ಪ್ರತಿ 3ನೇ ಶನಿವಾರ ವಿದ್ಯುತ್ ಅದಾಲತ್ : ಸಚಿವ ಸುನಿಲ್ ಕುಮಾರ್
Team Udayavani, Jun 5, 2022, 3:53 PM IST
ಬೆಂಗಳೂರು: ಪ್ರತಿ 3ನೇ ಶನಿವಾರ ವಿದ್ಯುತ್ ಅದಾಲತ್ ನಡೆಬೇಕೆಂದು ಇಂಧನ ಸಚಿವ ಸುನಿಲ್ ಕುಮಾರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಈ ಕುರಿತು ಆದೇಶಿಸಿರುವ ಅವರು, ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್ ಅದಾಲತ್ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳ ಬಗ್ಗೆ ಅರಿತು, ತಕ್ಷಣ ಪರಿಹಾರ ಮಾಡಲು ಆಂದೋಲನ ರೀತಿಯ ಕಾರ್ಯಕ್ರಮ ರೂಪಿಸಬೇಕು. ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್ ಅದಾಲತ್ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕರ ಮಟ್ಟದ ಅಧಿಕಾರಿಗಳಿಂದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವರೆಗಿನ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಹೋಗಿ, ಸಮಸ್ಯೆ ಆಲಿಸಿ, ಪರಿಹಾರ ನೀಡಬೇಕು. ಎಲ್ಲರೂ ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡುವಂತೆ ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ:ನಿಮ್ಮ ನಿಮ್ಮ ಚಡ್ಡಿ ಉದುರಿಸಿಕೊಳ್ಳಿ,ರಾಜ್ಯದ ಜನತೆಯ ಚಡ್ಡಿ ಉದುರಿಸಬೇಡಿ: ಹೆಚ್ ಡಿಕೆ
ಸಹಾಯಕ ಕಾರ್ಯಪಾಲಕ ಇಂಜಿನಿಯರ್ರಿಂದ ವ್ಯವಸ್ಥಾಪಕ ನಿರ್ದೇಶಕರ ಮಟ್ಟದ ಅಧಿಕಾರಿಗಳೂ ಅಭಿಯಾನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಆದ್ಯತೆ ಮೇರೆಗೆ ತಾಲೂಕಿನ ಗಡಿ ಭಾಗದ ಹಳ್ಳಿಗಳಿಂದ ಆರಂಭಿಸಿ, ಪ್ರತಿ ಹಳ್ಳಿಗೆ ಪ್ರತಿ ಹಳ್ಳಿಗೆ ಅಭಿಯಾನ ವಿಸ್ತರಿಸಬೇಕು ಎಂದು ವಿವರಿಸಿದ್ದಾರೆ.
ವಿವಿಧ ಹಂತದ ಅಧಿಕಾರಿಗಳು ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡಿ, ಅಭಿಯಾನವನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸಬೇಕು. ಅಭಿಯಾನದ ವಿವರಗಳನ್ನು ಪ್ರತಿ ತಿಂಗಳು ನಿಗದಿತ ನಮೂನೆಯಲ್ಲಿ ನಮೂದಿಸಿ, ಮಾಹಿತಿಯನ್ನು ಸಂಬಂಧಪಟ್ಟ ವ್ಯವಸ್ಥಾಪಕ ನಿರ್ದೇಶಕರಿಗೆ ಕಳುಹಿಸಬೇಕು. ವ್ಯವಸ್ಥಾಪಕ ನಿರ್ದೇಶಕರು ಪ್ರತಿ 3ನೇ ಸೋಮವಾರ ತಪ್ಪದೇ emg 1 [email protected] ಇ-ಮೇಲ್ ಮೂಲಕ ಸರ್ಕಾರಕ್ಕೆ ಕಳುಹಿಸಬೇಕೆಂದು ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.