ರಾಜಕೀಯ ಪ್ರೇರಿತ ದೂರು: ಆಕ್ರೋಶ
Team Udayavani, Jun 7, 2022, 5:02 PM IST
ತುಮಕೂರು: ಕುವೆಂಪು, ಬಸವಣ್ಣ ಅವರನ್ನು ಪಠ್ಯ ಪುಸ್ತಕದಲ್ಲಿ ಅವಹೇಳನ ಮಾಡಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆ ಮಾಡುವುದು ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರ ಹಕ್ಕು. ಆದರೆ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳ ಮೇಲೆ ಜಾಮೀನು ರಹಿತ ಪ್ರಕರಣ ದಾಖಲಿಸಿರುವುದನ್ನು ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ತೀವ್ರವಾಗಿ ಖಂಡಿಸಿದರು.
ತುಮಕೂರು ಜಿಲ್ಲಾ ಕಾರಾಗೃಹದಲ್ಲಿರುವ ಎನ್ ಎಸ್‌ಯುಐ ಕಾರ್ಯಕರ್ತರನ್ನು ಸೋಮವಾರ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿದ 24 ಮಂದಿ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಪ್ರತಿಭಟಿಸಿದ ಎನ್‌ಎಸ್‌ಯುಐ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ವಿಡಿಯೋಗಳಿದ್ದರೂ ಸಹ ಎನ್‌ಎಸ್‌ಯುಐ ಕಾರ್ಯ ಕರ್ತರ ಮೇಲೆಯೇ ಹಲ್ಲೆ ಪ್ರಕರಣ ದಾಖಲಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು.
ರಾಜಕೀಯ ಪ್ರೇರಿತ ದೂರು: ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿ, ಚೆಡ್ಡಿಗೆ ಬೆಂಕಿ ಹಚ್ಚಲು ಹೋದಾಗ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಮನೆಗೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ ಎಂದು ರಾಜಕೀಯ ಪ್ರೇರಿತ ದೂರು ದಾಖಲಿಸಿದ್ದಾರೆ. ಎನ್‌ಎಸ್‌ಯುಐ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ವಿಡಿಯೋವನ್ನು ಎಡಿಟ್ ಮಾಡಿ ಹಲ್ಲೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಎನ್ ಎಸ್‌ಯುಐನ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಪ್ರತಿಯೊಬ್ಬರ ಮೇಲೆ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು.
ಸಂಘಟಿತ ಹೋರಾಟ: ವಿದ್ಯಾರ್ಥಿಗಳ ಮೇಲೆ ಜಾಮೀನು ರಹಿತ ಪ್ರಕರಣಗಳನ್ನು ದಾಖಲಿಸುವಂತಹ ತಪ್ಪನ್ನು ಅವರೇನು ಮಾಡಿದ್ದಾರೆ? ಎಂದು ಪ್ರಶ್ನಿಸಿದ ಅವರು, ಶಾಂತಿಯುತ ಪ್ರತಿಭಟನೆ ನಡೆಸಿದವರ ಮೇಲೆ ಪ್ರಕರಣ ದಾಖಲಿಸಿ, ಜೈಲಿನಲ್ಲಿ ಇರುವಂತೆ ಮಾಡಿದ್ದಾರೆ. ಎನ್‌ಎಸ್‌ಐಯು ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವವರನ್ನು ಯಾವುದೇ ಕಾರಣಕ್ಕೂ ಹೊರಗೆ ಇರಬಾರದು. ಕಾಂಗ್ರೆಸ್ ವಕೀಲರ ಘಟಕ, ಯುವ ಕಾಂಗ್ರೆಸ್, ಕಾಂಗ್ರೆಸ್ ಪಕ್ಷ ಸಂಘಟಿತ ಹೋರಾಟ ಮಾಡಲಿದೆ ಎಂದು ತಿಳಿಸಿದರು.
ಈ ವೇಳೆ ಮುಖಂಡರಾದ ಎಂ.ವಿ. ರಾಘವೇಂದ್ರಸ್ವಾಮಿ, ಗ್ರಾಪಂ ಸದಸ್ಯ ಅಮಲಾಪುರ ದೇವರಾಜು, ಹರಿಪ್ರಸಾದ್, ಮೋಹನ್ ಪರಮೇಶ್, ರಾಜೇಶ್ ದೊಡ್ಮನೆ, ರಾಕೇಶ್, ನಿಖೀಲ್ ರಾಜಣ್ಣ, ನೂರ್ ಹುಸೇನ್, ದೀಪಕ್ ಎಚ್.ಎಸ್ ಸೇರಿದಂತೆ ಇತರರಿದ್ದರು.
ಚಡ್ಡಿ ಬಿಜೆಪಿ ಸ್ವತ್ತಲ್ಲ: ಆರ್.ರಾಜೇಂದ್ರ : ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಮಾತನಾಡಿ, ದೇಶದಲ್ಲಿ ಇರುವವರೆಲ್ಲರೂ ಚೆಡ್ಡಿ ಹಾಕುತ್ತಾರೆ. ಅದೇನು ಬಿಜೆಪಿ ಸ್ವತ್ತಲ್ಲ, ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಎನ್‌ಎಸ್‌ಯುಐ ಕಾರ್ಯಕರ್ತರ ಮೇಲೆ ಇಲ್ಲಸಲ್ಲದ ಪ್ರಕರಣಗಳನ್ನು ಹಾಕಲಾಗಿದೆ. ಅವರೇನು ಪೆಟ್ರೋಲ್, ಕೆರೋಸಿನ್ ಅನ್ನು ಪ್ರತಿಭಟನೆಯಲ್ಲಿ ಬಳಸಿದ್ದರೆ ಎಂದು ಪೊಲೀಸರನ್ನು ಪ್ರಶ್ನಿಸಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಂತೆ ಚೆಡ್ಡಿ ಸುಡುವ ಅಭಿಯಾನ ಪ್ರಾರಂಭಿಸುವುದಾಗಿ ಹೇಳಿದರು. ಸಂಸದ ತೇಜಸ್ವಿ ಸೂರ್ಯ ದೆಹಲಿ ಸಿಎಂ ಮನೆ ಗೇಟ್ ಮುರಿದು, ಸಿಸಿಟಿವಿ ಹೊಡೆದು ಹಾಕಿದ್ದರು. ಅವರ ಮೇಲೆ ಯಾವ ಪ್ರಕರಣ ದಾಖಲಾಗಿದೆ, ಅವರಿಗೊಂದು ಕಾನೂನು, ನಮಗೊಂದು ಕಾನೂನಾ ಎಂದು ಪ್ರಶ್ನಿಸಿದರು.
ಎನ್‌ಎಸ್‌ಯುಐ ಕಾರ್ಯಕರ್ತರ ಮೇಲೆ ಬಿಜೆಪಿ ಯುವ ಮೋರ್ಚಾ ಮತ್ತು ಇಬ್ಬರು ರೌಡಿಶೀಟರ್ ಗಳು ಹಲ್ಲೆ ಮಾಡಿದ್ದಾರೆ. ಪೊಲೀಸರು ಎಬಿವಿಪಿಯ ಕೆಲವರ ಮೇಲೆ ಎಫ್ಐಆರ್ ಹಾಕಿ ಕೈ ತೊಳೆದುಕೊಂಡಿದ್ದಾರೆ. ಹಲ್ಲೆ ಮಾಡಿರುವ ಎಲ್ಲರ ಮೇಲೆಯೂ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.