ಹೊಸಬರ ಕೈಯಲ್ಲಿ ‘ಮಾರಕಾಸ್ತ್ರ’
Team Udayavani, Jun 4, 2022, 4:16 PM IST
ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ “ಮಾರಕಾಸ್ತ್ರ’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಇತ್ತೀಚೆಗೆ ಚಿತ್ರದ ಬಗ್ಗೆ ಮಾಹಿತಿ ನೀಡಲು ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, ಚಿತ್ರದ ಕುರಿತು ಒಂದಷ್ಟು ವಿಷಯಗಳನ್ನು ಹಂಚಿಕೊಂಡಿತು.
ಚಿತ್ರದ ಬಗ್ಗೆ ಮಾತನಾಡುವ ಗುರುಮೂರ್ತಿ ಸುನಾಮಿ, “ಕೆಟ್ಟದ್ದನ್ನು ಕಂಡರೆ ಸಿಡಿದೇಳುವ ಅಸ್ತ್ರವೇ ಈ ಮಾರಕಾಸ್ತ್ರ ಎಂದು ಹೇಳಬಹುದು. ಈ ವಿಷಯದ ಕುರಿತು ನಮ್ಮ ಚಿತ್ರದ ಕಥೆ ಸಾಗುತ್ತದೆ. ಇದಕ್ಕೆ ದೇಶದ ರಕ್ಷಣೆಗಾಗಿ ಎಂಬ ಅಡಿಬರಹವಿದೆ. ಈಗಾಗಲೇ ಸಿನಿಮಾದ ಅರ್ಧದಷ್ಟು ಚಿತ್ರೀಕರಣ ಮುಗಿಸಲಾಗಿದ್ದು, ಸಿನಿಮಾದ ಬಗ್ಗೆ ಹೆಚ್ಚಿನ ವಿಷಯಗಳನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು’ ಎಂದರು.
“ನಿರ್ದೇಶಕರು ಹೇಳಿದ ಈ ಕಥೆಯಲ್ಲಿ ನಮ್ಮ ದೇಶ ರಕ್ಷಣೆಯ ಹಲವು ಅಂಶಗಳಿದೆ. ಹಾಗಾಗಿ ನಿರ್ಮಾಣಕ್ಕೆ ಮುಂದಾದೆವು. ಸಿನಿಮಾದಲ್ಲಿ ಮೂರು ಹಾಡುಗಳನ್ನು ನಾನೇ ಹಾಡಿದ್ದೀನಿ. ಸಿನಿಮಾ ತುಂಬ ಚೆನ್ನಾಗಿ ಬರುತ್ತಿದ್ದು, ಆದಷ್ಟು ಬೇಗ ತೆರೆಗೆ ತರಲಿದ್ದೇವೆ’ ಎಂದರು ನಿರ್ಮಾಪಕ ನಟರಾಜ್.
ಚಿತ್ರದ ಹಾಡುಗಳ ಬಗ್ಗೆ ಮಾತನಾಡಿದ ಸಂಗೀತ ನಿರ್ದೇಶಕ ಮಿರಾಕಲ್ ಮಂಜು, “ನಮ್ಮ ಸಿನಿಮಾದಲ್ಲಿ ಆರು ಹಾಡುಗಳಿವೆ. ಎಲ್ಲಾ ಹಾಡುಗಳನ್ನು ನಾನೇ ಬರೆದಿದ್ದೇನೆ. ಮೂರು ಹಾಡುಗಳನ್ನು ನಮ್ಮ ಚಿತ್ರದ ನಿರ್ಮಾಪಕರಾದ ನಟರಾಜ್ ಹಾಡಿದ್ದಾರೆ’ ಎಂದು ಹಾಡುಗಳ ಕುರಿತು ವಿವರಣೆ ನೀಡಿದರು.
“ಮಾರಕಾಸ್ತ್ರ’ ಚಿತ್ರದಲ್ಲಿ ಆನಂದ್ ಆರ್ಯ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಮಾಧುರ್ಯ ನಾಯಕಿಯಾಗಿದ್ದಾರೆ. ಉಳಿದಂತೆ ಶಿವಪ್ರಸಾದ್, ಪುರುಷೋತ್ತಮ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.