ವಸತಿ ಶಾಲೆ ಅಸ್ವಸ್ಥ ಮಕ್ಕಳು ಜಿಲ್ಲಾಸ್ಪತ್ರೆಗೆ ಸ್ಥಳಾಂತರ
Team Udayavani, Jun 10, 2022, 3:50 PM IST
ವಿಜಯಪುರ: ಜಿಲ್ಲೆ ತಡವಲಗಾ ಕಸ್ತೂರಬಾ ಬಾಲಕಿಯರ ವಸತಿ ಶಾಲೆಯಲ್ಲಿ ಆಹಾರ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದ ತಡವಲಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 25 ಮಕ್ಕಳಲ್ಲಿ ಐವರನ್ನು ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಮಧ್ಯೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಧಿಕಾರಿ ಡಾ| ವಿ.ಬಿ. ದಾನಮ್ಮನವರ ಮಕ್ಕಳ ಯೋಗಕ್ಷೇಮ ವಿಚಾರಿಸಿ, ಧೈರ್ಯ ಹೇಳಿದರು.
ಇಂಡಿ ತಾಲೂಕಿನ ತಡವಲಗಾ ಗ್ರಾಮದ ಕಸ್ತೂರ ಬಾ ಗಾಂಧಿ ಬಾಲಕಿಯರ ವಸತಿ ವಿದ್ಯಾಲಯದ ವಿದ್ಯಾರ್ಥಿಗಳು ಎರಡು ದಿನಗಳ ಹಿಂದೆ ವಸತಿ ಶಾಲೆಯಲ್ಲಿ ಉಪಹಾರ ಸೇವನೆ ಬಳಿಕ 25 ಬಾಲಕಿಯರು ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ತಡವಲಗಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಅಸ್ವಸ್ಥರಾಗಿದ್ದ ಮಕ್ಕಳಲ್ಲಿ ಐವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬುಧವಾರ ಸಂಜೆ ವಿಜಯಪುರದ ಸರ್ಕಾರಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಿ, ಚಿಕಿತ್ಸೆ ಕೊಡಲಾಗುತ್ತಿದೆ.
ವಿಷಯ ತಿಳಿದ ಜಿಲ್ಲಾಧಿಕಾರಿ ಡಾ| ವಿ.ಬಿ.ದಾನಮ್ಮವರ ಗುರುವಾರ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದು, ಧೈರ್ಯ ತುಂಬಿದ್ದಾರೆ. ಬಳಿಕ ಸರ್ಕಾರಿ ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಡಾ| ಎಸ್.ಎಲ್. ಲಕ್ಕಣ್ಣವರ ಅವರಿಂದ ಮಕ್ಕಳ ಆರೋಗ್ಯದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.