ಬಸವಣ್ಣ ಚರಿತ್ರೆ ತಿರುಚಿರುವುದು ಅಕ್ಷಮ್ಯ

Team Udayavani, Jun 6, 2022, 4:10 PM IST

Untitled-1

ಚಾಮರಾಜನಗರ: ಶಾಲಾ ಪಠ್ಯದಲ್ಲಿ ಬಸವಣ್ಣ ಅವರ ಚರಿತ್ರೆಯನ್ನು ತಿರುಚಿರು ವುದು ಅಕ್ಷಮ್ಯವಾಗಿದ್ದು, ತಕ್ಷಣವೇ ಸರ್ಕಾರ ಪುಸ್ತಕಗಳನ್ನು ವಾಪಸ್‌ ಪಡೆದು ತಿದ್ದುಪಡಿ ಮಾಡಿ ಹೊಸ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಬೇಕು ಎಂದು ಜಾಗತಿಕ ಲಿಂಗಾಯತ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಹಾಗೂ ಮುಡಿಗುಂಡ ಮಠದ ಶ್ರೀಕಂಠಸ್ವಾಮೀಜಿ ಆಗ್ರಹಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, 12ನೇ ಶತಮಾನ ದಲ್ಲಿ ಸ್ತ್ರೀ ಸಮಾನತೆ, ಸಮ ಸಮಾಜದ ನಿರ್ಮಾಣಕ್ಕೆ ಹೋರಾಡಿದ ಬಸವಣ್ಣ ಅವರು ವೈದಿಕ ಸಂಸ್ಕೃತಿಯನ್ನು ವಿರೋಧಿಸಿ ಲಿಂಗ ದೀಕ್ಷೆ ಪಡೆದಿದ್ದರು. ಹೀಗಿರುವಾಗ ಅವರು ವೈದಿಕ ಧರ್ಮ ಸ್ವೀಕರಿಸಿದ್ದರು ಎಂಬ ಅರ್ಥದಲ್ಲಿ ಪಠ್ಯ ಪುಸ್ತಕದಲ್ಲಿ ಬರೆದಿರುವುದು ತಪ್ಪು ಎಂದರು. ಸರ್ಕಾರ ಈಗ ಒತ್ತಡಕ್ಕೆ ಮಣಿದು ಪಠ್ಯ ಪರಿಷ್ಕರಣ ಸಮಿತಿಯನ್ನು ವಿಸರ್ಜನೆ ಮಾಡಿದೆ. ಆಗಿರುವ ತಪ್ಪನ್ನು ತಿದ್ದುಪಡಿ ಮಾಡಿ, ಬಸವಣ್ಣ ಅವರ ಮೂಲ ತತ್ವ ಹಾಗೂ ವ್ಯಕ್ತಿತ್ವವನ್ನು ಬಿಂಬಿಸುವ ಬರಹವನ್ನು ಸೇರಿಸಬೇಕು ಎಂದು ಆಗ್ರಹಿಸಿದರು.

ಸಮಿತಿಗೆ ಅಧ್ಯಕ್ಷರನ್ನು ನೇಮಿಸುವಾಗ ಸರ್ಕಾರ ಯೋಚನೆ ಮಾಡಬೇಕಿತ್ತು. ಏನೂ ಅನುಭವವಿಲ್ಲದ, ಸಾಮಾಜಿಕ ಜಾಲತಾಣಗಳಲ್ಲಿ ಲಘುವಾಗಿ, ಅಪಹಾಸ್ಯ ವಿಚಾರಗಳನ್ನು ಬರೆಯುವವರನ್ನು ಆಯ್ಕೆ ಮಾಡಿದ್ದು ಸರಿಯಲ್ಲ. ಈ ಬಗ್ಗೆ ಮುಖ್ಯಮಂತ್ರಿ, ಶಿಕ್ಷಣ ಸಚಿವರು ಕ್ರಮಕೈಗೊಳ್ಳಬೇಕು. ಮುಂದೆ ಇಂತಹ ಪ್ರಕರಣಗಳು ಮರುಕಳಿಸಬಾರದು ಎಂದು ಶ್ರೀಕಂಠಸ್ವಾಮೀಜಿ ಹೇಳಿದರು. ಪಠ್ಯಪುಸ್ತಕಗಳಲ್ಲಿ ಸತ್ಯವನ್ನೇ ಹೇಳಬೇಕು. ನಾವು ಯಾವುದೇ ಧರ್ಮದ ವಿರೋಧಿಗಳಲ್ಲ. ಆದರೆ, ನಮ್ಮ ಧರ್ಮದ ಅಸ್ತಿತ್ವ, ಅಸ್ಮಿತೆಗೆ ತೊಡಕುಂಟಾದಾಗ ಪ್ರತಿಭಟಿಸುವುದು ಅನಿವಾರ್ಯ ಎಂದರು.

ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಕಾಳನಹುಂಡಿ ಗುರುಸ್ವಾಮಿ ಮಾತನಾಡಿ, ಜಗತ್ತಿಗೆ ಗುರುವಾಗಿದ್ದ, ಲಿಂಗಾಯತ ಧರ್ಮವನ್ನು ಹುಟ್ಟುಹಾಕಿದ್ದ ಬಸವಣ್ಣ ಅವರ ಇತಿಹಾಸವನ್ನು ತಿರುಚಲಾಗಿದೆ. ಇದರಿಂದ ಮಕ್ಕಳಿಗೆ ತಪ್ಪು ಸಂದೇಶ ಹೋಗುತ್ತದೆ. ಪಠ್ಯಪುಸ್ತಕದಲ್ಲಿ ಮಹಾತ್ಮರು ಹಾಗೂ ಶರಣರ ಚಿಂತನೆಗಳನ್ನು ಅಳವಡಿಸಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಾಗತಿಕ ಲಿಂಗಾಯತ ವೇದಿಕೆ ಜಿಲ್ಲಾ ಘಟಕದ ಕಾನೂನು ಸಲಹೆಗಾರ ಆರ್‌.ವಿರೂಪಾಕ್ಷ ಕಾಳನಹುಂಡಿ, ಕೋಶಾಧ್ಯಕ್ಷ ಶಿವಪ್ರಸಾದ್‌, ಸಂಘಟನಾ ಕಾರ್ಯದರ್ಶಿ ಮೇಲಾಜಿಪುರದ ಬಸವ ಮಂಟಪದ ಶಿವಬಸವ ಸ್ವಾಮೀಜಿ, ಮುಖಂಡ ವಿಜಯ ಕುಮಾರ್‌ ಹೆಗ್ಗೊಠಾರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿ ಆನೆ ದಾಳಿ:ವಿಡಿಯೋ ವೈರಲ್

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.