ್ತ್ರಾಸ್ತ್ರ ಕಾಯ್ದೆಯಡಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪಡುಬಿದ್ರಿ ಪೊಲೀಸ್ ಠಾಣಾಧಿಕಾರಿ ಪುರುಷೋತ್ತಮ ಹಾಗೂ ಸಿಬಂದಿ ಒಂದು ತಲವಾರು, ಒಂದು ಮಚ್ಚು ಹಾಗೂ ಒಂದು ಕೊಡಲಿಯನ್ನು ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.