ತಂತ್ರಜ್ಞಾನ ಬಳಕೆ, ಪರಿಸರ ಸಂರಕ್ಷಣೆ ಸಮತೋಲನ ಸವಾಲು: ಸಚಿವ ಆನಂದ ಸಿಂಗ್
ಪರಿಸರ ಇಲಾಖೆಯಿಂದ "ವಿಶ್ವ ಪರಿಸರ ದಿನಾಚರಣೆ', ಸಾಧಕರಿಗೆ ಪ್ರಶಸ್ತಿ ಪ್ರದಾನ
Team Udayavani, Jun 5, 2022, 11:11 PM IST
ಬೆಂಗಳೂರು: ಆಧುನಿಕ ಜಗತ್ತಿನಲ್ಲಿ ವಿದೇಶಗಳೊಡನೆ ಸ್ಪರ್ಧಿಸಬೇಕಾದರೆ ಆಧುನಿಕ ತಂತ್ರಜ್ಞಾನ ಬಳಕೆ ಅತ್ಯಗತ್ಯವಾಗಿದೆ. ಇದೇ ವೇಳೆ ಅತಿ ಯಾದ ತಂತ್ರಜ್ಞಾನ ಬಳಕೆ ಪರಿಸರಕ್ಕೆ ಮಾರಕವಾಗಿದೆ. ಈ ಸಮಯದಲ್ಲಿ ಎರಡರ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಸವಾಲಿನ ವಿಷಯವಾಗಿದೆ ಎಂದು ಪರಿಸರ ಮತ್ತು ಜೀವ ವೈವಿಧ್ಯ ಇಲಾಖೆ ಸಚಿವ ಆನಂದ ಸಿಂಗ್ ತಿಳಿಸಿದರು.
ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ರವಿವಾರ ಪರಿಸರ ಇಲಾಖೆ ವತಿಯಿಂದ ಆಯೋಜಿಸಿದ್ದ “ವಿಶ್ವ ಪರಿಸರ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ವಿವಿಧ ಪ್ರಶಸ್ತಿಗಳನ್ನು ವಿತರಿಸಿ ಅವರು ಮಾತನಾಡಿದರು.
ಅರಣ್ಯ ಒತ್ತುವರಿ, ವಾಯು ಮತ್ತು ಜಲ ಮಾಲಿನ್ಯ, ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ನಾಶವಾಗುತ್ತಿದೆ. ಪರಿ ಣಾಮವಾಗಿ ಒಂದು ತಲೆಮಾರಿನಿಂದ ಮತ್ತೂಂದು ತಲೆಮಾರಿಗೆ ಮನುಷ್ಯನ ಜೀವಿತ ಅವಧಿ ಕಡಿಮೆ ಯಾಗುತ್ತಿದೆ. ಇದನ್ನು ನಾವೆಲ್ಲರೂ ಗಂಭೀರವಾಗಿ ಪರಿಗಣಿಸಬೇಕಿದೆ. ಹೀಗಾಗಿ ಪರಿಸರ ಸ್ನೇಹಿ ವಾಹನ, ಪರಿಸರ ಸ್ನೇಹಿ ವಸ್ತುಗಳನ್ನು ಬಳಸೋಣ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ| ಶಾಂತ್ ಎ. ತಿಮ್ಮಯ್ಯ ಮಾತನಾಡಿ, ಈ ಹಿಂದೆ ಘನತ್ಯಾಜ್ಯದ ಬಗ್ಗೆ ಎಲ್ಲರೂ ಆತಂಕ ವ್ಯಕ್ತಪಡಿಸಿದ್ದೆವು. ಆದರೆ ಈಗಿನ ದಿನಗಳಲ್ಲಿ ಇ-ತ್ಯಾಜ್ಯ ವಿಲೇವಾರಿ ಸಾಕಷ್ಟು ಸಮಸ್ಯೆ ಉಂಟು ಮಾಡುತ್ತಿದೆ. ಇ-ತ್ಯಾಜ್ಯವನ್ನು ಹೇಗೆ ಮರುಬಳಕೆ ಮಾಡಬೇಕು ಎಂಬು ದನ್ನು ಆಲೋಚಿಸಬೇಕಿದೆ ಎಂದರು.
ನಾಲ್ವರಿಗೆ ರಾಜ್ಯ ಪರಿಸರ ಪ್ರಶಸ್ತಿ
ರಾಜ್ಯದ ವಿವಿಧೆಡೆ ಉತ್ತಮ ಪರಿಸರ ನಿರ್ಮಾಣಕ್ಕಾಗಿ ದುಡಿಯು ತ್ತಿರುವವರಿಗೆ 2021-22ನೇ ಸಾಲಿನ ರಾಜ್ಯ ಪರಿಸರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದಕ್ಷಿಣ ಕನ್ನಡದ ಮಾಧವ ಉಳ್ಳಾಲ, ಕೋಲಾರದ ಆರ್. ರಾಜಶೇಖರನ್, ಗ್ರೀನ್ ರಾಯಚೂರು ಸಂಸ್ಥೆ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿಗೆ ಪರಿಸರ ಪ್ರಶಸ್ತಿ ನೀಡಲಾಯಿತು. ತಲಾ ಒಂದು ಲಕ್ಷ ರೂ. ಮತ್ತು ಫಲಕ ನೀಡಿ ಗೌರವಿಸಲಾಯಿತು. ಇದರ ಜತೆಗೆ ಪರಿಸರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಚಿತ್ರಕಲೆ ವಿಜೇತರಿಗೆ ಪ್ರಶಸ್ತಿ ವಿತರಣೆ, ವಿಶೇಷ ಅಂಚೆ ಲಕೋಟೆಯನ್ನು ಸಹ ಬಿಡುಗಡೆ ಮಾಡಲಾಯಿತು.ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸಹಿತ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.
ಪರಿಸರ ಸಂರಕ್ಷಣೆ ಸಂಕಲ್ಪ ಮಾಡೋಣ: ಸಿಎಂ
ಕಳೆದ 20 ವರ್ಷಗಳಲ್ಲಿ ಅರಣ್ಯವು ಅತಿ ದೊಡ್ಡ ಪ್ರಮಾಣದಲ್ಲಿ ನಾಶವಾಗಿದೆ. ಇದನ್ನು ಸರಕಾರ ಕೂಡ ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ನಾವೆಲ್ಲರೂ ಜೀವನಶೈಲಿ ಬದಲಾವಣೆ ಮಾಡಿಕೊಳ್ಳುವ ಮೂಲಕ ಉತ್ತಮ ಪರಿಸರ ನಿರ್ಮಾಣದ ಸಂಕಲ್ಪ ಮಾಡೋಣವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕಾರ್ಯಕ್ರಮಕ್ಕೆ ಆನ್‌ಲೈನ್ ಮೂಲಕ ಪರಿಸರ ದಿನದ ಶುಭಾಶಯ ಕೋರಿದ ಅವರು, ಮನುಷ್ಯನ ದುರಾಸೆಯಿಂದ ಪರಿಸರ ದಿನದಿಂದ ದಿನಕ್ಕೆ ಹೆಚ್ಚು ನಾಶವಾಗುತ್ತಿದೆ. ಮಣ್ಣಿನ ಫಲವತ್ತತೆ ಕಡಿಮೆಯಾಗುತ್ತಿದೆ. ಆದ್ದರಿಂದ ಪರಿಸರ ಸಂರಕ್ಷಣೆ ಸಂಕಲ್ಪವನ್ನು ಪ್ರತಿಯೊಬ್ಬರೂ ಮಾಡಬೇಕಿದೆ ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.