ಸಚಿವ ನಾಗೇಶ್ ಹೇಳಿದ ಹಿಂದೂಗಳು ಯಾರು?: ಸಿದ್ದರಾಮಯ್ಯ ಪ್ರಶ್ನೆ


Team Udayavani, Jun 5, 2022, 10:54 AM IST

ಸಚಿವ ನಾಗೇಶ್ ಹೇಳಿದ ಹಿಂದೂಗಳು ಯಾರು?: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ಕುರಿತಾಗಿ ನಡೆಯುತ್ತಿರುವ ರಾಜಕೀಯ ಸಮರ ಮುಂದುವರೆದಿದೆ. ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯ ಪರಿಷ್ಕರಣೆ ಮಾಡಲಾಗಿದೆ ಎಂಬ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದು, ಯಾರು ಆ ಹಿಂದೂಗಳು ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯ ಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೂಗಳು ಯಾರು ಎನ್ನುವುದನ್ನು ಸನ್ಮಾನ್ಯ ಸಚಿವರು ಬಹಿರಂಗ ಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದಿದ್ದಾರೆ.

‘ಪರಿಷ್ಕೃತ ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ, ಇವರನ್ನು ಪರಿಷ್ಕೃತ ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ ಎಂದು ಪ್ರತಿಭಟಿಸುತ್ತಿರುವವರು ಅನ್ಯಧರ್ಮೀಯರಲ್ಲ, ಹಿಂದೂಗಳೇ ಅಲ್ಲವೇ? ಪಠ್ಯ ಪರಿಷ್ಕರಣಾ ಸಮಿತಿಯಲ್ಲಿ ದಲಿತ ಮತ್ತು ಹಿಂದುಳಿದ ಜಾತಿಗಳ ವಿದ್ವಾಂಸರಿಗೆ ಪ್ರಾತಿನಿಧ್ಯವೇ ನೀಡಿಲ್ಲವಲ್ಲಾ? ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ? ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ ನಾಗೇಶ್ ಅವರೇ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಇನ್ನೂ ಸಿಕ್ಕಿಲ್ಲ ಸೂರು; 3 ವರ್ಷಗಳ ಹಿಂದಿನ ಸಂತ್ರಸ್ತರಿಗೆ ಸಿಗದ ಗೃಹ ಸೌಭಾಗ್ಯ

ಬಸವಣ್ಣ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತೇ? ಅವಮಾನ ಮಾಡಲಾಯಿತೇ? ನಾರಾಯಣ ಗುರು, ಪೆರಿಯಾರ್, ಕುವೆಂಪು ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿತೋರಿಸಿದ್ದಕ್ಕಾಗಿ ನಿರ್ಲಕ್ಷ್ಯ ಮಾಡಲಾಯಿತೇ?  ಹಾಗೆಂದು ಹೇಳಿಬಿಡಿ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

ಈ ದೇಶದ ಬಡವರಲ್ಲಿ ಬಹುಸಂಖ್ಯೆಯಲ್ಲಿರುವುದು ಹಿಂದೂ ಧರ್ಮದ ದಲಿತರು ಮತ್ತು ಹಿಂದುಳಿದ ಜಾತಿಗಳು. ಸರ್ಕಾರಿ ಶಾಲೆಗಳಲ್ಲಿ ಈ ಮಕ್ಕಳ ಸಂಖ್ಯೆಯೇ ಹೆಚ್ಚು. ಬುದ್ಧ, ಬಸವ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣ ಗುರು, ಕುವೆಂಪು ಅವರಿಗೆ ಆಗಿರುವ ಅವಮಾನದಿಂದ ಈ ಮಕ್ಕಳ ಭಾವನೆಗೂ ಧಕ್ಕೆಯಾಗಿದೆಯಲ್ಲವೇ? ವಿಕೃತ ಮನಸ್ಸಿನ ಕಿಡಿಗೇಡಿ ಅಧ್ಯಕ್ಷ ತಯಾರಿಸಿರುವ ಪರಿಷ್ಕೃತ ಪಠ್ಯದಿಂದ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಮಾತ್ರವಲ್ಲ, ರಾಜ್ಯದ ಆರುವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ. ಕನ್ನಡಿಗರ ಸಹನೆಯನ್ನು ಪರೀಕ್ಷಿಸಲು ಹೋಗಬೇಡಿ, ಮೊದಲು ಈ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಟಾಪ್ ನ್ಯೂಸ್

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

hdk-office

Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

courts

Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.