![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 7, 2022, 3:37 PM IST
ಬೆಂಗಳೂರು: ಖ್ಯಾತ ನಟ, ಮಾಜಿ ಶಾಸಕ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಮುಖ್ಯಮಂತ್ರಿ ಚಂದ್ರು ಅವರು ಆಮ್ ಆದ್ಮಿ ಪಾರ್ಟಿಗೆ ಮಂಗಳವಾರ ಸೇರ್ಪಡೆಯಾದರು.
ಬೆಂಗಳೂರಿನ ಹೋಟೆಲ್ ಪರಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಚಂದ್ರುರವರನ್ನು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಪಕ್ಷದ ಬಾವುಟ ನೀಡುವ ಮೂಲಕ ಬರಮಾಡಿಕೊಂಡರು.
ಈ ವೇಳೆ ಮಾತನಾಡಿದಮುಖ್ಯಮಂತ್ರಿ ಚಂದ್ರು “ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಲ್ಲಿ ಪ್ರಾಮಾಣಿಕರು ಅಸ್ಪೃಶ್ಯರಾಗಿದ್ದಾರೆ. ಮೂರು ಪಕ್ಷಗಳಿಂದ ರಾಜ್ಯದ ಜನತೆಗೆ ದ್ರೋಹವಾಗಿದೆ. ಮುಂದೆಯೂ ದ್ರೋಹ ಮಾಡಲು ಹವಣಿಕೆ ಮಾಡುತ್ತಿವೆ ಎಂದರು.
ಆಮ್ ಆದ್ಮಿ ಪಾರ್ಟಿಯು ದೇಶದ ರಾಜಕೀಯವನ್ನು ಸರಿದಾರಿಗೆ ತರುತ್ತಿದೆ. ಬೇರೆಲ್ಲ ಪಕ್ಷಗಳು ಶಿಕ್ಷಣ – ಆರೋಗ್ಯ ಕ್ಷೇತ್ರಗಳನ್ನು ನಿರ್ಲಕ್ಷ್ಯಿಸಿದರೆ, ಆಮ್ ಆದ್ಮಿ ಪಾರ್ಟಿ ಸರ್ಕಾರವು ಇವುಗಳಿಗೆ ಹೆಚ್ಚಿನ ಆದ್ಯತೆ ನೀಡಿದೆ. ಈ ಮೂಲಕ ಸಮಾಜದ ಭವಿಷ್ಯವನ್ನು ಬಲಪಡಿಸುತ್ತಿದೆ. ಕರ್ನಾಟಕದಲ್ಲಿ ಎಎಪಿ ಅಧಿಕಾರ ಬಂದು ಇಲ್ಲಿ ಕೂಡ ಪಾರದರ್ಶಕ ಹಾಗೂ ಜನಪರ ಆಡಳಿತ ನೀಡಿ ಜನ ನೆಮ್ಮದಿಯಿಂದ ಬದುಕುವಂತಹ ವಾತಾವರಣ ಮೂಡಬೇಕಿದೆ ಎಂದು ಹೇಳಿದರು.
ಇದನ್ನೂ ಓದಿ:ಸಿದ್ದರಾಮಯ್ಯನಷ್ಟು ದಲಿತ ವಿರೋಧಿ ಮತ್ತೂಬ್ಬರಿಲ್ಲ: ಛಲವಾದಿ ನಾರಾಯಣ ಸ್ವಾಮಿ ಆಕ್ರೋಶ
ಸೇರ್ಪಡೆ ಸಮಾರಂಭದಲ್ಲಿ ಆಮ್ ಆದ್ಮಿ ಪಾರ್ಟಿ ಮುಖಂಡರಾದ ಕೆ.ಮಥಾಯಿ, ವಿಜಯ್ ಶರ್ಮಾ, ಶಾಂತಲಾ ದಾಮ್ಲೆ, ಮೋಹನ್ ದಾಸರಿ, ಜಗದೀಶ್ ವಿ. ಸದಂ, ಸುರೇಶ್ ರಾಥೋಡ್, ಬಿ. ಟಿ. ನಾಗಣ್ಣ, ಜಗದೀಶ್ ಚಂದ್ರ ಸೇರಿದಂತೆ ಅನೇಕ ನಾಯಕರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.