ತೂಗು ಸೇತುವೆ ಉದ್ಘಾಟಿಸಿ ಚರಂಡಿಗೆ ಬಿದ್ದ ಗಣ್ಯರು : ವಿಡಿಯೋ ವೈರಲ್ ! ಕಾರಣ ಇಷ್ಟೇ…
Team Udayavani, Jun 9, 2022, 6:26 PM IST
ಮೆಕ್ಸಿಕೋ : ಆಗಷ್ಟೇ ನಿರ್ಮಾಣಗೊಂಡಿದ್ದ ತೂಗು ಸೇತುವೆಯೊಂದು ಉದ್ಘಾಟನೆ ನಡೆಸಿದ ವೇಳೆ ಕುಸಿದು ಬಿದ್ದಿದೆ ಪರಿಣಾಮ ಸೇತುವೆಯ ಉದ್ಘಾಟನೆಗೆ ಬಂದಿದ್ದ ನಗರ ಪಾಲಿಕೆ ಮೇಯರ್, ಉಪಮೇಯರ್, ಹಾಗೂ ಪಾಲಿಕೆ ಸದಸ್ಯರು ಸೇರಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿ ಚರಂಡಿಗೆ ಬಿದ್ದಿದ್ದಾರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸದ್ಯ ಸೇತುವೆ ಕುಸಿತಗೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಅಂದಹಾಗೆ ಘಟನೆ ನಡೆದಿರುವುದು ಮೆಕ್ಸಿಕೋದ ಕ್ಯುರ್ನಾವಾಕಾ ನಗರದಲ್ಲಿ ಈ ಹಿಂದೆ ಇದ್ದ ಸೇತುವೆ ಶಿಥಿಲಗೊಂಡಿದ್ದರಿಂದ ಅದನ್ನು ಕೆಡವಿ ಹೊಸ ತೂಗುಸೇತುವೆ ನಿರ್ಮಾಣ ಮಾಡಲಾಗಿದೆ. ಮರದ ಹಲಗೆ ಕಬ್ಬಿಣದ ಸಲಾಕೆಗಳನ್ನು ಉಪಯೋಗಿಸಿ ನೂತನ ತೂಗು ಸೇತುವೆ ನಿರ್ಮಾಣ ಮಾಡಲಾಗಿದೆ, ನಗರ ಪಾಲಿಕೆಯ ಮೇಯರ್ ಇದರ ಉದ್ಘಾಟನೆಯನ್ನು ಮಾಡಿ ತೂಗು ಸೇತುವೆಯಲ್ಲಿ ನಡೆದಿದ್ದಾರೆ. ಈ ವೇಳೆ ಅವರ ಜೊತೆ ಇದ್ದ ಪಾಲಿಕೆಯ ಉಪ ಮೇಯರ್, ಪಾಲಿಕೆ ಸದಸ್ಯರು, ಪತ್ರಕರ್ತರು ಜೊತೆಗೆ ಉದ್ಘಾಟನಾ ಸಮಾರಂಭಕ್ಕೆ ಬಂದಿದ್ದರು ಸೇರಿ ಇಪ್ಪತ್ತಕ್ಕೂ ಹೆಚ್ಚು ಮಂದಿ ತೂಗು ಸೇತುವೆಯ ಮೇಲೆ ನಡೆದಿದ್ದಾರೆ, ಅಷ್ಟೋತ್ತಿಗಾಗಲೇ ತೂಗು ಸೇತುವೆ ಇಷ್ಟು ಮಂದಿಯ ಭಾರ ತಡೆಯಲಾರದೆ ಕುಸಿದು ಬಿದ್ದಿದೆ, ಇದರೊಂದಿಗೆ ಪಾಲಿಕೆಯ ಮೇಯರ್, ಉಪಮೇಯರ್, ಸದಸ್ಯರು ಕೆಲವು ಪತ್ರಕರ್ತರು ಬಿದ್ದು ಗಾಯಗೊಂಡಿದ್ದಾರೆ. ಈ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
Footbridge collapse during reopening ceremony in Mexico pic.twitter.com/Kn4X554Ydk
— Adrian Slabbert (@adrian_slabbert) June 9, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.