ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಲು ಯಡಿಯೂರಪ್ಪ ಕರೆ

ಶಿಕ್ಷಣದ ಅಭಿವೃದ್ಧಿಗೆ ಭದ್ರಬುನಾದಿ ಹಾಕಿದ್ದು ಬಿಜೆಪಿ

Team Udayavani, Jun 8, 2022, 5:27 PM IST

Untitled-1

ಚಿಕ್ಕೋಡಿ: ಬಿಜೆಪಿ ಕಾರ್ಯಕರ್ತರು ವಿಶ್ರಾಂತಿ ಪಡೆಯದೇ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಪಣ ತೊಡಬೇಕು ಎಂದು  ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ವಾಯವ್ಯ ಶಿಕ್ಷಕರ ಮತಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಧಾನಿ ಮೋದಿ ಒಂದು ದಿನ ವಿಶ್ರಾಂತಿ ಪಡೆದಿಲ್ಲ.ಅವರ ಹಾಗೇ ಪದಾಧಿಕಾರಿಗಳು ಪದವೀಧರ ಹಾಗೂ ಶಿಕ್ಷಕರ ಮತದಾರರನ್ನು ಕರೆ ತಂದು ಮತದಾನ ಮಾಡಿಸಬೇಕು. ವಿಧಾನ ಪರಿಷತ್ ದಲ್ಲಿ ಬಿಜೆಪಿಗೆ ಬಹುಮತ ಸಿಗಬೇಕು. ಹೀಗಾಗಿ ಬಿಜೆಪಿ ಗೆಲ್ಲುವುದು ಮುಖ್ಯವಾಗಿದೆ ಎಂದರು.

ಸರಕಾರಿ ನೌಕರರ ಪರವಾಗಿ ಬಿಜೆಪಿ ನಿಂತಿದೆ. ಈ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲಿಸಬೇಕು. ಸಾಧನೆ ಮಾತನಾಡಬೇಕು ಮಾತೇ ಸಾಧನೆ ಆಗಬಾರದು. ಬಿಜೆಪಿ ಅಭಿವೃದ್ಧಿ ಕಾರ್ಯಗಳನ್ನು ಮತದಾರರಿಗೆ ತಿಳಿಸುವ ಕೆಲಸ ನಡೆಯಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾತನಾಡಿ,. ಕಾಂಗ್ರೆಸ್ ನವರು ಜಾತಿಜಾತಿಗಳ ಮಧ್ಯೆ ವಿಷಬೀಜ ಬಿತ್ತಿ 60 ವರ್ಷ ಆಡಳಿತ ನಡೆಸಿದರು. ಈಗ ಜನ ಜಾಗೃತಿ ಆಗಿರುವುದರಿಂದ ಬಿಜೆಪಿ ದೊಡ್ಡಮಟ್ಟದಲ್ಲಿ ಬೆಳೆದಿದೆ. ಮೋದಿ ಒಬ್ಬ ಸಮರ್ಥ ನಾಯಕರಾಗಿ ದೇಶ ಮುನ್ನಡೆಸಿಕೊಂಡು ಹೋಗುತ್ತಿದೆ ಎಂದರು.

ಲಕ್ಷ್ಮಣ ಸವದಿ ಮಾತನಾಡಿ, ವಿಧಾನ ಪರಿಷತ್ ಗಂಜಿಕೇಂದ್ರವಲ್ಲ ಅದೊಂದು ಚಿಂತಕರಚಾವಡಿ. ವಿಶ್ರಾಂತಿ ತೆಗೆದುಕೊಳ್ಳುವ ವ್ಯಕ್ತಿ ಕಾಂಗ್ರೆಸ್ ದಿಂದ ಸ್ಪರ್ಧೆ ಮಾಡಿರುವುದು ಯಾವ ಕಾರಣಕ್ಕಾಗಿ ಎಂದು ಟೀಕಿಸಿದರು.

ಸಚಿವ ಉಮೇಶ ಕತ್ತಿ ಮಾತನಾಡಿ, ರಾಜಕಾರಣದಲ್ಲಿ ಉದ್ಯೋಗ ಮಾಡಿಕೊಂಡಿರುವ ಪ್ರಕಾಶ ಹುಕ್ಕೇರಿ ಪದವೀಧರ ಮತ್ತು ಶಿಕ್ಷಕರು ಅಲ್ಲ ಅವರಿಗೆಕ್ಕೆ ಮತ ಹಾಕುತ್ತಿರಾ? ಎಂದು ಪ್ರಶ್ನಿಸಿದರು.

ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ,ಬಿಜೆಪಿ ಸರಕಾರದ ಅವದಿಯಲ್ಲಿ ಶಿಕ್ಷಕರ ಬೇಡಿಕೆಗೆ ಸ್ಪಂಧಿಸಿದ್ದಾರೆ. ಅರುಣ ಶಹಾಪೂರ ಒಳ್ಳೆಯ ಕೆಲಸಗಾರ ಎಂದರು.

ಪರಿಷತ್ ಮಾಜಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ,ಖಾಸಗಿ ಶಾಲೆಗಳಿಗೆ ಯಡಿಯೂರಪ್ಪ ಅನುದಾನ ನೀಡಿದ್ದಾರೆ. ಜ್ವಲಂತ ಸಮೊ ಪರಿಹಾರ ನೀಡಿರುವುದು ಬಿಜೆಪಿ. ವಿರೋಧ ಪಕ್ಷದ ಅಭ್ಯರ್ಥಿ ರಾಜಕೀಯ ಪುನರಕ್ಕಾಗಿ ಸ್ಪರ್ಧೆ ಮಾಡಿದ್ದಾರೆ. ವಿನಃ ಶಿಕ್ಷಣದ ಅಭಿವೃದ್ಧಿಗೆ ಸ್ಪರ್ಧೆ ಮಾಡಿಲ್ಲ ಎಂದರು.

ಪದವೀಧರ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ನಾಯಿಕ. ವಾದಿಗಳಿಗೆ ಸಹಾಯವಾಗಿ ಯಡಿಯೂರಪ್ಪ 10 ಕೋಟಿ ರೂ ಅನುದಾನ ನೀಡಿದ್ದಾರೆ. ಕೊರೊನಾ ಸಂಕಷ್ಟ ಕಾಲದಲ್ಲಿ ಸಾಧ್ಯವಾದಷ್ಟು ಸಹಾಯ ಮಾಡಲಾಗಿದೆ. ಮತ್ತೊಮ್ಮೆ ಅವಕಾಶ ಕಲ್ಪಿಸಬೇಕು ಎಂದರು.

ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ ಶಹಾಪೂರ ಮಾತನಾಡಿ, ಕಾಲ್ಪನಿಕ ವೇತನ ತಡೆಹಿಡಿದಿದ್ದು ಕಾಂಗ್ರೆಸ್ ಪಕ್ಷ. ಶಿಕ್ಷಕರೆಗೆ  ಹಾಡಿಸ್ದುಯ ಬಿಜೆಪಿ. ಹೀಗಾಗಿ ಬರುವ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಬೇಕು ಎಂದರು.

ವೇದಿಕೆ ಮೇಲೆ ಸಚಿವ ಮುರಗೇಶ ನಿರಾಣಿ. ಸಂಸದ ಅಣ್ಣಾಸಾಹೇಬ ಜೊಲ್ಲೆ. ಶಾಸಕರಾದ  ಪಿ.ರಾಜೀವ. ದುರ್ಯೋಧನ ಐಹೋಳೆ. ಮಹೇಶ ಕುಮಟೋಳ್ಳಿ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ. ಪರಿಷತ್ ಮಾಜಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ. ಪುರಸಭೆ ಅಧ್ಯಕ್ಷ ಪ್ರವೀಣ ಕಾಂಬಳೆ. ಜಗದೀಶ ಕವಟಗಿಮಠ. ಬಿಜೆಪಿ ಅಭ್ಯರ್ಥಿ ಅರುಣ ಶಹಾಪೂರ. ಹಣಮಂತ ನಿರಾಣಿ. ವೈ ನಾರಾಯಣಸ್ವಾಮಿ. ಸಂಜಯ ಕವಟಗಿಮಠ. ಶಶಿಕಾಂತ ನಾಯಿಕ.ದುಂಡಪ್ಪ ಬೆಂಡವಾಡೆ. ಅಶೋಕ ಹರಗಾಪೂರೆ. ಬರತೇಶ ಬನವಣೆ. ಮಲ್ಲಿಕಾರ್ಜುನ ಕೋರೆ ಮುಂತಾದವರು ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.