ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಬೋಧನೆ
Team Udayavani, Jun 8, 2022, 3:35 PM IST
ದಾವಣಗೆರೆ: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಶಿಕ್ಷಕರ ಕೊರತೆನೀಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅತಿಥಿ ಶಿಕ್ಷಕರ ಸೇವೆಗೆಮೊರೆ ಹೋಗಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿ 154 ಅತಿಥಿ ಶಿಕ್ಷಕರನ್ನುನೇಮಕ ಮಾಡಿಕೊಂಡಿದೆ.ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದನೇರ ನೇಮಕಾತಿ ಆಗುವವರೆಗೆ ಇಲ್ಲವೇ ಪ್ರಸಕ್ತ ಶೈಕ್ಷಣಿಕ ವರ್ಷದಅಂತ್ಯದವರೆಗೆ ತಾತ್ಕಾಲಿಕವಾಗಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲುಸರ್ಕಾರ ಅವಕಾಶ ಮಾಡಿಕೊಟ್ಟಿದೆ.
ಜಿಲ್ಲೆಯಲ್ಲಿ 154 ಅತಿಥಿಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಿದ್ದು ಈಹಿನ್ನೆಯಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ.ಹಂಚಿಕೆ ಮಾಡಿರುವ ಅತಿಥಿ ಶಿಕ್ಷಕರನ್ನು ಖಾಲಿ ಇರುವ ಅಗತ್ಯಹುದ್ದೆಗಳಿಗೆ ಮಾತ್ರ ಆದ್ಯತೆ ಮೇರೆಗೆ ನೇಮಕ ಮಾಡಲಾಗಿದೆ.ಅತಿಥಿ ಶಿಕ್ಷಕರನ್ನು ಆಯಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಮೂಲಕವೇ ಮಾಡಲಾಗಿದೆ. ಖಾಲಿ ಇರುವ ಗ್ರಾಮೀಣಪ್ರದೇಶಗಳಲ್ಲಿನ ಖಾಲಿ ಹುದ್ದೆಗಳಿಗೆ ಹಾಗೂ ಶಿಕ್ಷಕರಹಿತ ಶಾಲೆಗಳಿಗೆಮತ್ತು ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಗಳಿಗೆ ಆದ್ಯತೆ ನೀಡಿಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಅತಿಥಿ ಶಿಕ್ಷಕರುಬೋಧನೆಗೆ ಸಿದ್ಧರಾಗಿದ್ದಾರೆ.
ಸರ್ಕಾರ ಅತಿಥಿ ಶಿಕ್ಷಕರ ನೇಮಕಾತಿಗೆಕ್ರಮವಹಿಸಿರುವುದರಿಂದ ನಿರುದ್ಯೋಗಿ ಶಿಕ್ಷಕರಿಗೆ ಇದೊಂದುಉತ್ತಮ ಅವಕಾಶವಾಗಿಯೂ ಮಾರ್ಪಟ್ಟಿದೆ. ಸರ್ಕಾರ ಅತಿಥಿಶಿಕ್ಷಕರಿಗೆ ಮಾಸಿಕ 7500 ರೂ. ಗೌರವಧನ ನಿಗದಿಪಡಿಸಿದೆ.ಒಟ್ಟಾರೆ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ, ಅವಕಾಶನೀಡಿದ್ದರಿಂದ ಸರ್ಕಾರಿ ಶಾಲೆಗಳ ಶಿಕ್ಷಕರ ಕೊರತೆಸಮಸ್ಯೆಗೆ ತಾತ್ಕಾಲಿಕ ಪರಿಹಾರ ಒದಗಿಸಿದಂತಾಗಿದೆ.ಇದರಿಂದ ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆಸಹಕಾರಿಯಾಗಿದೆ.
ಎಚ್.ಕೆ. ನಟರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ
Nyamathi: ಎಸ್‌ಬಿಐ ಬ್ಯಾಂಕ್ ನಿಂದ 12.95 ಕೋಟಿ ರೂ ಮೌಲ್ಯದ ಚಿನ್ನ ಕಳ್ಳತನ
Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್: ಮಹಾನಗರ ಪಾಲಿಕೆಯ ಹೊಸ ಕ್ರಮ
Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!
MUST WATCH
ಹೊಸ ಸೇರ್ಪಡೆ
ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು
Kannada: ಬೆಳೆ ಕನ್ನಡ : ಸರಣಿ-1 ಕನ್ನಡ ಚಿತ್ರರಂಗ; ಬದಲಾದ ಬದುಕೇ ಸಿನೆಮಾ ಭಾಷೆಗೂ ಕುತ್ತು
New Delhi: ಹುಸಿ ಬಾಂಬ್ ಕರೆ ಪತ್ತೆಗೆ ಇಂಟರ್‌ಪೋಲ್ ಮೊರೆ!
Chandigarh: ಕೋಟೆ ಕಟ್ಟಿದ ಗುತ್ತಿಗೆದಾರನಿಗೆ ರೋಲೆಕ್ಸ್ ವಾಚ್ ಉಡುಗೊರೆ
Pune: 300ಕ್ಕೂ ಹೆಚ್ಚು ಅರ್ಜಿ ಸಲ್ಲಿಸಿ ಟೆಸ್ಲಾದಲ್ಲಿ ಉದ್ಯೋಗ ಪಡೆದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.