ಮೋದಿಯಿಂದ ಭ್ರಷ್ಟಾಚಾರ ರಹಿತ ಆಡಳಿತ; ಪ್ರಾಣೇಶ್
ಹನಿ ನೀರಾವರಿ ಯೋಜನೆ ಹೀಗೆ ಅನೇಕ ಯೋಜನೆಗಳ ಸದುಪಯೋಗವನ್ನು ಜಿಲ್ಲೆಯ ಜನತೆ ಪಡೆದುಕೊಂಡಿದ್ದಾರೆ
Team Udayavani, Jun 7, 2022, 6:00 PM IST
ಚಿಕ್ಕಮಗಳೂರು: ದೇಶದ ಕಟ್ಟಕಡೆಯ ವ್ಯಕ್ತಿಯ ಏಳಿಗೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರಮಿಸುತ್ತಿದ್ದಾರೆ ಮತ್ತು ಭ್ರಷ್ಟಾಚಾರ ರಹಿತ ಸ್ವತ್ಛ ಆಡಳಿತವನ್ನು ನೀಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ತಿಳಿಸಿದರು.
ಕೇಂದ್ರ ಸರ್ಕಾರ 8 ವರ್ಷ ಆಡಳಿತ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 8 ವರ್ಷದ ಅವಧಿಯಲ್ಲಿ ಆಯುಷ್ಮಾನ್ ಭಾರತ್, ಉಜ್ವಲ ಯೋಜನೆ, ಜನ್‌ಧನ್ ಯೋಜನೆ, ಕಿಸಾನ್ ಸಮ್ಮಾನ್ ಯೋಜನೆ, ಬೆಳೆವಿಮಾ ಯೋಜನೆ, ಪ್ರಧಾನಮಂತ್ರಿ ಆವಾಸ್ ಯೋಜನೆ, ಸ್ವತ್ಛ ಭಾರತ್, ಮುದ್ರಾ ಯೋಜನೆಗಳನ್ನು ಜಾರಿಗೊಳಿಸಿ ಎಲ್ಲಾ ಸಮುದಾಯಗಳ ಏಳಿಗೆಗೆ ಶ್ರಮಿಸಿದ್ದಾರೆ ಎಂದರು.
ಮಹಾಮಾರಿ ಕೋವಿಡ್ ಸಂದರ್ಭವನ್ನು ದೇಶ ಅತ್ಯಂತ ದಕ್ಷತೆಯಿಂದ ಎದುರಿಸಿದೆ. ಮೇಕ್ ಇನ್ ಇಂಡಿಯಾ ಯೋಜನೆ ರೂಪಿಸಿ ಅದರಲ್ಲಿ ಯಶ ಕಂಡಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಿದೆ. ಅನೇಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆ ತಾಣಗಳನ್ನು ಅಭಿವೃದ್ಧಿಪಡಿಸಿ ಸಂರಕ್ಷಿಸಿದೆ ಎಂದು ತಿಳಿಸಿದರು.
ಸಮಾಜದ ಕಟ್ಟೆ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳನ್ನು ಅತ್ಯಂತ ಪಾರದರ್ಶಕವಾಗಿ ತಲುಪಿಸುವ ಕೆಲಸ ಮಾಡಲಾಗಿದೆ. ಹಾಗೆಯೇ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಹುಪಾಲು ಅನುದಾನವನ್ನು ನೀಡಿದೆ. ಮಹಾತ್ಮ ಗಾಂಧಿಜಿಯವರ ಸ್ವತ್ಛ ಭಾರತದ ಕನಸು ನನಸಾಗಿ ಸಲು ಅಪಾರ ಕೊಡುಗೆ ನೀಡಿದ್ದಾರೆ ಎಂದರು.
