ಜೂ.9 ರಿಂದ ಪಿಯುಸಿ ಕಾಲೇಜು ಆರಂಭ : ಪಿಯು ಬೋರ್ಡ್
Team Udayavani, Jun 6, 2022, 10:19 PM IST
ಬೆಂಗಳೂರು: ರಾಜ್ಯದ ಪದವಿಪೂರ್ವ ಕಾಲೇಜುಗಳ ಪ್ರಥಮ ಮತ್ತು ದ್ವಿತೀಯ ಪಿಯುಸಿ 2022-23ನೇ ಸಾಲಿನ ತರಗತಿಗಳು ಜೂ.9 ಆರಂಭವಾಗಲಿವೆ.
ಕಳೆದ ಎರಡು ವರ್ಷಗಳು ಕೊರೊನಾ ಕಾರಣದಿಂದ ಸರಿಯಾಗಿ ತರಗತಿಗಳು ನಡೆದಿರಲಿಲ್ಲ.
ತರಗತಿ ಆರಂಭಕ್ಕೆ ಪಿಯು ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಸುಮಾರು 3 ಸಾವಿರಕ್ಕೂ ಹೆಚ್ಚಿನ ಅತಿಥಿ ಉಪನ್ಯಾಸಕರು ಅಗತ್ಯವಿದ್ದು, ಈ ಬಗ್ಗೆ ಇಲಾಖೆಯು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಜತೆಗೆ ಮೂಲಸೌಕರ್ಯ ಸಹಿತ ಇನ್ನಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಪನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಪಿಯು ಇಲಾಖೆ ತಿಳಿಸಿದೆ.
ಇನ್ನೂ ಮುಗಿದಿಲ್ಲ ಮೌಲ್ಯಮಾಪನ
ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯ ಇನ್ನೂ ಪೂರ್ಣವಾಗಿ ಮುಗಿದಿಲ್ಲ. ಇಂಗ್ಲಿಷ್, ಲೆಕ್ಕಶಾಸ್ತ್ರ ವಿಷಯದ ಮೌಲ್ಯಮಾಪನ ಕಾರ್ಯ ನಡೆಯುತ್ತಿದ್ದು, 4-5 ದಿನಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆಗಳಿವೆ. ಜೂ.13ರಿಂದ ಎಲ್ಲ ಉಪನ್ಯಾಸಕರು ಪೂರ್ಣ ಪ್ರಮಾಣದಲ್ಲಿ ತರಗತಿಗಳಿಗೆ ಹಾಜರಾಗುವ ಸಾಧ್ಯತೆಗಳಿವೆ ಎಂದು ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್. ನಿಂಗೇಗೌಡ ತಿಳಿಸಿದ್ದಾರೆ.
ಕಾಲೇಜುಗಳಿಗೆ ಉತ್ತಮ ಬೇಡಿಕೆ
ಈ ಬಾರಿ ಖಾಸಗಿ ಪಿಯು ಕಾಲೇಜುಗಳಲ್ಲಿ ಶುಲ್ಕ ಹೆಚ್ಚಳ ಮಾಡಿರುವ ಪರಿಣಾಮ, ಸರಕಾರಿ ಕಾಲೇಜುಗಳಿಗೆ ಉತ್ತಮ ಬೇಡಿಕೆ ಬಂದಿದೆ. ಉತ್ತಮ ಮೂಲಸೌಕರ್ಯ, ಉಪನ್ಯಾಸಕರನ್ನು ಹೊಂದಿರುವ ಹಾಗೂ ಉತ್ತಮ ಫಲಿತಾಂಶ ಪಡೆದಿರುವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು