ಶೆಟ್ಟರ ಮನೆಯೆದುರು ಮುತಾಲಿಕ ಪ್ರತಿಭಟನೆ
ಪ್ರಾರ್ಥನಾ ಮಂದಿರಗಳ ಮೈಕ್‌ಗಳಿಂದ ಶಬ್ದ ಮಾಲಿನ್ಯ ; ಮೈಕ್ ತೆರವುಗೊಳಿಸುವಲ್ಲಿ ಬಿಜೆಪಿ ಸರಕಾರ ವಿಫಲ
Team Udayavani, Jun 9, 2022, 9:55 AM IST
ಹುಬ್ಬಳ್ಳಿ: ಪ್ರಾರ್ಥನಾ ಮಂದಿರಗಳ ಮೈಕ್‌ಗಳಿಂದ ಶಬ್ದ ಮಾಲಿನ್ಯ ಉಂಟಾಗುತ್ತಿದ್ದು, ಅದರಲ್ಲೂ ಆಜಾನ್ ಗೆ ಬಳಸುವ ಮೈಕ್ ಸಾಕಷ್ಟು ಸಮಸ್ಯೆ ಉಂಟು ಮಾಡುತ್ತಿದ್ದು, ಇವುಗಳನ್ನು ತೆರವುಗೊಳಿಸುವಲ್ಲಿ ಬಿಜೆಪಿ ಸರಕಾರ ವಿಫಲವಾಗಿ ಎಂದು ಆರೋಪಿಸಿ ಇಲ್ಲಿನ ಬದಾಮಿ ನಗರದಲ್ಲಿರುವ ಮಾಜಿ ಸಿಎಂ ಜಗದೀಶ ಶೆಟ್ಟರ ನಿವಾಸ ಮುಂಭಾಗದಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಶಬ್ದ ಮಾಲಿನ್ಯ ಉಂಟು ಮಾಡುವ ಮೈಕ್‌ಗಳನ್ನು ತೆರವುಗೊಳಿಸುವಂತೆ ಸುಪ್ರಿಂ ಕೋರ್ಟ್ ಸ್ಪಷ್ಟ ಆದೇಶ ನೀಡಿದೆ. ಆದರೆ ಸರಕಾರಗಳನ್ನು ಇದನ್ನು ಅನುಷ್ಠಾನಕ್ಕೆ ತರುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿವೆ. ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರಕಾರ ಕೂಡ ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ. ಈ ಕುರಿತು ಹಲವು ಬಾರಿ ಎಚ್ಚರಿಸುವ, ಹೋರಾಟಗಳನ್ನು ಮಾಡಿದರೂ ಪ್ರಯೋಜನವಾಗಿಲ್ಲ. ಕೇವಲ ಅಧಿಕಾರಕ್ಕಾಗಿ ಮಾತ್ರ ಹಿಂದುತ್ವದ ಅಜೆಂಡಾ ಬಿಜೆಪಿ ಅನುಸರಿಸುತ್ತಿದೆ ಎಂದು ಆರೋಪಿಸಲಾಯಿತು.
ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಮಾತನಾಡಿ, ಬಿಜೆಪಿ ಶಾಸಕರು ಕೇವಲ ಅಧಿಕಾರಕ್ಕಾಗಿ ಮಾತ್ರ ಹಿಂದುತ್ವದ ಹೆಸರು ಬಳಸಿದ್ದಾರೆ ಎನ್ನುವುದು ಜನರಲ್ಲಿ ಖಾತ್ರಿಯಾಗಿದೆ. ಚುನಾವಣೆ ಪೂರ್ವದಲ್ಲಿ ಹಿಂದುತ್ವದ ಕೆಲಸ ಮಾಡುವುದಾಗಿ ನಂಬಿಸಿ ಅಧಿಕಾರಕ್ಕೆ ಬಂದ ನಂತರ ವಂಚಿಸುವ ಕೆಲಸ ಆಗಿದೆ. ಕಾಟಾಚಾರಕ್ಕೆಂಬಂತೆ ಸರಕಾರ ನೋಟಿಸ್ ಜಾರಿ ಮಾಡಿದೆ. ಆದರೆ ಬೆಳಿಗ್ಗೆ 5 ಗಂಟೆಯ ಆಜಾನ್ ನಿಲ್ಲಿಸಿಲ್ಲ. ಇದನ್ನು ಕಡ್ಡಾಯವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. ಈ ಕುರಿತು ಹಿಂದೂಗಳು ನಿರಂತರ ಹೋರಾಟ ಮಾಡುತ್ತಿದ್ದರೂ ಬಿಜೆಪಿ ಶಾಸಕರು ಮಾತ್ರ ಯಾವುದೇ ಧ್ವನಿ ಎತ್ತುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಹಿಂದೂಪರ ಸಂಘಟನೆಗಳ ಹೋರಾಟ, ಪರಿಶ್ರಮ ದೊಡ್ಡದು. ಅದರೆ ಅಧಿಕಾರಕ್ಕೆ ಬಂದ ನಂತರ ಎಲ್ಲವನ್ನೂ ಮರೆತಿದ್ದಾರೆ. ಹೋರಾಟ, ಪ್ರತಿಭಟನೆ ಮಾಡಿ ಕೇಸ್ ಹಾಕಿಸಿಕೊಂಡು ಕೋರ್ಟ್‌ಗಳಿಗೆ ನಾವು ಅಲೆದಾಡಬೇಕು. ಇವರು ಅಧಿಕಾರ ಪಡೆದು ಐಷಾರಾಮಿ ಜೀವನದಲ್ಲಿ ನೀಡಿದ ಭರವಸೆಗಳು, ಮಾಡಬೇಕಾದ ಕಾರ್ಯಗಳನ್ನು ಮರೆತು ಅಧಿಕಾರ ಅನುಭವಿಸುತ್ತಿದ್ದಾರೆ. ಇದನ್ನು ಎಚ್ಚರಿಸುವ ನಿಟ್ಟಿನಲ್ಲಿ ವಿವಿಧ 10 ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಶಾಸಕರ ಕಚೇರಿ ಮುಂಭಾಗದಲ್ಲಿಯೇ ಹೋರಾಟ ಹಮ್ಮಿಕೊಳ್ಳಲಾಗಿದೆ. ಸುಪ್ರಿಂ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸರಕಾರ ನಿರ್ಲಕ್ಷ್ಯ ತೋರಿದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಗೆ ತಕ್ಕ ಉತ್ತರ ನೀಡಲಾಗುವುದು. ಮುಂದೆ ಬಿಜೆಪಿ ಎಲ್ಲಾ ಶಾಸಕರ ಮನೆ ಮುಂಭಾಗ ಲೌಡ್‌ಸ್ಪೀಕರ್ ಅಳವಡಿಸಿ ಭಜನೆ ಮಾಡಲಾಗುವುದು ಎಂದು ಪ್ರಮೋದ ಮುತಾಲಿಕ ಎಚ್ಚರಿಸಿದರು.
ಪ್ರಮುಖರಾದ ಅಣ್ಣಪ್ಪ ದಿವಟಗಿ, ಬಸವರಾಜ ದುರಗದ, ಮಂಜುನಾಥ ಕಾಟ್ಕರ, ಪ್ರವೀಣ, ರಾಜು, ಮಹಾಂತೇಶ ಸೇರಿದಂತೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
MUST WATCH
ಹೊಸ ಸೇರ್ಪಡೆ
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.