ಹೈದರಾಬಾದ್ ಗ್ಯಾಂಗ್ ರೇಪ್: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ, ಜನಸೇನಾ ಆಕ್ರೋಶ
ಅಪ್ರಾಪ್ತ ವಯಸ್ಕರು ಸೇರಿ ಮೂವರು ಆರೋಪಿಗಳ ಬಂಧನ
Team Udayavani, Jun 4, 2022, 2:28 PM IST
ಹೈದರಾಬಾದ್ : ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಅವರು ಸಿಎಂ ಕೆ ಚಂದ್ರಶೇಖರ ರಾವ್ ಅವರಿಗೆ ಪತ್ರ ಬರೆದು ಅಪ್ರಾಪ್ತ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಮತ್ತು ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಅತ್ಯಾಚಾರ ಘಟನೆಯ ಸಂತ್ರಸ್ತೆಗೆ ನ್ಯಾಯಕ್ಕಾಗಿ ಒತ್ತಾಯಿಸಿ ಜುಬ್ಲಿ ಹಿಲ್ಸ್ ಪಿಎಸ್‌ನಲ್ಲಿ ಜನಸೇನಾ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಹಲವರನ್ನು ವಶಕ್ಕೆ ಪಡೆದ ಪೊಲೀಸರು ಗೋಶಾಮಹಲ್ ಪೊಲೀಸ್ ಕೇಂದ್ರಕ್ಕೆ ಸ್ಥಳಾಂತರಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ಪೈಕಿ ಇದುವರೆಗೆ ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.ಬಂಧಿತರಲ್ಲಿ ಓರ್ವ 18 ವರ್ಷದ ಸಾದುದ್ದೀನ್ ಮಲಿಕ್ ಎಂದು ತಿಳಿದು ಬಂದಿದೆ.
ಇದೊಂದು ಘೋರ ಘಟನೆ. ಎಲ್ಲಾ ಅಪರಾಧಿಗಳ ವಿರುದ್ಧ ಅವರ ಹಿನ್ನೆಲೆಯನ್ನು ಲೆಕ್ಕಿಸದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ತೆಲಂಗಾಣ ಡಿಜಿಪಿ ಮತ್ತು ಪೊಲೀಸ್ ಅಧಿಕಾರಿಗಳಿಗೆ ಕಾನೂನಿನ ಕಠಿಣ ಕ್ರಮ ಕೈಗೊಳ್ಳಲು, ಎಲ್ಲಾ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲು ಈಗಾಗಲೇ ನಿರ್ದೇಶಿಸಲಾಗಿದೆ ಎಂದು ತೆಲಂಗಾಣ ಗೃಹ ಸಚಿವ ಮೊಹಮ್ಮದ್ ಅಲಿ ಹೇಳಿದ್ದಾರೆ.
ಇದನ್ನೂ ಓದಿ : ಟಿಆರ್ ಎಸ್ ನಾಯಕನ ಕಾರಿನಲ್ಲಿ ನಡೆದಿತ್ತು ಹೈದರಾಬಾದ್ ಬಾಲಕಿಯ ಗ್ಯಾಂಗ್ ರೇಪ್!
ಟಿಆರ್ ಎಸ್ ನಾಯಕನೊಬ್ಬನ ಕಾರು ಕೃತ್ಯಕ್ಕೆ ಬಳಸಿಕೊಳ್ಳಲಾಗಿದೆ ಎನ್ನುವ ವಿಚಾರ, ಪ್ರಕರಣ ರಾಜಕೀಯ ಸಂಘರ್ಷಕ್ಕೆ ತಿರುಗಲು ಕಾರಣವಾಗಿದ್ದು, ತೆಲಂಗಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
#WATCH | Telangana: JanaSena Party leaders and workers protest at Jubliee Hills PS demanding justice for the victim of the #Hyderabad rape incident.
They were later detained and shifted to Goshamahal Police HQ. Three accused, including two minors, have been arrested so far. pic.twitter.com/ImAjVaH9S5
— ANI (@ANI) June 4, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.