ಬ್ಯಾಕ್ಲಾಗ್ ಹುದ್ದೆ ಭರ್ತಿ,ಖಾಸಗಿ ಕ್ಷೇತ್ರಕ್ಕೆ ಮೀಸಲು;
ಕಾಂಗ್ರೆಸ್ ನವ ಸಂಕಲ್ಪ ಚಿಂತನ ಶಿಬಿರದಲ್ಲಿ ನಿರ್ಣಯ
Team Udayavani, Jun 4, 2022, 6:10 AM IST
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ- ಪಂಗಡ, ಹಿಂದುಳಿದ ಜಾತಿಗಳ ಬ್ಯಾಕ್ಲಾಗ್ ಹುದ್ದೆಗಳ ಭರ್ತಿ, ಖಾಸಗಿ ಕ್ಷೇತ್ರ ಹಾಗೂ ಹೊರಗುತ್ತಿಗೆಯಲ್ಲೂ ಮೀಸಲಾತಿ ಜಾರಿ ಮಾಡುವ ಸಂಬಂಧ ಕಾಂಗ್ರೆಸ್ ನವ ಸಂಕಲ್ಪ ಚಿಂತನ ಶಿಬಿರದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಸಾಂಸ್ಕೃತಿಕ ದೌರ್ಜನ್ಯ ಹಾಗೂ ಭಯೋತ್ಪಾದನೆ ವಿರುದ್ಧ ಪಕ್ಷ ಹೋರಾಟ ಮಾಡಲಿದೆ.
ಮುಸ್ಲಿಂ ಹಾಗೂ ಕ್ರಿಶ್ಚಿಯನ್ನರ ಮೇಲೆ ಸುಳ್ಳು ಮೊಕದ್ದಮೆ ದಾಖಲಿ ಸುವು ದನ್ನು ಖಂಡಿಸಿ ಆ ಜನರೊಂದಿಗೆ ದೃಢವಾಗಿ ನಿಂತು ಎಲ್ಲರಿಗೂ ರಕ್ಷಣೆ ಕೊಡುವ ಬಗ್ಗೆ ಸಂಕಲ್ಪಿಸಲಾಗಿದೆ.
ಚಿಂತನ ಶಿಬಿರ ಸಮಾರೋಪದ ಬಳಿಕ ಮಾತನಾಡಿದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಸಾಮಾಜಿಕ ನ್ಯಾಯದ ಪರ ಪಕ್ಷ. ಖಾಸಗಿ ಕ್ಷೇತ್ರದಲ್ಲಿ ಕೂಡ ಮೀಸಲಾತಿ ತರಲು ಪಕ್ಷ ಬದ್ಧವಾಗಿದೆ ಎಂದರು.
ಸಮಿತಿಗಳಿಂದ ವರದಿ ಸಲ್ಲಿಕೆ
ನವ ಸಂಕಲ್ಪ ಶಿಬಿರದ ಹಿನ್ನೆಲೆಯಲ್ಲಿ ರಚಿಸಲಾಗಿರುವ ವಿವಿಧ ಸಮಿತಿಗಳು ಕೈಗೊಂಡ ನಿಲುವುಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷರು, ವಿಪಕ್ಷ ನಾಯಕ ಹಾಗೂ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವರದಿ ಸಲ್ಲಿಸಿದರು.
ಪ್ರಮುಖ ನಿರ್ಣಯ
-ಬೂತ್ ಮಟ್ಟದಿಂದ ಪಕ್ಷ ಬಲದವರ್ಧನೆ
-ಸಾಮೂಹಿಕ ನಾಯಕತ್ವದ ಜಪ
-ಮಹಿಳೆಯರಿಗೆ ಶೇ.33 ಮೀಸಲಾತಿ,
ಯುವಕರಿಗೆ ಶೇ.50 ಆದ್ಯತೆ
-ಸರಕಾರಿ ನೇಮಕಾತಿಯಲ್ಲಿ ಕಮಿಷನ್ಗೆ ಬ್ರೇಕ್
-ಕಾಮಗಾರಿಗಳಲ್ಲಿ ಪರ್ಸಂಟೇಜ್ಗೆ ತಡೆ
-ಕರಾವಳಿ, ಕಲ್ಯಾಣ, ಮುಂಬಯಿ ಕರ್ನಾಟಕ, ಬಯಲು ಸೀಮೆ, ಬೆಂಗಳೂರು ಅಭಿವೃದ್ಧಿಗೆ ಪ್ರತ್ಯೇಕ ಪ್ರಣಾಳಿಕೆ
-ಕೃಷಿ ಕಾಯ್ದೆ ತಿದ್ದುಪಡಿ ವಾಪಸ್ಗೆ ಹೋರಾಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.