ನಡೆಯಿತು ಸ್ವಯಂ ವಿವಾಹ: ತನ್ನನ್ನು ತಾನೇ ವಿವಾಹವಾದ ಕ್ಷಮಾ ಬಿಂದು
Team Udayavani, Jun 9, 2022, 11:23 AM IST
ವಡೋದರಾ: ಕಳೆದ ಕೆಲವು ದಿನಗಳಿಂದ ಭಾರೀ ಸುದ್ದಿಯಲ್ಲಿರುವ ಗುಜರಾತ್ ನ ಕ್ಷಮಾ ಬಿಂದು ಮದುವೆ ನಡೆದಿದೆ. ವಡೋದರಾದ ಯುವತಿ ಕ್ಷಮಾ ಬಿಂದು ತನ್ನನ್ನು ತಾನೇ ವಿವಾಹವಾಗಿದ್ದಾಳೆ. ಇದು ಭಾರತದ ಪ್ರಥಮ ಸ್ವಯಂ ವಿವಾಹ ಪ್ರಕರಣವಾಗಿದೆ.
ಬಿಜೆಪಿ ನಾಯಕಿಯೊಬ್ಬರು ಆಕೆಯ ಮದುವೆಯನ್ನು ವಿರೋಧಿಸಿದ ನಂತರ ಮತ್ತು ದೇವಸ್ಥಾನದಲ್ಲಿ ಮದುವೆಯಾಗಲು ಅನುಮತಿಸುವುದಿಲ್ಲ ಎಂದು ಹೇಳಿದ ಕಾರಣದಿಂದ ಅನಗತ್ಯ ವಿವಾದವನ್ನು ತಪ್ಪಿಸಲು ಕ್ಷಮಾ ಬಿಂದು ನಿಗದಿತ ದಿನಾಂಕಕ್ಕಿಂತ ಕೆಲವು ದಿನಗಳ ಮುಂಚಿತವಾಗಿ ವಿವಾಹವಾದರು. ಈ ಮೊದಲು ಜೂನ್ 11ರಂದು ಮದುವೆಯಾಗಲು ನಿಶ್ಚಯಿಸಿದ್ದರು.
ಇದನ್ನೂ ಓದಿ:ರಂಗೇರಿದ ರಾಜ್ಯಸಭೆ ಚುನಾವಣೆ ಕಣ: ಶಾಸಕರನ್ನು ರೆಸಾರ್ಟ್ ಗೆ ಸ್ಥಳಾಂತರಿಸಿದ ಜೆಡಿಎಸ್!
ವಿವಾಹದ ನಂತರ ವೀಡಿಯೊದಲ್ಲಿ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ. ಬೆಂಬಲ ಮತ್ತು ಪ್ರೋತ್ಸಾಹಕ್ಕೆ ಕೃತಜ್ಞರಾಗಿರುತ್ತೇನೆ ಎಂದು ಹೇಳಿದರು. “ನನಗೆ ಸಂದೇಶ ಕಳುಹಿಸಿದ ಮತ್ತು ನನ್ನನ್ನು ಅಭಿನಂದಿಸಿದ ಮತ್ತು ನಾನು ನಂಬಿದ್ದಕ್ಕಾಗಿ ಹೋರಾಡುವ ಶಕ್ತಿಯನ್ನು ನೀಡಿದ ಎಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ಅವರು ಫೇಸ್ ಬುಕ್ ನಲ್ಲಿ ತಿಳಿಸಿದ್ದಾರೆ.
ಕ್ಷಮಾ ಬಿಂದು ಅವರು ಸಂಪ್ರದಾಯಗಳನ್ನು ಪಾಲಿಸಿಯೇ ಸ್ವಯಂ ವಿವಾಹವಾದರು. ಹಳದಿ ಕಾರ್ಯಕ್ರಮ, ಮೆಹಂದಿ ಕಾರ್ಯಕ್ರಮಗಳೂ ನಡೆದಿದ್ದವು. ವಿವಾಹದ ಬಳಿಕ ಹನಿಮೂನ್ ಗೆ ಎರಡು ವಾರಗಳ ಕಾಲ ಗೋವಾಗೆ ಹೋಗುವುದಾಗಿ ಕ್ಷಮಾ ಬಿಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.