![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Jun 9, 2022, 10:46 PM IST
ಬೆಂಗಳೂರು: ರಾಜ್ಯಸಭೆ ಚುನಾವಣೆ ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ಯಲ್ಲಿ ಗುರುವಾರ ಬೆಂಗಳೂರಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು.
ಶುಕ್ರವಾರ ಬೆಳಗ್ಗೆ 8.30ಕ್ಕೆ ಎಲ್ಲ ಶಾಸಕರು ವಿಧಾನಸೌಧಕ್ಕೆ ಆಗಮಿಸುವಂತೆ ಸೂಚಿಸಲಾಗಿದೆ.
ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಬಿಜೆಪಿಯೊಂದು ರಾಷ್ಟ್ರೀಯ ಪಕ್ಷ. ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ. ನಮ್ಮ ಗೆಲುವಿಗೆ ಬೇಕಾದ ರಣತಂತ್ರ ರೂಪಿಸಿದ್ದೇವೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಆತ್ಮಸಾಕ್ಷಿ ಮತಕ್ಕೆ ಬಿದ್ದಿದೆ. ಆದರೆ ನಮಗೆ ಅದರ ಅಗತ್ಯವಿಲ್ಲ ಎಂದರು.
ನಮ್ಮ ಮೂವರು ಅಭ್ಯರ್ಥಿಗಳೂ ಅನಾಯಾಸವಾಗಿ ಗೆಲ್ಲುತ್ತಾರೆ ಅನ್ನುವ ವಿಶ್ವಾಸ ಇದೆ. ನಮ್ಮ ಪಕ್ಷದ ಒಂದು ಮತವೂ ಬೇರೆಯವರಿಗೆ ಹೋಗದು ಎಂದು ಹೇಳಿದರು.
ಸಭೆಯ ಬಳಿಕ ನಿರ್ಮಲಾ ಸೀತಾರಾಮನ್ ಅವರು ಪಕ್ಷದ ಎಲ್ಲ ಶಾಸಕರಿಗೂ ಭೋಜನ ಕೂಟ ಏರ್ಪಡಿಸಿದ್ದರು.
You seem to have an Ad Blocker on.
To continue reading, please turn it off or whitelist Udayavani.