ಕಾಂಗ್ರೆಸ್‌ಗೆ ಅಧಿಕಾರಕ್ಕೇರುವ ಭ್ರಮೆ: ಬಿಎಸ್‌ವೈ
ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ; ಪ್ರತಿ ಜಿಲ್ಲೆಗೆ ಸಂಚರಿಸಿ ಪಕ್ಷ ಸಂಘಟಿಸುವೆ
Team Udayavani, Jun 9, 2022, 11:03 AM IST
ಬೆಳಗಾವಿ: ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದೇ ಬಿಟ್ಟಿದ್ದೇವೆ ಎಂಬ ಭ್ರಮೆಯಲ್ಲಿದ್ದಾರೆ. ಆ ಭ್ರಮೆಯಿಂದ ಅವರನ್ನು ಹೊರ ತರಬೇಕಾದರೆ ಎಲ್ಲ ಕಾರ್ಯಕರ್ತರೂ ಪಕ್ಷ ಸಂಘಟನೆ ಮಾಡಬೇಕಾದ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಇಲ್ಲಿಯ ಕಣಬರ್ಗಿ ರಸ್ತೆಯ ದೇಸಾಯಿ ಲಾನ್‌ನಲ್ಲಿ ವಾಯವ್ಯ ಶಿಕ್ಷಕರ ಹಾಗೂ ಪದವೀಧರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಅಧಿಕಾರಕ್ಕೆ ಬಂದು ಬಿಟ್ಟಿದ್ದೀವಿ ಎಂಬ ಭ್ರಮೆಯಲ್ಲಿದ್ದು, ಕ್ಯಾಬಿನೇಟ್‌ನಲ್ಲಿ ಯಾವ ಇಲಾಖೆ ಹಂಚಿಕೊಳ್ಳಬೇಕು ಎಂಬುದಾಗಿ ಪ್ರಯತ್ನ ನಡೆಸುತ್ತಿರುವವರಿಗೆ ತಕ್ಕ ಪಾಠ ಕಲಿಸಬೇಕು ಎಂದರು.
ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳಾ ಮೋರ್ಚಾ, ಯುವ ಮೋರ್ಚಾ, ಎಸ್‌ಸಿ-ಎಸ್‌ಟಿ ಮೊಹಲ್ಲಾಗಳಿಗೆ ತೆರಳುವುದರ ಮೂಲಕ ಪಕ್ಷ ಸಂಘಟಿಸಲು ವಿಶೇಷ ಪ್ರಯತ್ನ ಮಾಡಬೇಕು. 2023ರ ಚುನಾವಣೆಯಲ್ಲಿ 135-140 ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರಬೇಕಾಗಿದೆ. ಇನ್ನು ಮುಂದೆ ಪ್ರತಿಯೊಂದು ಜಿಲ್ಲೆಗೆ ಬಂದು ನಮ್ಮ ನಾಯಕರೊದಿಗೆ ಸಮಾಲೋಚನೆ ಮಾಡಲು ತೀರ್ಮಾನಿಸಿದ್ದೇನೆ. ನಮ್ಮೊಂದಿಗೆ ದೂರ ಇರುವ, ನಮ್ಮ ಸಂಪರ್ಕಕ್ಕೆ ಬಾರದ ನಾಯಕರ ಮನವೊಲಿಸಿ ಪಕ್ಷಕ್ಕೆ ಬರುವಂತೆ ಮಾಡಬೇಕು ಎಂದು ಮುಖಂಡರಲ್ಲಿ ಕೈಮುಗಿದು ಮನವಿ ಮಾಡಿದರು.
