ಕೇವಲ 5 ದಿನದಲ್ಲಿ 75 ಕಿ.ಮೀ ಹೆದ್ದಾರಿ ನಿರ್ಮಿಸಿ ಗಿನ್ನೆಸ್ ದಾಖಲೆ ಬರೆದ NHAI
Team Udayavani, Jun 8, 2022, 4:16 PM IST
ಹೊಸದಿಲ್ಲಿ: ಅಮರಾವತಿ ಮತ್ತು ಅಕೋಲಾ ನಡುವಿನ 75 ಕಿಲೋಮೀಟರ್ ಉದ್ದದ ಹೆದ್ದಾರಿಯನ್ನು ದಾಖಲೆಯ ಅವಧಿಯಲ್ಲಿ ಪೂರ್ಣಗೊಳಿಸುವ ಮೂಲಕ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಗಿನ್ನೆಸ್ ವಿಶ್ವ ದಾಖಲೆಯನ್ನೇ ನಿರ್ಮಿಸಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಅಮರಾವತಿ – ಅಕೋಲಾ ನಡುವಿನ ರಾಷ್ಟ್ರೀಯ ಹೆದ್ದಾರಿ 53 ಕಾಮಗಾರಿಯನ್ನು ಜೂನ್ 3ರಂದು ಬೆಳಗ್ಗೆ ಏಳು ಗಂಟೆ ಸುಮಾರಿಗೆ ಆರಂಭಗೊಳಿಸಿ ಜೂ.7ರ ಸಂಜೆ 5:00 ಗಂಟೆಗೆ ಒಟ್ಟು 105 ಗಂಟೆ 33 ನಿಮಿಷಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿ ವಿಶ್ವ ದಾಖಲೆಯನ್ನೇ ಬರೆದಿದೆ.
ಈ ಒಂದು ಕಾಮಗಾರಿಯಲ್ಲಿ ಎನ್‌ಎಚ್‌ಎಐನ 800 ಉದ್ಯೋಗಿಗಳು ಮತ್ತು ಸ್ವತಂತ್ರ ಸಲಹೆಗಾರರು ಸೇರಿದಂತೆ ಖಾಸಗಿ ಕಂಪನಿಯ 720 ಕಾರ್ಮಿಕರ ತಂಡವು ಸೇರಿ ಈ ಕಾಮಗಾರಿಯನ್ನು ದಾಖಲೆ ಸಮಯದಲ್ಲಿ ಪೂರ್ಣಗೊಳಿಸಲು ಸಫಲರಾಗಿದ್ದಾರೆ.
ರಾಜ್ ಪಥ್ ಇನ್ಫ್ರಾ ಕಾಮ್ ಪ್ರೈವೆಟ್ ಲಿಮಿಟೆಡ್ ಮತ್ತು ಜಗದೀಶ್ ಕದಂ ಕಂಪೆನಿಗಳಿಂದ ಈ ಅತೀ ದೊಡ್ಡ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಾಣ ಮಾಡಲಾಗಿದ್ದು ಈ ಸಾಧನೆ ಕುರಿತು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಸಾಗರ ತಾಲೂಕಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊರತೆ: ಗೋಪಾಲಕೃಷ್ಣ ಬೇಳೂರು
ಇಡೀ ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ : ಕಡಿಮೆ ಅವಧಿಯಲ್ಲಿ ಅತೀ ಉದ್ದದ ಹೆದ್ದಾರಿ ನಿರ್ಮಾಣ ಮಾಡಿದ NHAI, ಹಾಗೂ ರಾಜ್ ಪಥ್ ಇನ್ಫ್ರಾ ಕಾನ್ ಪ್ರೈವೆಟ್ ಲಿಮಿಟೆಡ್ ಮತ್ತು ಜಗದೀಶ್ ಕದಂ ಕಂಪೆನಿ ಸೇರಿ ಇಷ್ಟು ದೊಡ್ಡ ಕಾರ್ಯ ಮಾಡಿದ್ದಕ್ಕಾಗಿ ಸಚಿವ ನಿತಿನ್ ಗಡ್ಕರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Proud Moment For The Entire Nation!
Feel very happy to congratulate our exceptional Team @NHAI_Official, Consultants & Concessionaire, Rajpath Infracon Pvt Ltd & Jagdish Kadam, on achieving the Guinness World Record (@GWR) of laying 75 Km continuous Bituminous Concrete Road… pic.twitter.com/hP9SsgrQ57
— Nitin Gadkari (@nitin_gadkari) June 8, 2022
#ConnectingIndia with Prosperity!
Celebrating the rich legacy of our nation with #AzadiKaAmrutMahotsav, under the leadership of Prime Minister Shri @narendramodi Ji @NHAI_Official successfully completed a Guinness World Record (@GWR)… pic.twitter.com/DFGGzfp7Pk
— Nitin Gadkari (@nitin_gadkari) June 7, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.