ಪ್ರಾಣಿ ಪ್ರಿಯರ ಸೆಳೆಯುತ್ತಿದೆ ಚಾರ್ಲಿ

Team Udayavani, Jun 8, 2022, 1:03 PM IST

Untitled-1

ಜಗತ್ತು ಸೃಷ್ಟಿಯಾದಾಗಿನಿಂದಲೂ ಮನುಷ್ಯರು ಮತ್ತು ಪ್ರಾಣಿಗಳ ನಡುವೆ ಒಂದು ಬೇರ್ಪಡಿಸಲಾಗದ ನಂಟು, ಸಂಬಂಧ, ಒಡನಾಟವಿದೆ. ಅನೇಕ ಸಂದರ್ಭಗಳಲ್ಲಿ ಇದು ಬೇರೆ ಬೇರೆ ರೂಪಗಳಲ್ಲಿ ಪ್ರಕಟವಾಗುತ್ತಲೇ ಇರುತ್ತದೆ. ಅದರಲ್ಲೂ ಮನುಷ್ಯ ಮತ್ತು ನಾಯಿಯ ನಡುವಿನ ಭಾವನಾತ್ಮಕ ಸಂಬಂಧ ಇನ್ನೂ ವಿಶೇಷವಾದದ್ದು.

ಪುರಾಣ-ಪುಣ್ಯಕಥೆಗಳು, ಇತಿಹಾಸದ ಪುಟಗಳಿಂದ ಹಿಡಿದು ಇಂದಿನ ಸ್ಮಾರ್ಟ್‌ಪೋನ್‌ ಜಮಾನದವರೆಗೂ ಮನುಷ್ಯ ಮತ್ತು ನಾಯಿಯ ನಡುವಿನ ಸಂಬಂಧ ಸಾರುವ ಲೆಕ್ಕವಿಲ್ಲದಷ್ಟು ನಿದರ್ಶನಗಳು, ದೃಶ್ಯಗಳು ನಮ್ಮ ಕಣ್ಣ ಮುಂದೆಯೇ ಪ್ರತಿನಿತ್ಯ ನಡೆಯುತ್ತಲೇ ಇರುತ್ತದೆ. ಹೀಗೆ ನಮ್ಮ ನಡುವೆಯೇ ನಡೆಯುವ ಮನುಷ್ಯ ಮತ್ತು ನಾಯಿಯ ನಡುವಿನ ಬಾಂಧವ್ಯವನ್ನು ತೆರೆದಿಡುವ ಸಿನಿಮಾವೇ “777 ಚಾರ್ಲಿ’.

ಸ್ವತಃ “777 ಚಾರ್ಲಿ’ ಸಿನಿಮಾದ ನಾಯಕ ನಟ ರಕ್ಷಿತ್‌ ಶೆಟ್ಟಿ ಮತ್ತು ಚಿತ್ರತಂಡವೇ ಹೇಳುವಂತೆ, “”777 ಚಾರ್ಲಿ’ ಸಿನಿಮಾದಲ್ಲಿ ಹೀರೋ ಅಂತ ಇಲ್ಲ. ಇಲ್ಲಿ ತೆರೆಮೇಲೆ ಬರುವುದೆಲ್ಲವೂ ಒಂದೊಂದು ಪಾತ್ರಗಳು ಮಾತ್ರ. ಪ್ರತಿ ಪಾತ್ರಕ್ಕೂ ಅದರದ್ದೇ ಆದ ಮಹತ್ವವಿದೆ. ಹಾಗೇನಾದ್ರೂ ಸಿನಿಮಾದಲ್ಲಿ ಇದ್ದರೆ ಅದು “ಚಾರ್ಲಿ’ ಅನ್ನೋ ನಾಯಿ ಮಾತ್ರ. ಯಾಕೆಂದರೆ, ಇಡೀ ಸಿನಿಮಾದ ಕಥೆ ಈ ನಾಯಿಯ ಸುತ್ತ ನಡೆಯುತ್ತದೆ’ ಎನ್ನುವುದು ಚಿತ್ರತಂಡ ಮಾತು.

