ರಾಜ್ಯಸಭಾ ಚುನಾವಣೆ: ಶಿವಸೇನೆಗೆ ಅಡ್ಡ ಮತದಾನ ಭೀತಿ
ನಾವು ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿದ್ದೇವೆ ಎನ್ನುವುದನ್ನು ಬಿಜೆಪಿ ಮರೆಯಬಾರದು: ರಾವುತ್
Team Udayavani, Jun 4, 2022, 3:26 PM IST
ಮುಂಬೈ: ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಮುನ್ನ, ಶಿವಸೇನೆಯು ತನ್ನ ಶಾಸಕರನ್ನು ಮುಂಬೈಗೆ ಕರೆಸಿದ್ದು, ಅಡ್ಡಮತದಾನದ ಸಾಧ್ಯತೆಗಳನ್ನು ತಪ್ಪಿಸಲು ಹೋಟೆಲ್‌ನಲ್ಲಿ ಇರಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿದೆ.
ಮಹಾರಾಷ್ಟ್ರದಿಂದ ಆರು ಮೇಲ್ಮನೆ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಏಳು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಶುಕ್ರವಾರ ಯಾವುದೇ ಅಭ್ಯರ್ಥಿ ಹಿಂದೆ ಸರಿಯದೇ ಇರುವುದರಿಂದ ಸ್ಪರ್ಧೆ ಸನ್ನಿಹಿತವಾಗಿದೆ.
ಚುನಾವಣೆಯ ಮೊದಲು ಶಾಸಕರನ್ನು ಕರೆಯುವುದು ಸಾಮಾನ್ಯ ಅಭ್ಯಾಸವಾಗಿದೆ ಎಂದು ಶಿವಸೇನೆ ನಾಯಕ ಅನಿಲ್ ದೇಸಾಯಿ ಹೇಳಿದ್ದಾರೆ.
ಬಿಜೆಪಿ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಕೇಂದ್ರ ಸಚಿವ ಪಿಯೂಷ್ ಗೋಯಲ್, ಅನಿಲ್ ಬೋಂಡೆ ಮತ್ತು ಧನಂಜಯ್ ಮಹಾದಿಕ್. ಎನ್‌ಸಿಪಿ ಪ್ರಫುಲ್ ಪಟೇಲ್ ಹೆಸರನ್ನು ಮರುನಾಮಕರಣ ಮಾಡಿದೆ. ಶಿವಸೇನೆಯು ಸಂಜಯ್ ರಾವುತ್ ಮತ್ತು ಸಂಜಯ್ ಪವಾರ್ ಅವರನ್ನು ಕಣಕ್ಕಿಳಿಸಿದೆ. ಇಮ್ರಾನ್ ಪ್ರತಾಪಗಢ ಕಾಂಗ್ರೆಸ್ ಉಮೇದುವಾರರಾಗಿದ್ದಾರೆ.
ಯಾವುದೇ ಕುದುರೆ ವ್ಯಾಪಾರ ನಡೆಯದಂತೆ ರಾಜ್ಯಸಭಾ ಚುನಾವಣೆಯ ದಿನಾಂಕಗಳನ್ನು ಮುಂದೂಡಲು ನಾವು ಬಯಸಿದ್ದೇವೆ. ವಾತಾವರಣ ಹಾಳು ಮಾಡಲು ಮತ್ತು ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳಲು ಬಿಜೆಪಿಯ ಉದ್ದೇಶ ಸ್ಪಷ್ಟವಾಗಿದೆ. ನಾವು ಇಲ್ಲಿ ಅಧಿಕಾರದಲ್ಲಿದ್ದೇವೆ, ಎನ್ನುವುದನ್ನು ಮರೆಯಬಾರದು ಎಂದು ಶಿವಸೇನೆ ನಾಯಕ ಸಂಜಯ್ ರಾವುತ್ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.