ಪ್ರೌಢಶಾಲೆಗಾಗಿ 8ರಂದು ಪ್ರತಿಭಟನೆ
Team Udayavani, Jun 4, 2022, 1:09 PM IST
ಮಸ್ಕಿ: ತಾಲೂಕಿನ ಬುದ್ದಿನ್ನಿ (ಎಸ್) ಪ್ರೌಢಶಾಲೆ ಆರಂಭಕ್ಕೆ ಒತ್ತಾಯಿಸಿ ಜೂ.8ರಂದು ಪುನರ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಸ್ಡಿಎಂಸಿ ಅಧ್ಯಕ್ಷ ನಾಗರೆಡ್ಡಿ ದೇವರಮನಿ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬುದ್ದಿನ್ನಿ ಗ್ರಾಮಕ್ಕೆ ಪ್ರೌಢಶಾಲೆ ಅಗತ್ಯವಿದೆ ಎನ್ನುವ ಬೇಡಿಕೆ ಅನುಸಾರ ಇಲ್ಲಿ ಪ್ರೌಢಶಾಲೆ ಮಂಜೂರಾಗಿದೆ. ಇದಕ್ಕಾಗಿ ಗ್ರಾಮಸ್ಥರು ಭೂಮಿ ದೇಣಿಗೆ ನೀಡಿದ್ದು, ಲಕ್ಷಾಂತರ ರೂ. ಅನುದಾನ ಖರ್ಚು ಮಾಡಿ ಶಾಲೆ ಕಟ್ಟಡ ನಿರ್ಮಾಣ ಮಾಡಲಾಗಿದೆ. ಆದರೆ, ಇದುವರೆಗೂ ಇಲ್ಲಿ ಪ್ರೌಢಶಾಲೆ ತರಗತಿಗಳು ಆರಂಭ ಮಾಡಿಲ್ಲ.
ಹಲವು ವರ್ಷಗಳಿಂದ ಬುದ್ದಿನ್ನಿ ಸೇರಿ ಸುತ್ತಲಿನ ಸುಮಾರು 10ಕ್ಕೂ ಹೆಚ್ಚು ಹಳ್ಳಿಗರು ಹೋರಾಟ ಮಾಡಿದರ ಫಲವಾಗಿ ಕಳೆದ ವರ್ಷ 2020-21ನೇ ಶೈಕ್ಷಣಿಕ ವರ್ಷದಲ್ಲಿ 8ನೇ ತರಗತಿಗಳನ್ನು ಆರಂಭ ಮಾಡಿದ್ದರು. ಸುಮಾರು 70 ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣಭ್ಯಾಸ ಮಾಡಿದ್ದಾರೆ. ಈಗ ಇಲ್ಲಿ 9ನೇ ತರಗತಿಗೆ ಶಾಲೆ ಆರಂಭ ಮಾಡಬೇಕಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಇದುವರೆಗೂ ತರಗತಿ ಆರಂಭವಾಗಿಲ್ಲ. ಈ ಬಗ್ಗೆ ಶಿಕ್ಷಣ ಇಲಾಖೆಯೂ ಚಕಾರವೆತ್ತಿಲ್ಲ. ಹೀಗಾಗಿ ಜೂ.8ರಂದು ಪುನಃ ಹೋರಾಟ ಹಮ್ಮಿಕೊಳ್ಳಲಾಗಿದೆ. ಮುದಬಾಳ ಕ್ರಾಸ್ ಬಳಿ ರಸ್ತೆ ಸಂಚಾರ ತಡೆ ನಡೆಸುವ ಮೂಲಕ ಪ್ರೌಢಶಾಲೆ ಮಂಜೂರಿಗಾಗಿ ಆಗ್ರಹಿಸಲಾಗುತ್ತದೆ ಎಂದು ಹೇಳಿದರು.
ಮುಖಂಡರಾದ ಚಂದ್ರಶೇಖರ ಕ್ಯಾತನಹಟ್ಟಿ, ಅನಿಲ್‌ಕುಮಾರ್, ದುರುಗಪ್ಪ, ಮೌನೇಶ ಸೇರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.