ರಾಜ್ಯಸಭೆಯಲ್ಲಿ ಕರಾವಳಿಗರ ಪ್ರಾತಿನಿಧ್ಯಕ್ಕೆ ತೆರೆ

Team Udayavani, Jun 8, 2022, 7:30 AM IST

ರಾಜ್ಯಸಭೆಯಲ್ಲಿ ಕರಾವಳಿಗರ ಪ್ರಾತಿನಿಧ್ಯಕ್ಕೆ ತೆರೆ

ಮಂಗಳೂರು: ಸರಿಯಾಗಿ 28 ವರ್ಷಗಳ ಬಳಿಕ ರಾಜ್ಯ ಸಭೆಯಲ್ಲಿ ಕರ್ನಾಟಕ ಕರಾವಳಿಯ ಪ್ರತಿನಿಧಿಯೇ ಇಲ್ಲದಂತಾಗಿದೆ. 1994ರಿಂದ ಈ ವರೆಗೆ ನಿರಂತರವಾಗಿ ಕರಾವಳಿಗರು ರಾಜ್ಯಸಭೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿದ್ದರು.

ಕರಾವಳಿಯ ಆಸ್ಕರ್‌ ಫೆರ್ನಾಂಡಿಸ್‌ ಸೇರಿದಂತೆ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ನಾಲ್ವರು ಸದಸ್ಯರ ಅವಧಿ ಜೂ. 10ಕ್ಕೆ ಕೊನೆಯಾಗಲಿದ್ದು, ಆ ಸ್ಥಾನಗಳಿಗೆ ಜೂ. 10ರಂದು ಚುನಾವಣೆ ನಡೆಯಲಿದೆ. ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅಭ್ಯರ್ಥಿಗಳನ್ನು ಈಗಾಗಲೇ ಕಣಕ್ಕಿಳಿಸಿವೆ. ಇದರಲ್ಲಿ ಕರಾವಳಿಗರಿಗೆ ಅವಕಾಶ ಸಿಕ್ಕಿಲ್ಲ. ಆಸ್ಕರ್‌ ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿದ್ದು, 2016ರ ಜೂ. 11ರಂದು ಕರ್ನಾಟಕ ವಿಧಾನಸಭೆಯಿಂದ ಕಾಂಗ್ರೆಸ್‌ ಹಾಲಿ ಅಭ್ಯರ್ಥಿ ಜೈರಾಂ ರಮೇಶ್‌ ಜತೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಆಸ್ಕರ್‌ ನಿಧನದ ಹಿನ್ನೆಲೆಯಲ್ಲಿ ಅವರ ಸ್ಥಾನ ಕರಾವಳಿಯ ನಾಯಕರಿಗೆ ಲಭಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಸಿಕ್ಕಿಲ್ಲ. ಹಾಗಾಗಿ ರಾಜ್ಯಸಭೆಯಲ್ಲಿ ಕರ್ನಾಟಕ ಕರಾವಳಿಗರ ಧ್ವನಿ ಮೊಳಗದು.

ಮದ್ರಾಸ್‌ ಅಸೆಂಬ್ಲಿಯಿಂದ ಆರಂಭ
ಕರಾವ‌ಳಿಗರಿಗೆ ರಾಜ್ಯಸಭಾ ಸದಸ್ಯ ಸ್ಥಾನದ ಇತಿಹಾಸ ಮದ್ರಾಸ್‌ ಆಸೆಂಬ್ಲಿಯಿಂದ ಪ್ರಾರಂಭ ವಾಗಿತ್ತು. ಬಿ.ವಿ. ಕಕ್ಕಿಲ್ಲಾಯ ಅವರು ಮದ್ರಾಸ್‌ ಅಸೆಂಬ್ಲಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಆ ಬಳಿಕ 1957-60 ರ ವರೆಗೆ ಬೆನಗಲ್‌ ಶಿವರಾವ್‌, 1952, 1954ರಲ್ಲಿ ಕೆ.ಎಸ್‌. ಹೆಗ್ಡೆ, 1972ರಿಂದ 1977ರ ವರೆಗೆ ಟಿ.ಎ. ಪೈ ಸದಸ್ಯರಾಗಿದ್ದರು. 1980ರಲ್ಲಿ ಬಿ. ಇಬ್ರಾಹಿಂಗೆ ಅವಕಾಶ ಲಭಿಸಿತ್ತು. 1994ರಿಂದ 2000 ಹಾಗೂ 2002ರಿಂದ 2008ರ ವರೆಗೆ ಜನಾರ್ದನ ಪೂಜಾರಿ ಪ್ರತಿನಿಧಿಸಿದ್ದರು. ಆಸ್ಕರ್‌ ಫೆರ್ನಾಂಡಿಸ್‌ 1998ರಿಂದ 2021ರ ವರೆಗೆ ನಿರಂತರವಾಗಿ 4 ಅವಧಿಗೆ ರಾಜ್ಯಸಭಾ ಸದಸ್ಯರಾಗಿದ್ದರು.

