ಸರ್ಕಾರದಿಂದ ರೈತಪರ ಯೋಜನೆ ಜಾರಿ; ರೇಣುಕಾಚಾರ್ಯ
ಯೋಧರು ಹಾಗೂ ರೈತರನ್ನು ಎರಡು ಕಣ್ಣುಗಳಂತೆ ಕಾಣುತ್ತಿದ್ದಾರೆ.
Team Udayavani, Jun 7, 2022, 6:27 PM IST
ಹೊನ್ನಾಳಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ಪರ ಚಿಂತನೆ ನಡೆಸಿ ರೈತರಿಗೆ ಉಪಯೋಗವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಅರಕೆರೆ ಗ್ರಾಮದಲ್ಲಿ ಕೃಷಿ ಇಲಾಖೆ, ಕೃಷಿ ಮತ್ತು ಜಲಾನಯನ ಅಭಿವೃದ್ಧಿ ಯೋಜನೆ ಬೆಂಗಳೂರು, ಮತ್ತು ಹೊನ್ನೆತ್ತೆಮ್ಮ ಬಂಧು ರೈತ ಉತ್ಪಾದಕ ಕಂಪನಿ ಅರಕೆರೆ ಹಾಗೂ ಸಹರಾ ಸಂಸ್ಥೆ ದಾವಣಗೆರೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ “ರೈತರೊಂದಿಗೊಂದು ದಿನ’, ರೈತರಿಗೆ ಬೆಳೆ ಬೆಳೆಯುವ ಬಗ್ಗೆ ತಜ್ಞರಿಂದ ಮಾಹಿತಿ ಹಾಗೂ ಸಂಘದ ಸದಸ್ಯರಿಗೆ ಬಾಂಡ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತೋಟಗಾರಿಕೆ ಮತ್ತು ಕೃಷಿ ಬೆಳೆಗಳಿಗೆ ಪ್ರಧಾನಿ ನರೇಂದ್ರ ಮೋದಿ ವೈಜ್ಞಾನಿಕ ಬೆಲೆ ನಿಗದಿಗೊಳಿಸಿ ಎಲ್ಲಾ ಬೆಳೆಗಳನ್ನು ಸರ್ಕಾರ ಕೊಳ್ಳುವ ವ್ಯವಸ್ಥೆ ಮಾಡಿದ್ದಾರೆ. ಯೋಧರು ಹಾಗೂ ರೈತರನ್ನು ಎರಡು ಕಣ್ಣುಗಳಂತೆ ಕಾಣುತ್ತಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ ಒಂದೇ ಗಂಟೆಯಲ್ಲಿ ರೈತರ ಮಕ್ಕಳಿಗೆ ಶಿಕ್ಷಣಕ್ಕೆ ಸಹಾಯವಾಗಲೆಂದು ಕೃಷಿ ವಿದ್ಯಾನಿಧಿ ಘೋಷಿಸಿ 43 ಲಕ್ಷ ರೂ.ಗಳ ಪ್ರೋತ್ಸಾಹಧನದ ಚೆಕ್‌ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹೊನ್ನೆತ್ತೆಮ್ಮ ಬಂಧು ರೈತ ಉತ್ಪಾದಕ ಕಂಪನಿ ಅಧ್ಯಕ್ಷ ಎ.ಬಿ. ಹನುಮಂತಪ್ಪ ಮಾತನಾಡಿ, ಗ್ರಾಮದಲ್ಲಿ ಸ್ಥಾಪನೆಯಾಗಿರುವ ರೈತ ಉತ್ಪಾದಕ ಕಂಪನಿ ಉತ್ತರೋತ್ತರವಾಗಿ ಬೆಳೆಯಲು ಸಂಘದ ಎಲ್ಲಾ ಸದಸ್ಯರ ಸಹಕಾರ ಮತ್ತು ಸಹಾಯ ಅಗತ್ಯ ಎಂದು ಹೇಳಿದರು.
ಸಹಾಯಕ ಕೃಷಿ ನಿರ್ದೇಶಕಿ ಎ.ಎಸ್. ಪ್ರತಿಮಾ, ಉಪ ಕೃಷಿ ನಿರ್ದೇಶಕ ಸಿದ್ದೇಶ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಜಿ.ಆರ್. ವೀರಭದ್ರಸ್ವಾಮಿ, ಹೊನ್ನೆತ್ತೆಮ್ಮ ಪ್ರಕಾಶನ ಬಂಧು ರೈತ ಉತ್ಪಾದಕ ಕಂಪನಿ ಉಪಾಧ್ಯಕ್ಷ ಸಿ.ಎಚ್. ಅಶೋಕ್ ಮತ್ತು ಸದಸ್ಯರು, ಅರಬಗಟ್ಟೆ ಗ್ರಾಮದ ಪ್ರಕಾಶನ ರೈತ ಸಿರಿ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ರಮೇಶ್ ಇತರರು ಉಪಸ್ಥಿತರಿದ್ದರು. ಕಾರ್ಯನಿರ್ವಹಣಾಧಿಕಾರಿ ಎಚ್.ಎಂ. ರೇಷ್ಮಾ ಮತ್ತು ಉಮೇಶ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ
Nyamathi: ಎಸ್‌ಬಿಐ ಬ್ಯಾಂಕ್ ನಿಂದ 12.95 ಕೋಟಿ ರೂ ಮೌಲ್ಯದ ಚಿನ್ನ ಕಳ್ಳತನ
Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್: ಮಹಾನಗರ ಪಾಲಿಕೆಯ ಹೊಸ ಕ್ರಮ
Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!
MUST WATCH
ಹೊಸ ಸೇರ್ಪಡೆ
New Delhi: ಹಬ್ಬದ ಋತು; ದೇಶದಲ್ಲಿ 4.5 ಲಕ್ಷ ವಾಹನಗಳ ದಾಖಲೆ ಮಾರಾಟ!
Karnataka Rajyotsava: ಮನೆ ತುಂಬಾ 5 ಲಕ್ಷ ಕನ್ನಡ ಪುಸ್ತಕ: ಹರಿಹರಪ್ರಿಯರ ಪ್ರಪಂಚ!
Ranchi: ಹೇಮಂತ್ ಸೊರೇನ್ ವಯಸ್ಸು 5 ವರ್ಷದಲ್ಲಿ 7 ವರ್ಷ ಹೆಚ್ಚಳ!; ಬಿಜೆಪಿ
Dhananjay: ಮದುವೆಗೆ ಸಿದ್ದವಾದ್ರು ಡಾಲಿ; ದುರ್ಗದ ಹುಡುಗಿಯ ಕೈ ಹಿಡಿಯಲಿದ್ದಾರೆ ಧನಂಜಯ
Goddess Lakshmi: ಲಕ್ಷ್ಮೀ ಆರಾಧನೆಯ ಪರ್ವ ಸಮಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.