“ಇದೊಂದು ಸಂಪೂರ್ಣ ಭಾವನಾತ್ಮಕ ಕಥಾಹಂದರದ ಸಿನಿಮಾ. ಹಾಗಾಗಿ ಯಾವುದೇ ಭಾಷೆಯ ಹಂಗಿಲ್ಲದೆ ಎಲ್ಲ ಪ್ರೇಕ್ಷಕರಿಗೂ ಸಿನಿಮಾ ಕನೆಕ್ಟ್ ಆಗುತ್ತದೆ. ಎಲ್ಲರ ಮನಮುಟ್ಟುವಂಥ ಸಿನಿಮಾ ಮಾಡಿದ್ದೇವೆ ಎಂಬ ನಂಬಿಕೆ ಇದೆ. ಈಗಾಗಲೇ ಸಿನಿಮಾ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಾಮಾನ್ಯವಾಗಿ ಇಡೀ ಸಿನಿಮಾದಲ್ಲಿ ಕೇವಲ ಮನುಷ್ಯರೇ ಇದ್ದಾಗ ನಮಗೆ ಬೇಕಾದಂತೆ ಶೆಡ್ಯೂಲ್‌ ಮಾಡಿಕೊಂಡು ಶೂಟಿಂಗ್‌ ಮಾಡಬಹುದು. ಪ್ಲಾನ್‌ ಪ್ರಕಾರ ಶೂಟಿಂಗ್‌ ಮಾಡಿ ಮುಗಿಸಬಹುದು. ಆದ್ರೆ “777 ಚಾರ್ಲಿ’ ಸಿನಿಮಾ ಹಾಗಲ್ಲ. ಇಡೀ ಸಿನಿಮಾದ ಕಥೆ ಒಂದು ನಾಯಿಯ ಸುತ್ತ ನಡೆಯುತ್ತದೆ. ಸಿನಿಮಾದಲ್ಲಿ ನಾಯಕ ರಕ್ಷಿತ್‌ ಶೆಟ್ಟಿ ಎಷ್ಟು ಮುಖ್ಯವೋ, ಚಾರ್ಲಿ (ನಾಯಿ) ಕೂಡ ಅಷ್ಟೇ ಮುಖ್ಯವಾಗಿತ್ತು. ನಮ್ಮ ಸಿನಿಮಾದ ಸ್ಕ್ರಿಪ್ಟ್ ಫೈನಲ್‌ ಆದ ನಂತರ ಸಿನಿಮಾದಲ್ಲಿ ಟಾಸ್ಕ್ ಮಾಡುವಂಥ ನಾಯಿಯೊಂದು ನಮಗೆ ಬೇಕಾಗಿತ್ತು. ಆ ನಾಯಿಯ ಹುಡುಕಾಟಕ್ಕೇ ತಿಂಗಳುಗಳ ಕಾಲ ಸಮಯ ಹಿಡಿಯಿತು. ನಮಗೆ ಬೇಕಾದಂಥ ನಾಯಿ ಸಿಕ್ಕ ತಕ್ಷಣ ಅದಕ್ಕೆ ಟ್ರೈನಿಂಗ್‌ ಮಾಡಬೇಕಿತ್ತು. ಆ ಟ್ರೈನಿಂಗ್‌ಗಾಗಿ ಮತ್ತಷ್ಟು ಸಮಯ ಹಿಡಿಯಿತು. ಹೀಗೆ, ಕೇವಲ ನಾಯಿಯ ಹುಡುಕಾಟ ಮತ್ತು ಅದರ ಟ್ರೈನಿಂಗ್‌ ಗಾಗಿ ವರ್ಷಗಳೇ ಬೇಕಾಯ್ತು’ ಎಂದು ಸಿನಿಮಾ ಸಾಕಷ್ಟು ಸಮಯ ತೆಗೆದುಕೊಂಡಿರುವುದರ ಹಿಂದಿನ ಕಾರಣಕ್ಕೆ ವಿವರಣೆ ಕೊಡುತ್ತಾರೆ ನಿರ್ದೇಶಕ ಕಿರಣ್‌ ರಾಜ್‌.

ಟಾಪ್ ನ್ಯೂಸ್

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.