ತಸ್ತೀಕ್ ಮತ್ತು ವರ್ಷಾಸನ ಅನುದಾನದ ಬಳಕೆ ಸರಳೀಕರಣಗೊಳಿಸಲು ಮುಜರಾಯಿ ಇಲಾಖೆ ಅಧಿಕೃತ ಆದೇಶ
Team Udayavani, Jun 7, 2022, 6:42 PM IST
ಬೆಂಗಳೂರು: ತಸ್ತೀಕ್ ಮತ್ತು ವರ್ಷಾಷನ ನಿಗದಿಯಾಗಿರುವ ಸಂಸ್ಥೆಗಳಲ್ಲಿ ಸೂಸೂತ್ರವಾಗಿ ಸಕಾಲದಲ್ಲಿ ಪೂಜಾ ಕಾರ್ಯಗಳನ್ನು ನೆರವೇರಿಸಲು ಅನುಕೂಲವಾಗಲು ನೀಡಲಾಗುವ ಭತ್ಯೆಗಳನ್ನು ಸಕಾಲದಲ್ಲಿ ಪಾವತಿಸಬೇಕು ಹಾಗೂ ಈ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಬೇಕು ಎನ್ನುವ ಬಹು ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ತಸ್ತೀಕ್ ಮತ್ತು ವರ್ಷಾಸನ ಅನುದಾನ ವೆಚ್ಚ ಭರಿಸುವ ಪ್ರಕ್ರಿಯೆಯನ್ನು ಸರಳಗೊಳಿಸಬೇಕು. ಅಲ್ಲದೇ, ನಾಲ್ಕು ಕಂತುಗಳಲ್ಲಿ ಬಿಡುಗಡೆಯಾಗುತ್ತಿದ್ದ ತಸ್ತೀಕ್ ಹಣವನ್ನು ಎರಡು ಕಂತುಗಳಲ್ಲಿ ಬಿಡುಗಡೆಗೊಳಿಸಬೇಕು. ಹಾಗೆಯೇ, ಈ ಹಣವನ್ನು ಪಡೆಯುವಂತಹ ಪ್ರಕ್ರಿಯೆ ಸರಳಗೊಳಿಸಬೇಕು ಎನ್ನುವ ಬೇಡಿಕೆಯನ್ನ ಹಲವಾರು ಬಾರಿ ಅರ್ಚಕರು ಹಾಗೂ ಅರ್ಚಕರ ಸಂಘದ ಪದಾಧಿಕಾರಿಗಳು ಮನವಿಯನ್ನು ಸಲ್ಲಿಸಿದ್ದರು. ಅಲ್ಲದೆ, ರಾಜ್ಯ ಸರಕಾರ ನೀಡುವ ತಸ್ತಿಕ್ ಹಣವನ್ನು ನಂಬಿಕೊಂಡು ಪೂಜಾಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ ಬಹಳಷ್ಟು ಅರ್ಚಕರ ಜೀವನ ಸುಧಾರಿಸಬೇಕು ಎನ್ನುವ ಮಹತ್ವದ ಉದ್ದೇಶ ನಮ್ಮದಾಗಿದೆ. ಈ ಹಿನ್ನಲೆಯಲ್ಲಿ ವಾರ್ಷಿಕ 48 ಸಾವಿರ ರೂಪಾಯಿಗಳಿಂದ 60 ಸಾವಿರ ರೂಪಾಯಿಗಳಿಗೆ ಏರಿಕೆ ಮಾಡಿ ಆಯವ್ಯಯದಲ್ಲಿ ಮುಖ್ಯಮಂತ್ರಿಗಳು ಮಾಡಿದ್ದ ಘೋಷಣೆ ಈಗಾಗಲೇ ಜಾರಿಯಾಗಿದೆ.
ಆದರೆ, ಆ ಹಣವನ್ನು ಪಡೆಯುವ ಪ್ರಕ್ರಿಯೆ ಬಹಳ ಕ್ಲಿಷ್ಟಕರವಾಗಿತ್ತು. ಈ ಹಿನ್ನಲೆಯಲ್ಲಿ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವಂತೆ ಮುಜರಾಯಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡಲಾಗಿತ್ತು. ಈ ಸೂಚನೆಯ ಅನ್ವಯ ಇಂದು ಸುತ್ತೋಲೆಯನ್ನು ಹೊರಡಿಸಲಾಗಿದ್ದು, 2 ಕಂತುಗಳಲ್ಲಿ ತಸ್ತೀಕ್ ಮತ್ತು ವರ್ಷಾಸನವನ್ನು ಪಡೆದುಕೊಳ್ಳಬಹುದಾಗಿದೆ. ಅಲ್ಲದೇ, ಬಿಲ್ಲುಗಳಿಗೆ ಜಿಲ್ಲಾಧಿಕಾರಿಗಳ ಮೇಲು ಸಹಿ ಪಡೆಯುವುದಕ್ಕೂ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದರು.
ತಸ್ತೀಕ್ ಮತ್ತು ವರ್ಷಾಸನ ಅನುದಾನದ ಬಿಲ್ಲುಗಳನ್ನು ತಹಸೀಲ್ದಾರ್ ಹಂತದಲ್ಲಿ ತಯಾರಿಸಿ ಜಿಲ್ಲಾಧಿಕಾರಿಗಳ ಮೇಲು ಸಹಿ ಇಲ್ಲದೇ ನೇರವಾಗಿ ಖಜಾನೆಗೆ ಸಲ್ಲಿಸುವ ಮೂಲಕ ಅನುದಾನವನ್ನು ವಿಳಂಬಕ್ಕೆ ಆಸ್ಪದವಿಲ್ಲದೇ ವಿನಿಯೋಗಿಸಿಕೊಳ್ಳಲು ಅನುಮತಿ ನೀಡಲಾಗಿದೆ. ತಸ್ತೀಕ್ ಮೊತ್ತ ಆಯುಕ್ತರಿಂದ ಅನುದಾನ ಬಿಡುಗಡೆ ಮಾಡಿದ 15 ದಿನಗಳ ಒಳಗಾಗಿ ಖಜಾನೆಯಿಂದ ವಿನಿಯೋಗಿಸಿಕೊಳ್ಳಲು ಇಲಾಖೆ ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.