ಸಬ್ ಅರ್ಬನ್ ರೈಲು ಯೋಜನೆಗೆ ಪ್ರಧಾನಿಯಿಂದ ಶಂಕುಸ್ಥಾಪನೆ: ಸಿಎಂ ಬೊಮ್ಮಾಯಿ
Team Udayavani, Jun 7, 2022, 8:53 AM IST
ಬೆಂಗಳೂರು: ಜೂ.20 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿ, 15000 ಕೋಟಿ ರೂ.ಗಳ ಸಬ್ ಅರ್ಬನ್ ರೈಲಿಗೆ ಅಡಿಗಲ್ಲು ಹಾಕಲಿದ್ದಾರೆ. ಈ ಮೂಲಕ ಬೆಂಗಳೂರಿನ ಬಹಳ ದಿನಗಳ ಕನಸು ನನಸಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೃಹತ್ ಬೆಂಗಳೂರನ್ನು ಅಂತರರಾಷ್ಟ್ರೀಯ ಮಟ್ಟದ ಎಲ್ಲಾ ಸೌಲಭ್ಯಗಳಿರುವ ನಗರವಾಗಿ ಅಭಿವೃದ್ಧಿಗೊಳಿಸಲಾಗುವುದು. ಬೆಂಗಳೂರಿನ ಅಭಿವೃದ್ಧಿಗೆ ದಕ್ಷ ಮಂತ್ರಿಗಳ, ಶಾಸಕರ ದೊಡ್ಡ ತಂಡ ನಮ್ಮೊಂದಿಗಿದೆ. ಆಧುನಿಕವಾಗಿರುವ ಬೆಸ್ಟ್ ಬೆಂಗಳೂರನ್ನು ನಿರ್ಮಿಸಲಾಗುವುದು. ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿಯ ಆಯವ್ಯಯದಲ್ಲಿ ದೊಡ್ಡ ಮೊತ್ತದ ಅನುದಾನವನ್ನು ಮೀಸಲಿರಿಸಿದೆ. 7000 ಶಾಲಾ ಕೊಠಡಿಗಳನ್ನು ಈ ವರ್ಷ ನಿರ್ಮಿಸಲಾಗುತ್ತಿದೆ. ಬೆಂಗಳೂರಿಗೆ 6000 ಕೋಟಿ ರೂ.ಗಳ ನಗರೋತ್ಥಾನ ಯೋಜನೆಯ ಜೊತೆಜೊತೆಗೆ ಮಳೆ ಬಂದಾಗ ಸಮಸ್ಯೆಯಾಗುವ ಚರಂಡಿಗಳಿಗೆ 1600 ಕೋಟಿ ರೂ.ಗಳ ಅನುದಾನ ನೀಡಿದೆ. ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ. ಅದಲ್ಲದೆ, ವಿವಿಧ ಕಾರ್ಯಕ್ರಮಗಳಡಿಯಲ್ಲಿ ಸುಮಾರು 1000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ. ಪೆರಿಫೆರಲ್ ರಿಂಗ್ ರೋಡ್ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಜನರಿಗೆ ಅಗತ್ಯವಿರುವ ಯೋಜನೆಗಳ ಆದೇಶಗಳನ್ನು ಕೆಲವೇ ದಿನಗಳಲ್ಲಿ ನೀಡಲಾಗುವುದು. ದೊಡ್ಡ ಪ್ರಮಾಣದಲ್ಲಿ ವಿದೇಶೀ ಹೂಡಿಕೆದಾರರು ಇಲ್ಲಿ ಹೂಡಿಕೆ ಮಾಡಲು ಉತ್ಸುಕರಾಗಿದ್ದಾರೆ. ಇಂದು 52 ಸಾವಿರ ಕೋಟಿ ರೂ.ಗಳ ಯೋಜನೆಯ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಇದು ನಮ್ಮ ಕರ್ನಾಟಕ ಮತ್ತು ಬೆಂಗಳೂರಿನ ಶಕ್ತಿ ಎಂದರು.
