ಮಕ್ಕಳಂತೆ ಗಿಡ-ಮರ ಪೋಷಣೆ ಮಾಡಿ: ಪಾಟೀಲ್ ಕರೆ
Team Udayavani, Jun 7, 2022, 12:41 PM IST
ಕಲಬುರಗಿ: ಪ್ರತಿಯೊಬ್ಬರು ತಮ್ಮ ಮಕ್ಕಳಂತೆ ಗಿಡ- ಮರವೂ ಬೆಳೆಸಿದರೆ ಪರಿಸರ ಸಂರಕ್ಷಣೆಯೊಂದಿಗೆ ಉಸಿರಾಟಕ್ಕೆ ಉತ್ತಮ ಆಮ್ಲಜನಕ ಪಡೆಯಲು ಸಾಧ್ಯ ಎಂದು ಅಫಜಲಪುರ ಕ್ಷೇತ್ರದ ಕಾಂಗ್ರೆಸ್ ಮುಖಂಡ ಹಾಗೂ ಎಚ್‌ಕೆಇ ಸೊಸೈಟಿ ಆಡಳಿತ ಮಂಡಳಿ ಸದಸ್ಯ ಅರುಣಕುಮಾರ ಎಂ.ವೈ. ಪಾಟೀಲ್ ಹೇಳಿದರು.
ತಾಲೂಕಿನ ಫಿರೋಜಾಬಾದ್ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜನಕಲ್ಯಾಣ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ, ಪರಿಸರ ದಿನಾಚರಣೆ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಸರಕಾರಿ ಕನ್ನಡ ಪ್ರೌಢಶಾಲೆಗೆ ನಿವೇಶನಕ್ಕೆ ತಾಂತ್ರಿಕ ತೊಂದರೆಗಳು ಎದುರಾಗಿವೆ. ಶೀಘ್ರದಲ್ಲಿ ಅದನ್ನು ಬಗೆಹರಿಸಿ, ಪೀಠೊಪಕರಣಗಳು ಒದಗಿಸಿಕೊಡುವುದಾಗಿ ಭರವಸೆ ನೀಡಿದರು.
ಎಚ್‌ಕೆಸಿಸಿಐ ಗೌರವ ಕಾರ್ಯದರ್ಶಿ ಶರಣು ಪಪ್ಪಾ, ಶರಣಬಸವೇಶ್ವರ ಪದವಿ ಕಾಲೇಜಿನ ಉಪನ್ಯಾಸಕ ನಾನಾಸಾಹೇಬ್ ಹಚ್ಚಡದ ಮಾತನಾಡಿದರು. ಇದೇ ವೇಳೆಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಟ್ರಸ್ಟ್‌ನಿಂದ ಮೆಡಲ್ ನೀಡಿ ಸತ್ಕರಿಸಲಾಯಿತು. ಟ್ರಸ್ಟ್ ಅಧ್ಯಕ್ಷ ವಿಶ್ವನಾಥ ಹಿರೇಮಠ ಅಧ್ಯಕ್ಷತೆವಹಿಸಿ ಮಾತನಾಡಿದರು. ಟ್ರಸ್ಟ್ ಉಪಾಧ್ಯಕ್ಷ ಯುನೂಸ್ ಪಟೇಲ್ ಸ್ವಾಗತಿಸಿದರು. ಶಶಿಕಲಾ ಕಟ್ಟಿ ನಿರೂಪಿಸಿದರು.
ಫರಹತಾಬಾದ್ ಜಿಪಂ ಮಾಜಿ ಸದಸ್ಯ ದಿಲೀಪ ಆರ್. ಪಾಟೀಲ್, ಪತ್ರಕರ್ತ ಭೀಮಾಶಂಕರ ಫಿರೋಜಾಬಾದ್, ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ತಿಬ್ಬಶೆಟ್ಟಿ, ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಖಾಜಾ ಪಟೇಲ್, ಯೂಥ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣು ಹಾಗರಗುಂಡಗಿ, ಅರಣ್ಯ ಇಲಾಖೆಯ ಅನ್ಸಾರ್ ಪಟೇಲ್, ಮುಖ್ಯಗುರು ಅಲ್ಲಾವುದ್ದಿನ್ ಮುಖ್ಯ ಅತಿಗಳಾಗಿ ಆಗಮಿಸಿದ್ದರು.
ಸಮಾರಂಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ಬಸವಲಿಂಗ ಹಾಲು, ಸಚಿನ್ ಮಾಮನಿ, ನಿವೃತ್ತ ಶಿಕ್ಷಕ ನಾಗಣ್ಣ ಧೂಳಬಾ, ಇಜಾಜ್ ಪಟೇಲ್, ಬಾಬು ಪವಾಡಿ, ಶಶಿಕಾಂತ ಕೊಡಚಿ, ಉಮೇಶ ಮಾಮನಿ, ರೇವಣಸಿದ್ದಪ್ಪ ಶ್ರೀಗಿರಿ, ಮಹಾದೇವಪ್ಪ ಭರ್ಮಾ, ಬಸವರಾಜ್ ಭಜಂತ್ರಿ ಸೇರಿದಂತೆ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.