ಪ್ರಧಾನಿ ಮೋದಿ ದೇಶ, ವಿದೇಶ ಸುತ್ತಿ ಬಂದರೂ ಬೆಳಗ್ಗೆ 9 ಗಂಟೆಗೆ ತಮ್ಮ ಕಚೇರಿಯಲ್ಲಿ ಕಾರ್ಯ ಆರಂಭಿಸುತ್ತಾರೆ. ಎಂಟು ವರ್ಷಗಳ ಅವಧಿಯಲ್ಲಿ ಒಂದೂ ದಿನ ವಿಶ್ರಾಂತಿ ಇಲ್ಲದೇ, ರಜೆ ಪಡೆಯದೇ ದೇಶಕ್ಕಾಗಿ ದುಡಿಯುತ್ತಿರುವ ಏಕೈಕ ಪ್ರಧಾನಿ ಅವರು. ರಾತ್ರಿ 12 ಗಂಟೆಗೆ ಮಲಗಿ ಬೆಳಗ್ಗೆ 4 ಗಂಟೆಗೆ ಎದ್ದು ಕೆಲಸ ಮಾಡುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಷದವರು ಅಂತ ಹೇಳಿಕೊಳ್ಳಬೇಕಾದರೆ ನಾವು ಹೇಗೆ ನಡೆದುಕೊಳ್ಳಬೇಕು ಎಂಬ ಬಗ್ಗೆ ಪ್ರತಿಯೊಬ್ಬ ಕಾರ್ಯಕರ್ತ ವಿಚಾರ ಮಾಡಬೇಕಿದೆ ಎಂದರು.
ನಾನು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇದ್ದಾಗ ನೌಕರರ ಹಾಗೂ ಪದವೀಧರರ ಪರ ಐದನೇ, ಆರನೇ ಹಾಗೂ ಏಳನೇ ವೇತನ ಶ್ರೇಣಿ ನಿರಂತರವಾಗಿ ಜಾರಿಗೊಳಿಸಿರುವ ಹೆಮ್ಮೆ ಇದೆ. ಪ್ರತಿ ಬಾರಿ ಕೇಂದ್ರ ಸರ್ಕಾರಕ್ಕಿಂತಲೂ ಹೆಚ್ಚು ಡಿಎ ನಮ್ಮ ಸರ್ಕಾರ ನೀಡಿದೆ. ಶಿಕ್ಷಕರು, ಉಪನ್ಯಾಸಕರನ್ನು ಹೆಚ್ಚಾಗಿ ಭರ್ತಿ ಮಾಡಿದ್ದೇವೆ. ಡಿಗ್ರಿ ಕಾಲೇಜು ಉಪನ್ಯಾಸಕರ ಯುಜಿಸಿ ವೇತನ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜು ಸ್ಥಾಪನೆ, ನಂಜುಂಡಪ್ಪ ವರದಿ ಜಾರಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇವೆ ಎಂದರು.
ಪದವೀಧರ ಕ್ಷೇತ್ರದ ಹನುಮಂತ ನಿರಾಣಿ ಹಾಗೂ ಶಿಕ್ಷಕರ ಕ್ಷೇತ್ರದ ಅರುಣ ಶಹಾಪುರ ಅವರನ್ನು ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಮುದಿ ಎತ್ತು ಎಂದ ಕಾರಜೋಳ: ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ರೈತರ ಮನೆಯಲ್ಲಿ ಮುಪ್ಪಾದ ಎತ್ತುಗಳು ನೇಗಿಲು ಹೊಡೆಯಲು ಶಕ್ತಿ ಕಳೆದುಕೊಂಡಾಗ ಅವುಗಳ ಹೆಗಲು, ಮೈ ತೊಳೆದು, ಪೂಜೆ ಮಾಡಿ ಊರಿನಲ್ಲಿ ಬಿಡುತ್ತಾರೆ. ಈ ಪದ್ಧತಿ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಅಲ್ಲಿಯ ಜನ ಏನೂ ಕೆಲಸಕ್ಕೆ ಬಾರದ ಆ ಎತ್ತು (ಪ್ರಕಾಶ ಹುಕ್ಕೇರಿ) ಪೂಜೆ ಮಾಡಿ ಬಿಟ್ಟಿದ್ದಾರೆ. ಕಾಂಗ್ರೆಸ್‌ಗೆ ಬೇರೆ ಅಭ್ಯರ್ಥಿ ಸಿಗದಿದ್ದಕ್ಕೆ ಈ ಎತ್ತು ತಂದು ನಿಲ್ಲಿಸಿದ್ದಾರೆ. ಆ ಮುದಿ ಎತ್ತಿಗೆ 33 ಹೆಜ್ಜೆ ಅಷ್ಟೇ ಅಲ್ಲ, 10 ಹೆಜ್ಜೆಯೂ ನಡೆಯಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.
ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಮಾತನಾಡಿ, ಮಾತನಾ ಡಲೂ ಬರುವುದಿಲ್ಲ, ನಡೆಯಲೂ ಬರುವುದಿಲ್ಲ ಅಂಥ ವರು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಈ ಮಾತನ್ನು ನಾನು ಏಕೆ ಹೇಳುತ್ತಿದ್ದೇನೆ ಎಂಬುದು ಅರ್ಥ ಆಗಿರಬಹುದು ಅಲ್ಲ ಎಂದು ಪರೋಕ್ಷವಾಗಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಅವರನ್ನು ಟೀಕಿಸಿದರು.
ರಾಜ್ಯಸಭೆ ಮತ್ತು ವಿಧಾನ ಪರಿಷತ್‌ಗೆ ಘನತೆ, ಗೌರವ ಇದ್ದು, ಅದೊಂದು ಚಿಂತಕರ ಚಾವಡಿ. 12 ವರ್ಷಗಳ ಅವಧಿಯಲ್ಲಿ ಪರಿಷತ್‌ನಲ್ಲಿ ಶಿಕ್ಷಕರ ಪರವಾಗಿ ಧ್ವನಿ ಎತ್ತಿದ ಏಕೈಕ ಸದಸ್ಯ ಅರುಣ ಶಹಾಪುರ. ಜತೆಗೆ ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ನಿರಾಣಿ ಮತ್ತೆ ಕಾರ್ಖಾನೆಗಳನ್ನು ಸ್ಥಾಪನೆ ಮಾಡಲಿ. ನಿರಾಣಿಗೆ ಮತ್ತೂಮ್ಮೆ ಅವಕಾಶ ನೀಡಬೇಕು ಎಂದರು.
ಪದವೀಧರ ಕ್ಷೇತ್ರದ ಅಭ್ಯರ್ಥಿ ಹನುಮಂತ ನಿರಾಣಿ ಮಾತನಾಡಿ, ಪ್ರಾಮಾಣಿಕವಾಗಿ ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತೇನೆ. ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ ಸೇವೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು.
ಶಿಕ್ಷಕರ ಮತಕ್ಷೇತ್ರದ ಅಭ್ಯರ್ಥಿ ಅರುಣ ಶಹಾಪುರ ಮಾತನಾಡಿ, ಶಿಕ್ಷಕರ ಪರವಾಗಿ ಧ್ವನಿ ಎತ್ತುವ ಮೂಲಕ ಅಭಿವೃದ್ಧಿ ಮಾಡಿದ ಏಕೈಕ ರಾಜಕಾರಣಿ ಬಿ.ಎಸ್. ಯಡಿಯೂರಪ್ಪ. ಯಡಿಯೂರಪ್ಪ ಗುಡುಗಿದರೆ ನಡುಗುವುದು ವಿಧಾನಸೌಧ ಎಂಬ ಮಾತಿದೆ. ಈ ಬಾರಿಯೂ ಮತ್ತೂಮ್ಮೆ ತಮ್ಮ ಸೇವೆ ಮಾಡಲು ಅವಕಾಶ ನೀಡಬೇಕು. ಪ್ರತಿಸ್ಪರ್ಧಿ ಪ್ರಕಾಶ ಹುಕ್ಕೇರಿ 33 ಹೆಜ್ಜೆ ಹಾಕಲಿ ನೋಡೋಣ ಎಂದು ವ್ಯಂಗ್ಯವಾಡಿದರು.
ಬೆಳಗಾವಿ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ ಮಾತನಾಡಿದರು. ಸಚಿವರಾದ ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದೆ ಮಂಗಲಾ ಅಂಗಡಿ, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಶಾಸಕ ಅನಿಲ್ ಬೆನಕೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.