ಕೇಂದ್ರ ಸರ್ಕಾರ 376ಕ್ಕೂ ಹೆಚ್ಚು ಯೋಜನೆಗಳನ್ನು ತಂದಿದ್ದು, ಇದರಲ್ಲಿ ಜಿಲ್ಲೆಗೂ ಸಿಂಹಪಾಲು ದೊರೆತಿದೆ ಎಂದ ಅವರು, 5.58 ಲಕ್ಷ ಜನರಿಗೆ ಆಯುಷ್ಮಾನ್ ಕಾರ್ಡ್ ವಿತರಣೆ ಮಾಡಲಾಗಿದೆ. 26 ಸಾವಿರ ಜನರು ಇದರ ಸದುಪಯೋಗ ಪಡೆದಿದ್ದಾರೆ. ಜನ್‌ಧನ್ ಯೋಜನೆಯಡಿ 2.28 ಲಕ್ಷ ಖಾತೆಗಳನ್ನು ತೆರೆಯಲಾಗಿದ್ದು, 114 ಕೋಟಿ ರೂ. ಜಮಾ ಮಾಡಲಾಗಿದೆ. ಕಿಸಾಮ್ ಸಮ್ಮಾನ್ ಯೋಜನೆಯಡಿ 1.19 ಲಕ್ಷ ಫಲಾನುಭವಿಗಳು 185.5 ಕೋಟಿಗಳನ್ನು 10 ಕಂತುಗಳಲ್ಲಿ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.
ಬೆಳೆವಿಮೆ ಯೋಜನೆಯಡಿ 24,224 ಫಲಾನುಭವಿಗಳು 98 ಕೋಟಿ ಹಣ ಪಡೆದಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 7858 ಫಲಾನುಭವಿಗಳು ಮನೆ ನಿರ್ಮಿಸಿಕೊಂಡಿದ್ದಾರೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಸ್ವ-ಸಹಾಯ ಸಂಘಗಳು, ಪಶು ಸಂಗೋಪನಾ ಯೋಜನೆ, ಸ್ವಯಂ ಉದ್ಯೋಗ, ಕೃಷಿ ಯಂತ್ರೋಪಕರಣ, ರೇಷ್ಮೆ, ಹನಿ ನೀರಾವರಿ ಯೋಜನೆ ಹೀಗೆ ಅನೇಕ ಯೋಜನೆಗಳ ಸದುಪಯೋಗವನ್ನು ಜಿಲ್ಲೆಯ ಜನತೆ ಪಡೆದುಕೊಂಡಿದ್ದಾರೆ ಎಂದು ಹೇಳಿದರು.
ವಿಪಕ್ಷಗಳಿಗೆ ವಿರೋಧ ಮಾಡಲು ಯಾವುದೇ ವಿಚಾರಗಳು ಇಲ್ಲವಾಗಿದ್ದು, ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ತರೀಕೆರೆ ಶಾಸಕ ಡಿ.ಎಸ್. ಸುರೇಶ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒಂದೇ ಒಂದು ಕಪ್ಪುಚುಕ್ಕೆ ಇಲ್ಲದಂತೆ ಯಶಸ್ವಿ ಆಡಳಿತವನ್ನು ನೀಡಿದ್ದಾರೆ. ಜಿಲ್ಲೆಯ ಕಡೂರು, ತರೀಕೆರೆ, ಚಿಕ್ಕಮಗಳೂರು ಭಾಗದ 200 ಕೆರೆಗಳನ್ನು ತುಂಬಿಸುವ ಯೋಜನೆಗೆ ಮೊದಲ ಹಂತದ ಅನುದಾನ ಬಿಡುಗಡೆ ಮಾಡಲಾಗಿದೆ. 2ನೇ ಹಂತದ ಅನುದಾನ ಶೀಘ್ರವೇ ಬಿಡುಗಡೆಗೊಳಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಪ್ರತೀ ಮನೆಗೂ ಶುದ್ಧ ಕುಡಿಯುವ ನೀರು ಕೊಡುವ ಯೋಜನೆ ನಮ್ಮ ಜಿಲ್ಲೆಗೂ ಮಂಜೂರಾಗಿದೆ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ. ಕಲ್ಮುರುಡಪ್ಪ ಮಾತನಾಡಿ, ಜೂ.8ರಿಂದ ಪಕ್ಷದಿಂದ ಪ್ರತೀ ತಾಲೂಕಿನಲ್ಲಿ ಸರ್ಕಾರದ ಫಲಾನುಭವಿಗಳ ಜೊತೆ ಸಂವಾದ ನಡೆಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಯುವ ಮೋರ್ಚಾ ವತಿಯಿಂದ ಜೂ.14 ಮತ್ತು 15ರಂದು ಬೈಕ್ ರ್ಯಾಲಿ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನತೆಗೆ ತಿಳಿಸುವ ಕೆಲಸ ಮಾಡಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಆನಂದಪ್ಪ, ಕವಿತಾ ಶೇಖರ್, ರವೀಂದ್ರ ಬೆಳವಾಡಿ, ದೀಪಕ್ ದೊಡ್ಡಯ್ಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.