ಈ ಬಾರಿ ಕಾಂಗ್ರೆಸ್‌ನಲ್ಲಿ ರಾಜ್ಯಸಭೆಗೆ ಅಭ್ಯರ್ಥಿ ಯಾಗಿ ಕರಾವಳಿಯ ನಾಯಕರೊಬ್ಬರ ಹೆಸರು ಕೇಳಿಬಂದಿತ್ತು. ಕಳೆದ ಬಾರಿ ಕಾಂಗ್ರೆಸ್‌ ವಿಧಾನಸಭೆಯಲ್ಲಿ ಹೆಚ್ಚಿನ ಸದಸ್ಯ ಬಲ ಹೊಂದಿದ್ದ ಹಿನ್ನೆಲೆಯಲ್ಲಿ ಎರಡು ಸದಸ್ಯತ್ವ ಅವಕಾಶ ದಿಂದಾಗಿ ಆಸ್ಕರ್‌ ಮತ್ತು ಜೈರಾಂ ರಮೇಶ್‌ ಆಯ್ಕೆಯಾಗಿದ್ದರು. ಆದರೆ ಈ ಬಾರಿ ಕಾಂಗ್ರೆಸಿಗೆ ಸ್ವಂತ ಬಲದಿಂದ ಒಂದು ಸ್ಥಾನ ಮಾತ್ರ ಗೆಲ್ಲಲು ಮಾತ್ರ ಅವಕಾಶವಿದೆ. ಹಾಗಾಗಿ ಜೈರಾಂ ರಮೇಶ್‌ ಅವರನ್ನು ಕಣಕ್ಕಿಳಿಸಿದೆ. ಎರಡನೇ ಸ್ಥಾನಕ್ಕೆ ಮನ್ಸೂರ್‌ ಆಲಿ ಖಾನ್‌ ಅವರನ್ನು ಆಯ್ಕೆ ಮಾಡಿದೆ.

ಕರ್ನಾಟಕದಲ್ಲಿ ಕರಾವಳಿಗರಿಗೆ ಈ ಬಾರಿ ಪ್ರಾತಿನಿಧ್ಯ ತಪ್ಪಿದರೂ ಬಿಹಾರದಲ್ಲಿ ಕುಂದಾಪುರದ ಸಳ್ವಾಡಿಯ ಅನಿಲ್‌ ಪ್ರಸಾದ್‌ ರಾಜ್ಯಸಭೆಗೆ ಪ್ರವೇಶಿಸಿದ್ದಾರೆ. ಆಸ್ಕರ್‌ ಬಳಿಕ ಉಡುಪಿ ಜಿಲ್ಲೆಯವರೇ ಆಗಿರುವ ಅನಿಲ್‌ ಹೆಗ್ಡೆ ರಾಜ್ಯಸಭಾ ಸದಸ್ಯರಾಗುತ್ತಿರುವುದು ಗಮನಾರ್ಹ. ಹಿಂದೆ ಜಾರ್ಜ್‌ ಫೆರ್ನಾಂಡಿಸ್‌ ಬಿಹಾರದಿಂದ 9 ಬಾರಿ ಸಂಸದರಾಗಿದ್ದರು.

ಸಚಿವ ಸ್ಥಾನ
ಕರಾವಳಿಯ ನಾಯಕರು ರಾಜ್ಯಸಭಾ ಸದಸ್ಯರಾಗಿದ್ದಾಗ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಟಿ.ಎ. ಪೈ ಅವರು ರಾಜ್ಯಸಭಾ ಸದಸ್ಯರಾಗಿದ್ದ ಅವಧಿಯಲ್ಲಿ ಇಂದಿರಾ ಗಾಂಧಿಯವರ ಸರಕಾರದಲ್ಲಿ ರೈಲ್ವೇ, ಬೃಹತ್‌ ಕೈಗಾರಿಕೆ, ಉಕ್ಕು ಮತ್ತು ಗಣಿ ಖಾತೆಗಳ ಸಚಿವರಾಗಿದ್ದರು. ಆಸ್ಕರ್‌ ಫೆರ್ನಾಂಡಿಸ್‌ ಯುಪಿಎ ಸರಕಾರದಲ್ಲಿ ಯೋಜನಾನುಷ್ಠಾನ, ಕಾರ್ಮಿಕ ಇಲಾಖೆ, ಭೂಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವರಾಗಿದ್ದರು.

– ಕೇಶವ ಕುಂದರ್‌

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

6

Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ

5

Mangaluru: ವೆನ್ಲಾಕ್‌ನಲ್ಲಿ  ದೊರೆಯಲಿದೆ ಕಿಮೋಥೆರಪಿ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.