ಇದನ್ನೂ ಓದಿ:ಮಂಕಿಪಾಕ್ಸ್ ಸೋಂಕು ಭೀತಿ: ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ನಡೆಸಲು ಸರ್ಕಾರದ ಸೂಚನೆ
ಬೆಂಗಳೂರಿನ ಅಭಿವೃದ್ಧಿ ನಮ್ಮ ಕರ್ತವ್ಯ. ಜನರ ಆಶೀರ್ವಾದದಿಂದ ಜನಸೇವೆ ಮಾಡುವ ಅವಕಾಶ ನಮಗೆ ದೊರೆತಿದೆ. ನಿರಂತರವಾಗಿ 40 ವರ್ಷಗಳ ಅಧಿಕಾರವನ್ನು ನಂಬದೇ ಜನರ ಸೇವೆಯೇ ಅಧಿಕಾರ ಎಂದು ನಂಬಿ ಕೆಲಸ ಆಡುತ್ತಿರುವ ವಿ.ಸೋಮಣ್ಣ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ. ಬಸ್ ನಿಲ್ದಾಣದಲ್ಲಿ ಬಹುಪಯೋಗಿ ಕಟ್ಟಡವನ್ನು ನಿರ್ಮಿಸಲಾಗಿದೆ. ಇದು ಜನರ ಬಗ್ಗೆ ಕಳಕಳಿ ಇರುವ ವ್ಯಕ್ತಿಗೆ ಮಾತ್ರ ಸಾಧ್ಯ ಎಂದರು.
ಬೆಂಗಳೂರಿನ ಯೋಜನಾಬದ್ಧ ಅಭಿವೃದ್ಧಿ: ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಮಾಡುವ ಸಂಕಲ್ಪವನ್ನು ನಾವು ಮಾಡಿದ್ದೇವೆ. ಬೃಹತ್ ಬೆಂಗಳೂರು ಅಂತರರಾಷ್ಟ್ರೀಯ ನಗರವಾಗಬೇಕು. ಅದಕ್ಕಾಗಿ 6000 ಕೋಟಿ ರೂ.ಗಳ ವೆಚ್ಚದಲ್ಲಿ ನಗರೋತ್ಥಾನ, 1500 ಕೋಟಿ ರೂ.ಗಳ ವೆಚ್ಚದಲ್ಲಿ ರಾಜ ಕಾಲುವೆ ನಿರ್ಮಾಣ, ಮೆಟ್ರೋ, ಸಬ್ ಅರ್ಬನ್ ರೈಲು, 12 ಕಾರಿಡಾರ್‍ಗಳ ಅಭಿವೃದ್ಧಿ, ಅಮೃತ್ ಯೋಜನೆಗಳಡಿ 75 ಕೆರೆ ಮತ್ತು ಉದ್ಯಾನಗಳ ಅಭಿವೃದ್ಧಿ ಸೇರಿದಂತೆ ಹಲವಾರು ಯೋಜನೆಗಳನ್ನು ಬೆಂಗಳೂರಿಗೆ ನೀಡಲಾಗಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಆರ್ ಅಂಡ್ ಡಿ ಕೇಂದ್ರಗಳಿವೆ. 500 ಫಾರ್ಚೂನ್ ಕಂಪನಿಗಳ ಪೈಕಿ 400 ಇಲ್ಲಿವೆ. ದಾವೋಸ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ 60 ಸಾವಿರ ಕೋಟಿ ರೂ.ಗಳಿಗಿಂತ ಹೆಚ್ಚು ಕೈಗಾರಿಕೆಗಳಿಗೆ ಅನುಮೋದನೆ ನೀಡಲಾಗಿದೆ. ದೊಡ್ಡ ಪ್ರಮಾಣದಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಅಭಿವೃದ್ಧಿ ಆಗಲಿದೆ. ಆರು ಹೊಸ ಯೋಜನಾಬದ್ಧವಾಗಿ ಎಲ್ಲಾ ಸೌಲಭ್ಯಗಳಿರುವ ನಗರಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಹೊಸ ಕಲ್ಪನೆ ಇಟ್ಟುಕೊಂಡು ಬೆಂಗಳೂರು ಹಾಗೂ ರಾಜ್ಯದ ಅಭಿವೃದ್ಧಿ ಮಾಡಲಾಗುತ್ತಿದೆ. ಕರ್ನಾಟಕದ ಭವ್ಯ ಭವಿಷ್ಯ ಬರೆಯುವ ಶಕ್ತಿ, ನಿಮ್ಮ ಭಾಗ್ಯದ ಬಾಗಿಲನ್ನು ತೆರೆಯುವ ಶಕ್ತಿ ನಿಮ್ಮ ಆಶೀರ್ವಾದದಲ್ಲಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.