ಸದನ ಸಮಿತಿ ನಿಯಮ ಉಲ್ಲಂಘನೆ: ಆಲ್ಕೋಡ್
Team Udayavani, Jun 9, 2022, 3:13 PM IST
ಲಿಂಗಸುಗೂರು: ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಹಿತ ಕಾಯುವಂತೆ 1989-90ರಲ್ಲಿ ವಿಧಾನ ಪರಿಷತ್ ಸದನ ಸಮಿತಿ ಜಾರಿಗೊಳಿಸಿದ ನಿಯಮಗಳನ್ನು ಹಟ್ಟಿ ಚಿನ್ನದ ಗಣಿ ಅಧ್ಯಕ್ಷರು ಹಾಗೂ ಅಧಿಕಾರಿಗಳು ಉಲ್ಲಂಘಿಸಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ ಆಲ್ಕೋಡ್ ಆರೋಪಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಟ್ಟಿಚಿನ್ನದಗಣಿಯಲ್ಲಿ 274 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿರುವುದು ಸಂತಸದ ಸಂಗತಿ. ಆದರೆ, ಹಟ್ಟಿ ಚಿನ್ನದ ಗಣಿಗಾಗಿ ಜಮೀನು ಕಳೆದುಕೊಂಡು ತೊಂದರೆ ಎದುರಿಸುತ್ತಿರುವವರು ಲಿಂಗಸುಗೂರು ತಾಲೂಕಿನ ಜನ. ಹುದ್ದೆಗಳಲ್ಲಿ ನೇಮಕಾತಿಯಲ್ಲಿ ಅಕ್ಕಪಕ್ಕದ ಜಿಲ್ಲೆಯವರಿಗೆ ಆದ್ಯತೆ ನೀಡುತ್ತಿರುವುದು ಸರಿಯಾದ ಬೆಳವಣಿಗೆಯಲ್ಲ. ನೇಮಕಾತಿಯಲ್ಲಿ ಮೊದಲು ಈ ತಾಲೂಕಿನ ನಿರುದ್ಯೋಗ ಯುವಕರಿಗೆ ಆದ್ಯತೆ ನೀಡಬೇಕು. ಎರಡನೇ ಆದ್ಯತೆ ಜಿಲ್ಲೆಯ ಎಲ್ಲ ತಾಲೂಕಿನವರಿಗೆ ನೀಡಬೇಕು ಎಂದರು.
ಹಟ್ಟಿಚಿನ್ನದಗಣಿಯಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು. ಕಾರ್ಮಿಕರಿಗೆ ಗೌರವಯುತ ಬದುಕು ಸಾಗಿಸಲು ಅಗತ್ಯ ಸೌಲಭ್ಯ ಒದಗಿಸಬೇಕು. 1989-90ನೇ ಸಾಲಿನಲ್ಲಿ ವಿಧಾನ ಪರಿಷತ್ ಸದನ ಸಮಿತಿಯಲ್ಲಿ ನಿಯಮಗಳನ್ನು ಜಾರಿಗೆ ತರಲಾಗಿದೆ. ಆದರೆ, ಹಟ್ಟಿಚಿನ್ನದಗಣಿ ಅಧಿಕಾರಿಗಳನ್ನು ಹಾಗೂ ಈವರೆಗೂ ಅಧಿಕಾರ ನಡೆಸಿರುವ ಅಧ್ಯಕ್ಷರು ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಕಾರ್ಮಿಕ ಕಾಯ್ದೆ ಪ್ರಕಾರ ಗಣಿಯಲ್ಲಿನ ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ, ಆರೋಗ್ಯ ಹಾಗೂ ಸಕಲ ಸೌಲಭ್ಯ ನೀಡಬೇಕು ಎಂದರು.
ಈ ನೇಮಕಾತಿ ಅಧಿಸೂಚನೆ ರದ್ದುಪಡಿಸಿ ತಾಲೂಕು ಹಾಗೂ ಜಿಲ್ಲೆಯವರಿಗೆ ಆದ್ಯತೆ ನೀಡಬೇಕು. ಗಣಿ ಎಂಡಿ ಅವರು ತಿಂಗಳಲ್ಲಿ ನಾಲ್ಕು ಭಾರಿ ಹಟ್ಟಿ ಚಿನ್ನದ ಗಣಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.